ಕೊಪ್ಪಳದಲ್ಲಿ ಬಿಎಸ್‌ಪಿಎಲ್ ಕೈಗಾರಿಕೆ ಸ್ಥಾಪನೆ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ಕೊಪ್ಪಳ ಸಮೀಪದಲ್ಲಿ ಬಿಎಸ್‌ಪಿಎಲ್ ಕೈಗಾರಿಕೆ ಸ್ಥಾಪನೆಯ ಎಲ್ಲ ಸಿದ್ಧತೆಗಳನ್ನು ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಡಿಸಿ ಅವರಿಗೆ ಸೂಚನೆ ನೀಡಿದ್ದಾರೆ.

ಕೊಪ್ಪಳ ಸಮೀಪದಲ್ಲಿ ಬಿಎಸ್‌ಪಿಎಲ್ ಕೈಗಾರಿಕಾ ಸ್ಥಾಪನೆ ಮಾಡಿದಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರು ಸಚಿವರನ್ನು ಒಳಗೊಂಡಂತೆ ಸರ್ವ ಪಕ್ಷಗಳ ನಿಯೋಗವು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಈ ಹಿನ್ನೆಲೆಯಲ್ಲಿ ಸಿಎಂ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿ ಬಲ್ಲೊಟ್ಟ ಕಂಪನಿಯ ಹೊಸ ಕೈಗಾರಿಕೆ ಸ್ಥಾಪನೆಯ ಸಿದ್ಧತೆಯನ್ನು ತಕ್ಷಣ ನಿಲ್ಲಿಸುವಂತೆ ಸ್ಥಳದಲ್ಲಿಯೇ ನಿರ್ದೇಶನ ನೀಡಿದ್ದಾರೆ. ಸಿದ್ಧತೆ ಬಂದು ಮಾಡಿದ ವರದಿಯನ್ನು ತಮಗೆ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ ಸರ್ಕಾರದ ವತಿಯಿಂದ ಕೈಗಾರಿಕೆ ಸ್ಥಾಪನೆಯ ತಡೆಯುವ ಕುರಿತಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿಯೂ ಸರ್ವ ಪಕ್ಷಗಳ ನಿಯೋಗಕ್ಕೆ ಸಿಎಂ ಭರವಸೆ ನೀಡಿದ್ದಾರೆ.

ಸರ್ವಪಕ್ಷಗಳ ನಿಯೋಗದಲ್ಲಿ ಜಿಲ್ಲಾ ಉಸ್ತುವಾರಿ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ, ರಾಘವೇಂದ್ರ ಹಿಟ್ನಾಳ್‌, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಶಾಸಕರಾದ ಗಾಲಿ ಜನಾರ್ಧನ್ ರೆಡ್ಡಿ, ಎಂಎಲ್ಸಿ ಹೇಮಲತಾ ನಾಯಕ್, ಬಸನಗೌಡ ಬಾದರ್ಲಿ,ಮಾಜಿ ಸಚಿವ ಅಮರೇಗೌಡ ಬಯ್ಯಾಪೂರ, ಮಾಜಿ ಸಂಸದರಾದ ಸಂಗಣ್ಣ ಕರಡಿ, ಶಿವರಾಮೇಗೌಡ, ಮಾಜಿ ಶಾಸಕ ಕೆ ಶರಣಪ್ಪ, ಮಾಜಿ ಎಂಎಲ್ಸಿ ಕರಿಯಣ್ಣ ಸಂಗಟಿ, ಮಾಜಿ ಶಾಸಕರಾದ ಪರಣ್ಣ ಮನವಳ್ಳಿ, ಹಸನಸಾಬ ದೋಟಿಹಾಳ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ್ ವೀರೇಶ್ ಮಹಾಂತಯ್ಯನಮಠ, ಡಾ. ಬಸವರಾಜ ಕ್ಯಾವಟರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಏನಿದು ವಿವಾದ?

ಕಳೆದ ಕೆಲ ತಿಂಗಳ ಹಿಂದೆ ಕೊಪ್ಪಳ ಸಮೀಪದಲ್ಲಿ ಬಿಎಸ್‌ಪಿಎಲ್ ಬೃಹತ್ ಉಕ್ಕು ಕೈಗಾರಿಕಾ ಘಟಕ ಈ ಹಿಂದೆ ಸರ್ಕಾರವೇ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಒಡಂಬಡಿಕೆಗೆ ಒಪ್ಪಿಗೆ ನೀಡಿತ್ತು. ಇದು ಜಿಲ್ಲೆಯ ಜನರಲ್ಲಿ ಭಾರಿಯ ಸಮಾಧಾನವನ್ನು ತರಿಸಿತು.

ಕೊಪ್ಪಳದಲ್ಲಿ ಕೈಗಾರಿಕೆ ಸ್ಥಾಪನೆ ವಿರೋಧಿಸಿ ಹೋರಾಟಗಳು ನಡೆದಿದ್ದವು. ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿಯೇ ಹೋರಾಟ ಬಹುದೊಡ್ಡ ಸ್ವರೂಪವನ್ನು ಪಡೆದುಕೊಂಡಿತ್ತು. ಕೈಗಾರಿಕೆ ಸ್ಥಾಪನೆ ರದ್ದತಿ ಆದೇಶದ ಪ್ರತಿಯೊಂದಿಗೆ ಜಿಲ್ಲೆಗೆ ಆಗಮಿಸುವಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳಿಗೆ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...