ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲು: ಜಿ ಪರಮೇಶ್ವರ್‌

Date:

ಇವಿಎಂ ಹ್ಯಾಕ್‌ನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನ್ನಿಸುತ್ತಿದೆ. ತಂತ್ರ ಮಾಡುವುದರಲ್ಲೂ ನಾವು ವಿಫಲವಾಗಿದ್ದೇವೆ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್‌ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಹಾರಾಷ್ಟ್ರದಲ್ಲಿ ನಾವು ಕಾಂಗ್ರೆಸ್ ಒಕ್ಕೂಟ ಬರುತ್ತದೆ ಎಂದುಕೊಂಡಿದ್ದೆವು. ಆದರೆ ಎಲ್ಲವೂ ಉಲ್ಟಾ ಆಗಿದೆ. ಹಲವು ಹಿರಿಯ ಅನುಭವಿ ನಾಯಕರು ಸೇರಿ ಚರ್ಚೆ ಮಾಡಿದ್ದೇವೆ. ಬಹಳಷ್ಟು ಕಡೆ ಇವಿಎಂ ತಿರುಚಿದ್ದಾರೆ ಎಂದು ಚರ್ಚೆ ಆಗಿದೆ. ಆದರೆ ಜಾರ್ಖಂಡ್‌ನಲ್ಲಿ ಯಾಕೆ ಹಾಗಾಗಲಿಲ್ಲ ಎಂದರೆ ಬಿಜೆಪಿಯವರು ಪ್ಲ್ಯಾನ್ ಆಫ್ ಆಕ್ಷನ್ ತರಹ ಇದನ್ನು ಮಾಡುತ್ತಾರೆ. ಮತಪತ್ರ ಬರಬೇಕು ಅಂತ ನಾವು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹಳಷ್ಟು ಕಡೆ ಇವಿಎಂ ತಿರುಚಿದ್ದಾರೆ ಅಂತ ಚರ್ಚೆಯಾಯಿತು. ಜಾರ್ಖಂಡ್‌ನಲ್ಲಿ ಯಾಕೆ ಮಾಡಿಲ್ಲವೆಂದರೆ, ಕೆಲವು ಕಡೆ ಬಿಟ್ಟು ಬಿಡ್ತಾರೆ. ರಾಜ್ಯದಲ್ಲಿ ಕೆಲವು ಗೆದ್ದೆ ಗೆಲ್ಲುತ್ತೇವೆ ಅನ್ನುವ ಕಡೆ ತಿರುಚುವುದಿಲ್ಲ. ಇದರೊಂದಿಗೆ ಲಾಡ್ಲಿ ಬೆಹೆನ್ ಯೋಜನೆ ಸಾಕಷ್ಟು ಪರಿಣಾಮ ಉಂಟುಮಾಡಿದೆ. ಅವರು 6 ತಿಂಗಳು ಮೊದಲು ಯೋಜನೆ ಕೊಟ್ಟರು. ಇದೆಲ್ಲವೂ ಅವರ ಕೈ ಹಿಡಿದಿದೆ. ನಾವು ಕೊನೆಗೆ ಟಿಕೆಟ್ ಘೋಷಣೆ ಮಾಡಿದೆವು. ಪಕ್ಷದಲ್ಲೂ ಗೊಂದಲ ಆಯಿತು. ಶರದ್‌ ಪವಾರ್ ಗುಂಪು, ಉದ್ದವ್ ಠಾಕ್ರೆ ಗುಂಪಿನ ನಡುವೆ ಸರಿಯಾಗಿ ಹೊಂದಾಣಿಕೆ ಆಗಿಲ್ಲ. ವಿದರ್ಭದಲ್ಲಿ ಹೆಚ್ಚು ಸೀಟ್ ಬರಲಿಲ್ಲ. ಎಲ್ಲಿಯವರೆಗೆ ಇವಿಎಂ ಇರುತ್ತೆ ಅಲ್ಲಿಯವರೆಗೆ ಕಾಂಗ್ರೆಸ್ ಬರೋದು ಕಷ್ಟ ಆಗುತ್ತೆ ಎಂದು ನುಡಿದರು.

ನಮ್ಮ ರಾಜ್ಯದಲ್ಲಿ ಯಡಿಯೂರಪ್ಪ ಬಳಿಕ ದೊಡ್ಡ ನಾಯಕತ್ವ ಇರಲಿಲ್ಲ. ಅದಕ್ಕೆ ಬಿಟ್ಟರು, ಹ್ಯಾಕ್ ಮಾಡುವುದರಲ್ಲಿ ಬಿಜೆಪಿಗರು ನಿಪುಣರು. ಜಾರ್ಖಂಡ್‌ನಲ್ಲಿ ಜೆಎಂಎಂ ಬರುತ್ತೆ ಅಂತ ಬಿಟ್ಟರು. ಕಾಂಗ್ರೆಸ್ ಗೆಲ್ಲುತ್ತೆ ಅಂತಿದ್ರೆ ಅಲ್ಲೂ ಹ್ಯಾಕ್‌ ಮಾಡುತ್ತಿದ್ದರು. ಇವಿಎಂ ಬೇಡ ಅಂತ ನಾವು ಸುಪ್ರೀಂ ಕೋರ್ಟ್‌ಗೆ ಹೋದರೂ ಆಗಲಿಲ್ಲ. ಅವರು ಸಹ ಚುನಾವಣಾ ಆಯೋಗ ಹೇಳಿರುವುರನ್ನು ಒಪ್ಪಿಕೊಂಡರು ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...