ಅಧಿಕಾರಕ್ಕೆ ಅಂಟಿಕೊಂಡು ಕೂರಲ್ಲ, ರೈತರ ಹಿತ ಕಾಯುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ

Date:

  • ’56 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ನಿಮ್ಮ ಒತ್ತಾಯ ಕೇಳಲು ಬಂದಿದ್ದೇನೆ’
  • ‘ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ರೂ. ಬಿಡುಗಡೆ’ 

ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂತಹದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು.‌

“ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲ ಭಯೋತ್ಪಾದಕರೂ ಮುಸ್ಲಿಮರಲ್ಲ ಎನ್ನುವ ಸತ್ಯವನ್ನು ನಂಬದವರು

“ಈ ಮೊದಲು 5000 ಕ್ಯೂಸೆಕ್ ನೀರು ಬಿಡಲು ಹೇಳಿದರು, ಬಳಿಕ 3000 ಕ್ಯೂಸೆಕ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2600 ಕ್ಯೂಸೆಕ್ ನೀರು ಬಿಡಲು ಆದೇಶವಾಗಿದೆ. ಆದರೆ ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟು ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ” ಎಂದು ತಿಳಿಸಿದರು.

ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಅನುಮಾನ ಬೇಡವೇ ಬೇಡ ಎಂದರು.

ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ರವಿ ಗಣಿಗ, ದಿನೇಶ್ ಗೂಳಿಗೌಡ, ನರೇಂದ್ರಸ್ವಾಮಿ ಸೇರಿದಂತೆ ಹಲವು ಮಂದಿ ನಾಯಕರು ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...