ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ: ಸಿದ್ದರಾಮಯ್ಯ ಬೇಸರ

Date:

  • ಪತ್ರಿಕಾ ಸ್ವಾತಂತ್ರ್ಯ-ವಾಕ್ ಸ್ವಾತಂತ್ರ್ಯ ಇದ್ದರೆ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ
  • ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ: ಸಿಎಂ

ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

“ಸಂವಿಧಾನ ವಿರೋಧಿಗಳನ್ನು ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗ್ತದಾ? ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು” ಎಂದರು.

ಕಾಗೆ ಕುಳಿತರೆ ಸಮಾಜಕ್ಕೇನು ನಷ್ಟ?

“ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿಪರತೆಗೆ ಹೆಸರಾಗಿತ್ತು. ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ” ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ (2)

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ಗಂಡ ಹೆಂಡತಿ ಜಗಳ ಸುದ್ದಿ ಮಾಡ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಇಂಥದ್ದನ್ನೆಲ್ಲಾ ಸ್ಟೋರಿ ಮಾಡಿದರೆ ಮಾಧ್ಯಮಗಳ ಬಗ್ಗೆ ಜನ ಕುತೂಹಲ ಕಳೆದುಕೊಳ್ಳದೆ ಇನ್ನೇನಾಗುತ್ತದೆ” ಎಂದರು.

“ನಾನು ಶಂಕುಸ್ಥಾಪನೆ ಮಾಡಿದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರವನ್ನು ನಾನೇ ಉದ್ಘಾಟಿಸುತ್ತೇನೆ, ಅಗತ್ಯ ನೆರವನ್ನೂ ನೀಡುವೆ” ಎಂದರು.

ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿ ಸಾನಿಧ್ಯ ವಹಿಸಿದ್ದರು. ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್, ಜಿಲ್ಲೆಯ ಶಾಸಕರಾದ ಜಿಟಿ ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡ, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡ, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...