ತುಪ್ಪ, ಪನೀರ್ ಸೇರಿ ‘ನಂದಿನಿ’ಯ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

Date:

ಪ್ರಸ್ತುತ, ಬದಲಾಗುತ್ತಿರುವ ಗ್ರಾಹಕರ ಜೀವನಶೈಲಿ ಹಾಗೂ ಆಹಾರ ಅಭಿರುಚಿಗಳನ್ನು ಪರಿಗಣಿಸಿ ‘ನಂದಿನಿ’ ಬ್ರ್ಯಾಂಡ್‌ನಲ್ಲಿ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲಾಗುತ್ತಿದ್ದು, ಈ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜ.23) ವಿಧಾನಸೌಧದ ಕಚೇರಿಯಲ್ಲಿ ಲೋಕಾರ್ಪಣೆ ಮಾಡಿದರು.

ಕಳೆದ 5 ದಶಕಗಳಿಂದ ಗ್ರಾಹಕರ ಅಭಿರುಚಿ ಮತ್ತು ಅಗತ್ಯಗಳಿಗೆ ಅನುಗುಣವಾಗಿ ‘ನಂದಿನಿ’ ಬ್ರ್ಯಾಂಡ್‌ನಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ (ಕೆಎಂಎಫ್) ಸಂಸ್ಥೆಯ 175ಕ್ಕೂ ಹೆಚ್ಚು ಉತ್ಕೃಷ್ಟ ಗುಣಮಟ್ಟದ ಹಾಲು ಹಾಗೂ ಹಾಲಿನ ಉತ್ಪನ್ನಗಳು ಮಾರುಕಟ್ಟೆಯಲ್ಲಿದೆ.

nandini1

ಇದನ್ನು ಓದಿದ್ದೀರಾ? ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಮಾದರಿಗಳ ಪರಿಶೀಲನೆಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ರಾಜ್ಯದ ಮಾತ್ರವಲ್ಲದೆ ಹೊರರಾಜ್ಯ ಮತ್ತು ಹೊರದೇಶಗಳಲ್ಲಿಯೂ ಸಹ ವಿಶ್ವಾಸ ಗಳಿಸಿರುವ ಪ್ರತಿಷ್ಠಿತ ಹಾಲಿನ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿರುವ ನಂದಿನಿ ಇಂದಿನ ಜನರ ಜೀವನಶೈಲಿಗೆ ತಕ್ಕುದಾದ ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಿದೆ. ಜತೆಗೆ ನಕಲಿ ಮತ್ತು ಕಲಬೆರಕೆ ತಡೆಯಲು ಕ್ಯೂಆರ್ ಕೋಡ್ ಭದ್ರತೆಯೂ ಈ ಹೊಸ ಉತ್ಪನ್ನಗಳಲ್ಲಿದೆ. ಈ ಕೋಡ್‌ಗಳನ್ನು ಸ್ಕ್ಯಾನ್ ಮಾಡುವ ಮೂಲಕ ಗ್ರಾಹಕರು ಉತ್ಪನ್ನದ ಅಸಲಿ-ನಕಲಿ ದೃಢೀಕರಣ, ಉತ್ಪಾದನೆ ಮತ್ತು ವಿತರಣಾ ಮಾಹಿತಿಯನ್ನು ಸುಲಭವಾಗಿ ಪರಿಶೀಲಿಸಬಹುದು.

nandini2
nandini3

ಗುಡ್ ಲೈಫ್ ಉಪಬ್ರ್ಯಾಂಡ್‌ನಲ್ಲಿ ಅಧಿಕ ಸುವಾಸನೆಯ ‘ಹೈ ಆರೋಮ ತುಪ್ಪ’, ಪರ್ಲ್ ಪೆಟ್ ಜಾರ್ (Pearl PET Jar) ರೂಪದಲ್ಲಿ ನಂದಿನಿ ಶುದ್ಧ ತುಪ್ಪ, ಮೀಡಿಯಂ ಫ್ಯಾಟ್ ಪನೀರ್, ಹೆಚ್ಚಿನ ಪ್ರೋಟಿನ್ ಅಂಶವುಳ್ಳ ಹೊಸ ಮಾದರಿಯ ಎನ್-ಪ್ರೋ ಮಿಲ್ಕ್ (ಹಾಲು), ಪ್ರೋಬಯಾಟಿಕ್ ಮೊಸರು, ಪ್ರೊಬಯಾಟಿಕ್ ಮಾವಿನ ಲಸ್ಸಿ, ಪ್ರೊಬಯಾಟಿಕ್ ಸ್ಟ್ರಾಬೆರಿ ಲಸ್ಸಿ, ನಂದಿನಿ ಡೈರಿ ವೈಟ್ನರ್ ಹಾಲಿನ ಪುಡಿ, ಬಹು ಬೇಡಿಕೆಯುಳ್ಳ ಹತ್ತು ರೂಪಾಯಿಯ ಹಸುವಿನ ಹಾಲು ಮತ್ತು ಮೊಸರು ಉತ್ಪನ್ನಗಳನ್ನು ಹೊಸದಾಗಿ ಅಭಿವೃದ್ಧಿಪಡಿಸಿದೆ. ಈ ಉತ್ಪನ್ನಗಳನ್ನು ಸಿಎಂ ಬಿಡುಗಡೆಗೊಳಿಸಿದರು.

nandini4

ಈ ಸಂಧರ್ಭದಲ್ಲಿ ಶಾಸಕರು ಮತ್ತು ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ಕೆ ವೈ ನಂಜೇಗೌಡ, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್ ಜಿಯಾವುಲ್ಲಾ ವಿಎಎಸ್, ಕೆಎಂಎಫ್‌ನ ಆಡಳಿತಾಧಿಕಾರಿ ಟಿ ಹೆಚ್ ಎಂ ಕುಮಾರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...