ಅನರ್ಹ ಬಿಪಿಎಲ್ ಕಾರ್ಡ್‌ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ, ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಸಿಎಂ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಈ ವೇಳೆ ಸಿಎಂ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಿದರು.

“ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಿ” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು” ಎಂದರು.

“ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ” ಎಂದು ಹೇಳಿದರು.

“ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಇದೇ ವೇಳೆ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...