ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಸಿಎಂ ಕ್ರಮ

Date:

  • ಶಾಸಕ ದಿನೇಶ್ ಗೂಳಿಗೌಡ ಮಾಡಿದ್ದ ಮನವಿಗೆ ಸಿಎಂ ಸ್ಪಂದನೆ
  • ಪ್ರಕರಣದ ಕಡತವನ್ನು ಸಚಿವ ಸಂಪುಟ ಸಭೆಗೆ ತನ್ನಿ: ಸಿಎಂ ಸೂಚನೆ

ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ವಿಧಾನ ಪರಿಷತ್‌ ಶಾಸಕ ದಿನೇಶ್ ಗೂಳಿಗೌಡ ಮಾಡಿದ್ದ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.

ಹೋರಾಟಗಾರರ ಮೇಲಿನ ಪ್ರಕರಣಗಳ ಕಡತವನ್ನು ಸಚಿವ ಸಂಪುಟ ಉಪ ಸಮಿತಿಯ ಮುಂದೆ ತಂದು ಅಗತ್ಯ ಕ್ರಮ ಕೈಗೊಂಡು, ಕ್ಯಾಬಿನೆಟ್ ಮುಂದೆ ತರುವಂತೆ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

“ಪ್ರಕರಣಗಳನ್ನು ಹಿಂಪಡೆಯುವ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿಯ ಮುಂದೆ ಕಡತ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಕ್ಯಾಬಿನೆಟ್ ಮುಂದೆ ತರಬೇಕು” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೈಬಿಡುವಂತೆ ಕ್ರಮ ವಹಿಸಲು ಮನವಿ ಸಲ್ಲಿಸಿದ್ದರು. ಅದಕ್ಕೆ ಸಿಎಂ ಶೀಘ್ರ ಸ್ಪಂದನೆ ನೀಡಿರುವುದಕ್ಕೆ ಶಾಸಕ ದಿನೇಶ್ ಗೂಳಿಗೌಡ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಲದ ಗುಂಡಿಗೆ ಮನುಷ್ಯರನ್ನು ಇಳಿಸುವುದು ‘ವಿಶ್ವಗುರು’ವಿಗೆ ಶೋಭೆಯಲ್ಲ

ಮನವಿಯಲ್ಲೇನಿತ್ತು?

ಕಾವೇರಿ ನೀರಿಗೆ ಸಂಬಂಧಿಸಿದಂತೆ ಮೇಕೆದಾಟು ಹಾಗೂ ಇನ್ನಿತರೆ ವಿಷಯಗಳಿಗೆ ಸಾಕಷ್ಟು ಧರಣಿಗಳು, ಪ್ರತಿಭಟನೆಗಳು ಹಾಗೂ ಪಾದಯಾತ್ರೆಗಳು ನಡೆದಿದ್ದು, ಅಂದಿನ ಬಿಜೆಪಿ ಸರ್ಕಾರವು ಹೋರಾಟದ ಕಿಚ್ಚನ್ನು ನಿಯಂತ್ರಿಸಲು ಶಾಸಕರು, ಮಾಜಿ ಶಾಸಕರು, ಹಿರಿಯ ರಾಜಕಾರಣಿಗಳು, ಮುಖಂಡರುಗಳು, ರೈತ ಹೋರಾಟಗಾರರು, ಕನ್ನಡ ಪರ ಸಂಘಟನೆಗಳು ಹಾಗೂ ಸಾರ್ವಜನಿಕರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲು ಮಾಡಿತ್ತು. ಇದರಿಂದಾಗಿ ಹಲವಾರು ಜನ ಇಂದಿಗೂ ವಿನಾಕಾರಣ ನ್ಯಾಯಾಲಯಗಳಿಗೆ ಅಲೆದಾಡುತ್ತಿದ್ದು, ಹೀಗಾಗಿ ಪ್ರಕರಣದಲ್ಲಿರುವವರು ಸೇರಿದಂತೆ ಕುಟುಂಬದವರು ಇದರಿಂದ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಗೂಳಿಗೌಡ ಗಮನ ಸೆಳೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...