ಕಾಂಗ್ರೆಸ್‌ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ: ನೂರ್ ಶ್ರೀಧರ್

Date:

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಇದು ಗ್ಯಾರಂಟಿ ಸರ್ಕಾರವಾಗಿಲ್ಲ. ಸಮಸ್ಯೆಗಳ ಪಟ್ಟಿ ಮತ್ತು ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ, ಪರಿಹಾರ ಮಾತ್ರ ಸಿಗುತ್ತಿಲ್ಲ. ಮುಖ್ಯಮಂತ್ರಿಗಳ ಬಗ್ಗೆ ನಮ್ಮ ಅಭಿಪ್ರಾಯ ಏನು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ. ಹೊಲಸು ರಾಜಕೀಯದಲ್ಲಿ ಅವರ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಹೇಳಿದ್ದಾರೆ.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕದ ಆಶ್ರಯ’ದಲ್ಲಿ ನಡೆದ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರದ ನಿಲುವುಗಳ ಕುರಿತು ಪ್ರಶ್ನಿಸಿದ ಅವರು, “ನೀವು ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಬಿಜೆಪಿ ಸರ್ಕಾರದ ಎಲ್ಲ ಕಾನೂನುಗಳನ್ನು ವಿರೋಧ ಪಕ್ಷವಿದ್ದಾಗ ವಿರೋಧ ಮಾಡಿದ್ದೀರಾ, ಈಗ ನೀವು ಏನು ಮಾಡುತ್ತಾ ಇದ್ದೀರಿ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಯ್ದೆ ಜಾರಿ ಆಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಂಯುಕ್ತ ಹೋರಾಟ ವೇದಿಕೆಯಲ್ಲಿ ಹೇಳಿದ್ದೀರಿ, ಆದರೆ, ಎಪಿಎಂಸಿ ಕಾಯ್ದೆಗೆ ಸ್ವಲ್ಪ ತಿದ್ದುಪಡಿ ಮಾಡಿದ್ದು ಬಿಟ್ಟರೆ ಎಲ್ಲ ಕಾನೂನುಗಳೂ ಹಾಗೆ ಇವೆ. ಪ್ರಜಾತಂತ್ರವನ್ನು ಬುಡಮೇಲು ಮಾಡುವ, ವಿರೋಧ ಪಕ್ಷಗಳು ಅಧಿಕಾರಕ್ಕೆ ಬರಲೇಬಾರದು ಎಂದು SIR ಕಾಯ್ದೆ ಜಾರಿ ಮಾಡುತ್ತಿದ್ದಾರೆ. ಜಾತ್ಯತೀತ ಮತದಾರರ ಹೆಸರುಗಳನ್ನ ಶೇ.15 ರಷ್ಟು ಅಳಿಸುತ್ತಿದ್ದಾರೆ, ಇಷ್ಟೆಲ್ಲಾ ಆದರೂ ಕರ್ನಾಟಕದಲ್ಲಿ ನೀವು ಏನು ಮಾಡುತ್ತಾ ಇದ್ದೀರಾ ಎಂದು ಕೇಳಿದರು.

ಮಮತಾ ಬ್ಯಾನರ್ಜಿ ಸೇರಿದಂತೆ ಎಡ ಪಕ್ಷಗಳು ಬಿಜೆಪಿಯ ಜನವಿರೋಧಿ ನೀತಿಗಳನ್ನ ವಿರೋಧಿಸುತ್ತಿದ್ದಾರೆ. ಆದರೆ ನೀವು ಇಲ್ಲಿ ತಣ್ಣಗೆ ಮಲಗಿದ್ದೀರಾ. ದೇವನಹಳ್ಳಿ ಭೂಸ್ವಾಧೀನ ರದ್ದುಪಡಿಸಲು ನಾವು ಹೋರಾಟಗಾರರು ತಿಂಗಳುಗಟ್ಟಲೆ ಎಲ್ಲಾ ಕೆಲಸ ಬಿಟ್ಟು ಹೋರಾಟ ಮಾಡಬೇಕಾಯಿತು, ಹಾಗಾದರೆ ಉಳಿದ ಬೇಡಿಕೆ ಈಡೇರಿಸಿಕೊಳ್ಳಲು ನಾವು ಇನ್ನೆಷ್ಟು ವರ್ಷ ಹೋರಾಟ ಮಾಡಬೇಕು ಎಂದು ಪ್ರಶ್ನಿಸಿದರು.

ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿಗಳು ಮತ್ತು ಕೋಲಾರ ಅರಣ್ಯಾಧಿಕಾರಿಗಳು ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಇಲ್ಲದಿದ್ದರೆ ಸಂಯುಕ್ತ ಹೋರಾಟ ರೈತರ ಬೆನ್ನಿಗೆ ನಿಲ್ಲಲಿದೆ. ರಾಮನಗರ ಜಿಲ್ಲಾಧಿಕಾರಿಗಳು ಪ್ರಜಾಪ್ರಭುತ್ವದ ಜಿಲ್ಲಾಧಿಕಾರಿ, ಅವರು ಬ್ರಿಟಿಷ್ ಸರ್ಕಾರದ ಪ್ರತಿನಿಧಿಯಂತೆ ವರ್ತಿಸಬಾರದು ಹೀಗೆ ಮುಂದುವರೆದರೆ ರಾಮನಗರಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಸಂಘದ ಯು. ಬಸವರಾಜಪ್ಪ ಎಚ್ಚರಿಕೆ ನೀಡಿದರು.

ಈ ಲೇಖನ ಓದಿದ್ದೀರಾ?: ಕಬ್ಬಿನ ನಂತರ ಮೆಕ್ಕೆಜೋಳ, ಬೀದಿಗೆ ಬಂದ ರೈತರ ಬದುಕು

ಪ್ರೊ. ಬಾಬು ಮ್ಯಾಥ್ಯೂ ಮಾತನಾಡಿ ‘ಭಾರತದ ಸಂವಿಧಾನ ನಾಶಕ್ಕೆ ಹಲವು ಅಕ್ರಮ ಮತ್ತು ಹುನ್ನಾರ ನಡೆಸಲಾಗುತ್ತಿದೆ.. ಸಂವಿಧಾನ ನಂಬಿಕೊಂಡಿರುವ ರೈತರು ಮತ್ತು ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ನಡೆಯುತ್ತಿದೆ. ಸಾಮಾನ್ಯ ಜನರ ಮೇಲೆ ದೊಡ್ಡ ದೌರ್ಜನ್ಯದ ಜೊತೆಗೆ, ಬಂಡವಾಳಶಾಹಿ ವ್ಯಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಡೆಯುತ್ತಿದೆ. ಅಂಬಾನಿ ಅದಾನಿ ಎಂಬ ಹೊಸತರಹದ ಬಂಡವಾಳ ಶಾಹಿ ಹುಟ್ಟಿಕೊಂಡಿದ್ದಾರೆ. ಅದೇ ಗುತ್ತೇದಾರಿ (ಮನೋಪಲಿ) ಬಂಡವಾಳಶಾಹಿ.

ಮನೋಪಲಿ ಬಂಡವಾಳಕ್ಕೆ ಹೆಚ್ಚಿನ ಬೆಂಬಲ ನೀಡಿದರೆ ಫಾಸೀಸಂ ಮೇಲೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಆಗ ಅವರು ಸಂವಿಧಾನವನ್ನು ದುರ್ಬಲ ಮಾಡುತ್ತಾರೆ ಎಂದು ಎಚ್ಚರಿಗೆ ನೀಡಿದರು.

ಈಗ ಜಾರಿಯಾಗಿರುವ ಕಾರ್ಮಿಕ ವಿರೋಧಿ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಲೀಗಲ್ ಸ್ಟ್ರೈಕ್ ಮಾಡುವುದಕ್ಕೆ ಸಾಧ್ಯವಿಲ್ಲ. ಹೋರಾಟ ಮಾಡಿದರೆ ಅದು ಕಾನೂನು ಬಾಹಿರ ಆಗುತ್ತದೆ. ಕಾರ್ಮಿಕರ ಯೂನಿಯನ್ ಗಳು ನಿಷೇಧ ಆಗುತ್ತವೆ

ಹಳೆ ಕಾನೂನುಗಳ ಮೇಲೆ ನಮಗೆ ಹಿಡಿತ ಇತ್ತು. ಆದರೆ ಹೊಸ ಕಾನೂನುಗಳಲ್ಲಿ ಯಾವಾಗ ಬೇಕಾದರೂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಹುದು, ಯಾವಾಗ ಬೇಕಾದರೂ ಕಾರ್ಖಾನೆ ಮುಚ್ಚಿ ಬೇರೆ ತೆಗೆಯಬಹುದು. ಇದು ಕಾನೂನು ಬಾಹಿರ ಎಂಬುದನ್ನು ಮರೆಯಬಾರದು ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...