ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ

Date:

  • ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ಹಂತದಲ್ಲಿ ಏನೂ ಇಲ್ಲ
  • ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು: ಜಾರಕಿಹೊಳಿ

ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ. ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ರಾಜಕಾರಣದಲ್ಲಿ ಹೊರಗಿನವರ ಹಸ್ತಕ್ಷೇಪದ ಬಗ್ಗೆ ಮುನಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಇದೀಗ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, “ಅಡ್ಜಸ್ಟ್​ಮೆಂಟ್ ಎನ್ನುವ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತವೆಂದು ಕಾದು ನೋಡೋಣ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. ಪಕ್ಷ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಉದ್ದೇಶವೇ ಬೇರೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಿಎಸ್‌ಐ ನೇಮಕಾತಿ | 545 ಹುದ್ದೆ ಜೊತೆ 400 ಹುದ್ದೆ ಸೇರಿಸಿ ಪರೀಕ್ಷೆ ನಡೆಸಲು ಚಿಂತನೆ: ಪರಮೇಶ್ವರ್

ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಪಾಲಿಟಿಕ್ಸ್ ಮತ್ತೆ ದೊಡ್ಡ ಸದ್ದು ಮಾಡುವ ಲಕ್ಷಣ ಕಾಣುತ್ತಿದೆ. ಜಿಲ್ಲಾ ರಾಜಕಾರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅತಿಯಾದ ಹಸ್ತಕ್ಷೇಪದ ವಿರುದ್ಧ ಸಿಡಿದೆದ್ದಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಮಾಧಾನ ಮಾಡುವ ಕೆಲಸ ನಡೆದಿರುವ ಬೆನ್ನಲ್ಲೇ ಜಾರಕಿಹೊಳಿ ಮಾತ್ರ ದಿನದಿಂದ ದಿನಕ್ಕೆ ರಾಜಕೀಯ ತಂತ್ರಗಾರಿಕೆ ಹೆಣೆಯುತ್ತ ಕುತೂಹಲ ಮೂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...