‘ಆಪರೇಷನ್ ಸಿಂಧೂರ’ ಯಶಸ್ಸಿಗೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಕಾಂಗ್ರೆಸ್ ಸರ್ಕಾರ ಸೂಚನೆ

Date:

ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಕಾರ್ಯಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ, ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ (ಪಿಒಕೆ) 9 ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ‘ಆಪರೇಷನ್ ಸಿಂಧೂರ’ ಹೆಸರಲ್ಲಿ ಕ್ಷಿಪಣಿ ದಾಳಿ ನಡೆಸಿದ್ದು ಯಶಸ್ವಿಯಾಗಿದೆ.

ಈ ಹಿನ್ನೆಲೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು‌ ಸುತ್ತೋಲೆ ಹೊರಡಿಸಿ, “ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಪ್ರಾರ್ಥಿಸಿ, ವಿಶೇಷ ಸಂಕಲ್ಪದೊಂದಿಗೆ ಪೂಜೆಗಳನ್ನು ನೆರವೇರಿಸಲು” ಸೂಚಿಸಿದ್ದಾರೆ.

WhatsApp Image 2025 05 07 at 6.44.28 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...