ಸಿಎಂ ಸಿದ್ದರಾಮಯ್ಯ ವಿರುದ್ಧ ಜೀವ ಬೆದರಿಕೆ ದೂರು: ವಿಚಾರಣೆ ನಿರಾಕರಿಸಿದ ಸುಪ್ರೀಂ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮೈಸೂರು ಮೂಲದ ಮಹಿಳೆ ಮಾಡಿದ ಆರೋಪವನ್ನು ಸುಪ್ರೀಂ ತಿರಸ್ಕರಿಸಿದೆ. ಸುಷ್ಮಾ ಎಸ್‌ ಆರಾಧ್ಯ ಎಂಬ ಮಹಿಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಆಸ್ತಿ ಕಬಳಿಸಲು ಯತ್ನಿಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌ ಹಾಗೂ ಸಂದೀಪ್‌ ಮೆಹ್ತಾ ಅವರ ಪೀಠವು ಮಾರ್ಚ್‌ 20ರಂದು ಅರ್ಜಿ ವಿಚಾರಣೆ ಮಾಡಲು ನಿರಾಕರಿಸಿದೆ.

ಸಿದ್ದರಾಯ್ಯನವರು ತನ್ನ ಆಸ್ತಿಯನ್ನು ವಶಪಡಿಸುವ ಉದ್ದೇಶದಿಂದ ನನಗೆ ನಿರಂತರ ಜೀವ ಬೆದರಿಕೆಗಳನ್ನು ಹಾಕುತ್ತಿದ್ದು.  ಕರ್ನಾಟಕದಲ್ಲಿ ವಾಸಿಸಲು ಬಿಡುತ್ತಿಲ್ಲ ಆದರಿಂದ ನಾನು ದೆಹಲಿಯಲ್ಲಿ ನೆಲೆಸಿದ್ದೇನೆ ಎಂದು ದೂರಿದ್ದಾರೆ.

ಜನವರಿಯಲ್ಲಿ ಕರ್ನಾಟಕದಲ್ಲಿನ ನನ್ನ ಮನೆಗೆ ಗೂಂಡಾಗಳನ್ನು ಬಿಟ್ಟು ದಾಳಿ ಮಾಡಿಸಿದ್ದು. ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆ ಲೂಟಿ ಮಾಡಿ ನನ್ನ ಆಸ್ತಿಯನ್ನು ಹೆದರಿಸಿ ಬೆದರಿಸಿ ನನ್ನ ಆಸ್ತಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ದೂರುದಾರೆ ಆರೋಪ ಮಾಡಿದ್ದರು. ಈ ಎಲ್ಲಾ ಕೃತ್ಯಗಳನ್ನು ಸಿದ್ದರಾಮಯ್ಯನವರೇ ಮಾಡಿಸಿದ್ದಾರೆ ಕರ್ನಾಟಕಕ್ಕೆ ಬರದಂತೆ ದೆಹಲಿಯಲ್ಲೇ ಇರುವಂತೆ ಬೆದರಿಸುತ್ತಿದ್ದಾರೆ. ನನಗೆ ಕರ್ನಾಟಕದ ನನ್ನ ನಿವಾಸದಲ್ಲಿ ಇರಲು ಸುರಕ್ಷತೆಯ ಭಯವಿದೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿದಾರರ ಪರ ವಕೀಲರು ವಾದವನ್ನು ಮಂಡಿಸಿದ ನಂತರ ಪ್ರತಿಕ್ರಿಯಿಸಿದ ಪೀಠವು ರಾಜಕೀಯ ಜಗಳಗಳನ್ನು ನ್ಯಾಯಾಲಯಕ್ಕೆ ತರುವುದು ಸಮಂಜಸವಲ್ಲ ಎಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ಕರ್ನಾಟಕ ಹೈಕೋರ್ಟಿನ ಮೊರೆ ಹೋಗಬಹುದು. ರಾಜ್ಯಕ್ಕೆ ಪ್ರವೇಶಿಸಲು ಸುರಕ್ಷತೆ ಕೋರುವುದಾದರೆ ಇ ಫೈಲ್‌ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...