ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ. ಹಾಗೆಯೇ ನವೆಂಬರ್ 18ರಿಂದ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 18ರಿಂದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನು ಓದಿದ್ದೀರಾ? ಆಗಸ್ಟ್ 5ರಿಂದ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದ್ದು, ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕನಿಷ್ಠ ತಾಪಮಾನ 10.4 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗಿದೆ.
ಇಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ನಾಳೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.
ಇನ್ನು ಇಂದು ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.
ನಾಳೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.





