ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

Date:

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಪರೀಕ್ಷೆಗಳನ್ನು ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಅವರು ಇಂದು (ಸೆ.25) ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು.

ನೇಮಕಾತಿ ಪ್ರಕ್ರಿಯೆಗಳ ವಿಳಂಬದ ಕುರಿತು, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ಸೂಚಿಸಲಾಯಿತು.

ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲಾಷ್‌ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಸಭೆಗೆ ವಿವರಿಸಲಾಯಿತು.

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಹ, ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸೂಚಿಸಿದರು.

ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕೆಂದು ಸೂಚನೆ ನೀಡಲಾಯಿತು.

ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್ ಕೆ ಪಾಟೀಲ, ಈಶ್ವರ್‌ ಖಂಡ್ರೆ, ಕೆ ಸುಧಾಕರ್‌, ಡಾ. ಎಂ ಸಿ ಸುಧಾಕರ್‌, ಎನ್ ಎಸ್ ಬೋಸರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...