ಸಿದ್ದರಾಮಯ್ಯ ಆರೋಗ್ಯ ವಿಚಾರವಾಗಿ ಕೆಟ್ಟದಾಗಿ ಕಮೆಂಟ್ ಮಾಡಿದ ಕಿಡಿಗೇಡಿಗಳು, ದೂರು ದಾಖಲು

Date:

ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರವಾಗಿ ಕಿಡಿಗೇಡಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಪೊಲೀಸರಿಗೆ ದೂರು ನೀಡಿದೆ.

ಸಿದ್ದರಾಮಯ್ಯ ಸಾವಿನ ಬಗ್ಗೆ ಪ್ರಸ್ತಾಪಿಸಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಲಾಗಿದೆ. ಮುಖ್ಯಮಂತ್ರಿಗಳ ವಿರುದ್ಧ ಅಶ್ಲೀಲ ಪದಗಳಿಂದ ನಿಂದನೆ ಮಾಡಲಾಗಿದೆ ಎಂದು ಪೀಣ್ಯ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋಮವಾರ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವಿಚಾರವಾಗಿ ಪ್ರಕಟವಾದ ಸುದ್ದಿಗಳಿಗೆ ಕಿಡಿಗೇಡಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ್ದರು. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಕುಶಾಲ್ ಹರುವೇಗೌಡ ಹಾಗೂ ಸಂಜಯ್ ಎಂಬವರು ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ಸಿದ್ದರಾಮಯ್ಯ ಅವರ ಕುರಿತು ದಿನಾಂಕ 7-7-2025ರಂದು “ದಿಢೀರ್ ಆಸ್ಪತ್ರೆಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ” ಎಂದು ಖಾಸಗಿ ವಾಹಿನಿಯಲ್ಲಿ ಬಿತ್ತರವಾದ ಸುದ್ದಿಯ ಫೇಸ್​​​ಬುಕ್ ಪೋಸ್ಟ್​ಗೆ ಮುಖ್ಯಮಂತ್ರಿಯ ಸಾವನ್ನು ಬಯಸುವ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಗೇಡಿಗಳು ಹಾಕಿದ್ದಾರೆ. ಇಂತಹ ವಿಕೃತ ಮನಸ್ಸಿನ ವ್ಯಕ್ತಿಗಳು ಮಾಡುವ ಅಪಪ್ರಚಾರದ ಸುಳ್ಳು ವದಂತಿ ಹಾಗೂ ದಿಕ್ಕು ತಪ್ಪಿಸುವ ಹೇಳಿಕೆಗಳಿಂದ ರಾಜ್ಯದ ಜನರಿಗೆ, ಸಿದ್ದರಾಮಯ್ಯ ನವರ ಅಭಿಮಾನಿಗಳಿಗೆ ಹಾಗೂ ಲಕ್ಷಾಂತರ ಕಾರ್ಯಕರ್ತರಿಗೆ ನೋವು ಉಂಟಾಗಿರುತ್ತದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಭಾರ | ಮಾರ್ಗದರ್ಶಕ ಮಂಡಳಿಯ ಕನವರಿಕೆಯಿಂದ ಭೂತದ ಬಾಯಿಯವರೆಗೆ…

“ಕಿಡಿಗೇಡಿಗಳ ಈ ಹೇಳಿಕೆ ಕಾನೂನಿನ ಸುವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಹಾಗೂ ಶಾಂತಿ ಕದಡುವ ಇಂತಹ ಕಿಡಿಗೇಡಿಗಳ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಂಬಂಧಿಸಿದ ಎಲ್ಲ ದಾಖಲಾತಿಗಳ ಸ್ಕ್ರೀನ್​ಶಾಟ್​​ಗಳ ನಕಲು ಪ್ರತಿಗಳನ್ನು ದೂರಿನೊಂದಿಗೆ ಲಗತ್ತಿಸಲಾಗಿದೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ವಿಶ್ರಾಂತಿ ಪಡೆಯಲಿದ್ದಾರೆ. ಯಾವುದೇ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಬುಧವಾರ ಅವರು ದೆಹಲಿಗೆ ತೆರಳಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...