ಮದ್ದೂರು ಘಟನೆಗೆ ಕಾಂಗ್ರೆಸ್‌ನ ಓಲೈಕೆ ರಾಜಕಾರಣ ಕಾರಣ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

Date:

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಮದ್ದೂರಿನ ಕಲ್ಲು ಘಟನೆ ವಿಷಯ ಕುರಿತು ದೆಹಲಿಯಲ್ಲಿ ಸೋಮವಾರ ಮಾತನಾಡಿದ ಅವರು, ಘಟನೆ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿದ್ದೇನೆ. ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರಕಾರವೇ ಕಾರಣ” ಎಂದು ದೂರಿದರು.

“ಶಾಂತಿ ನೆಮ್ಮದಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಹಿಂದೆಂದೂ ಈ ಜಿಲ್ಲೆಯಲ್ಲಿ ಇಂಥ ಘಟನೆಗಳು ಆಗಿಲ್ಲ. ನಾಗಮಂಗಲದಲ್ಲಿ ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂಥ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ. ಮಂಡ್ಯ ಜಿಲ್ಲೆ ಯಾವಾಗಲೂ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಜನರು ಕಷ್ಟಪಟ್ಟು ಕೆಲಸ ಮಾಡುತ್ತಾ ನೆಮ್ಮದಿ ಜೀವನ ಮಾಡುತ್ತಿದ್ದಾರೆ. ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಆದರೆ ಕೆಲ ಶಕ್ತಿಗಳು ವ್ಯವಸ್ಥಿತವಾಗಿ ಜನರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್‌ ಪಕ್ಷದ ಓಲೈಕೆ ರಾಜಕಾರಣದಿಂದ ಇಂಥ ಕೆಟ್ಟ ಪರಿಸ್ಥಿತಿ ರಾಜ್ಯದ ಉದ್ದಗಲಕ್ಕೂ ಸೃಷ್ಟಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಂತಿ ನೆಲೆಸುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು. ನಾನು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಪೋಲೀಸ್‌ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ. ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯಕ್ಕೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಡವಳಿಕೆ, ಅವರ ಆಡಳಿತವೇ ಈ ಘಟನೆಗೆ ಕಾರಣ. ಹಿಂದೂಗಳು ಅಸಮಾಧಾನವಾಗುವ ರೀತಿಯಲ್ಲಿ ‌ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಇದನ್ನು ನಾನು ರಾಜಕೀಯ ಉದ್ದೇಶದಿಂದ ಹೇಳುತ್ತಿಲ್ಲ. ರಾಜ್ಯದ ಹಲವೆಡೆ ಗಲಾಟೆಗಳು ನಡೆಯಲು ಕಾಂಗ್ರೆಸ್ ಪಕ್ಷವೇ ಕಾರಣ. ಈ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ಅವನತಿಯನ್ನು ತಾನೇ ತಂದುಕೊಳ್ಳುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈ ಹಿಂದೆ ಇಂಥ ಘಟನೆಗಳು ಒಂದೆರಡು ಜಿಲ್ಲೆಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತಿದ್ದವು. ಕಾಂಗ್ರೆಸ್‌ ಸರಕಾರ ಬಂದ ಮೇಲೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತೀ ಭಾಗದಲ್ಲಿಯೂ ಅವ್ಯಾಹತವಾಗಿ ನಡೆಯುತ್ತಿವೆ. ಆ ಕೆಟ್ಟ ಪರಿಸ್ಥಿತಿ ಕಾಂಗ್ರೆಸ್ ಆಡಳಿತದಲ್ಲಿ ಇಡೀ ರಾಜ್ಯಕ್ಕೆ ವ್ಯಾಪಿಸಿದೆ. ಕೇವಲ ಓಲೈಕೆ ರಾಜಕಾರಣದಿಂದ ಇಷ್ಟೆಲ್ಲಾ ನಡೆಯುತ್ತಿದೆ” ಎಂದು ದೂರಿದರು.

“ಇಂಥ ಗಲಭೆಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ ಎಂದು ಅರ್ಥವಾಗುತ್ತದೆ. ಇದೆಲ್ಲವನ್ನೂ ಕಾಂಗ್ರೆಸ್ ಅರ್ಥ ಮಾಡಿಕೊಳ್ಳದಿದ್ದರೆ ಇದು ಸೆಲ್ಪ್ ಸುಸೈಡ್ (ಆತ್ಮಹತ್ಯೆ) ಆಗಲಿದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಆಗಬಾರದು. ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...