RSS​ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ, ಸಂವಿಧಾನ ಮುಂದೆ ಯಾರೂ ದೊಡ್ಡವರಲ್ಲ: ಪ್ರಿಯಾಂಕ್‌ ಖರ್ಗೆ

Date:

ತೀವ್ರ ಕುತೂಹಲ ಮೂಡಿಸಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿನ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿಯ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. RSS​ ಪಥಸಂಚಲನಕ್ಕೆ ಕಲಬುರಗಿ ಜಿಲ್ಲಾಡಳಿತ ಅನುಮತಿ ನೀಡಿದೆ.

ಅಕ್ಟೋಬರ್‌ 18ರಿಂದ ಆರ್‌ಎಸ್‌ಎಸ್‌ ಪಥಸಂಚಲನ ಪಾಲಿಟಿಕ್ಸ್‌ನ ಹಗ್ಗಜಗ್ಗಾಟ ನಡೆಯುತ್ತ ಬಂದಿದ್ದು, ಈಗ ತಾರ್ಕಿಕ ಅಂತ್ಯಕ್ಕೆ ಬಂದಿದೆ. ನ.16 (ಭಾನುವಾರ ) ಪಥಸಂಚಲನಕ್ಕೆ ಅವಕಾಶ ನೀಡಲಾಗಿದ್ದು, ಒಟ್ಟು 350 ಜನರು ಮಾತ್ರ ಪಥಸಂಚಲನದಲ್ಲಿ ಭಾಗಿಯಾಗಲು ಜಿಲ್ಲಾಡಳಿತ ಅನುಮತಿಸಿದೆ.

ಪಥಸಂಚನ ಅನುಮತಿ ನಿರಾಕಿಸಿದ್ದನ್ನು ಪ್ರಶ್ನಿಸಿ ಆರ್‌ಎಸ್‌ಎಸ್‌ನ ಮುಖಂಡ ಅಶೋಕ್‌ ಪಾಟೀಲ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ಏಕ ಸದಸ್ಯ ನ್ಯಾಯಪೀಠವು, ‘ಪಥಸಂಚಲನದಲ್ಲಿ 300 ಮಂದಿ ಗಣವೇಷಧಾರಿಗಳು ಹಾಗೂ 50 ಮಂದಿ ಘೋಷ್ ವೃಂದಕ್ಕೆ ಅವಕಾಶ ನೀಡಲಾಗಿದೆ’ ಎಂದು ಆದೇಶ ನೀಡಿ ಅರ್ಜಿ ಇತ್ಯರ್ಥಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

“ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ! ಆ‌ರ್‌ಎಸ್‌ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ” ಎಂದು ಚಿತ್ತಾಪುರ ಶಾಸಕ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ. ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್ಎಸ್ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ” ಎಂದಿದ್ದಾರೆ.

“300 ಜನರು ಮಾತ್ರ ಭಾಗವಹಿಸಬೇಕು. ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ. ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ. ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...