ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್‌ನಿಂದ ಅಗ್ಗದ ರಾಜಕೀಯ: ಬಿ ವೈ ವಿಜಯೇಂದ್ರ

Date:

ರಾಜ್ಯದ ಆಡಳಿತ ವೈಫಲ್ಯ, ಶೂನ್ಯ ಅಭಿವೃದ್ಧಿ ಮತ್ತು ಭ್ರಷ್ಟಾಚಾರದ ಮೇಲಿನ ಆರೋಪಗಳಿಗೆ ಉತ್ತರದಾಯಿಗಳಾಗಿರುವ ಮುಖ್ಯಮಂತ್ರಿಗಳು ಮತ್ತು ಆಡಳಿತ ಪಕ್ಷದ ನಾಯಕರು, ಜನರ ಗಮನ ಬೇರೆಡೆ ಸೆಳೆಯಲು ಹೀಗೆ ಅಗ್ಗದ ರಾಜಕೀಯ ತಂತ್ರವನ್ನು ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.

ಚುನಾವಣೆ ವೇಳೆಯೇ ಬಾಂಬ್‌ ಬ್ಲಾಸ್ಟ್‌ ಆಗೋದ್ಯಾಕೆ ಎಂದು ಪ್ರಶ್ನಿಸಿರುವ ಸಿಎಂ ಸಿದ್ದರಾಮಯ್ಯ ಹೇಳಿಯನ್ನು ಉಲ್ಲೇಖಿಸಿ ಎಕ್ಸ್‌ ತಾಣದಲ್ಲಿ ಬರೆದುಕೊಂಡಿರು ಅವರು, “ದೆಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 12 ನಾಗರಿಕರು ಮೃತಪಟ್ಟು, ಹಲವರು ಗಾಯಗೊಂಡ ಭಯೋತ್ಪಾದಕ ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ, ಮತ್ತಿತರ ಕಾಂಗ್ರೆಸ್ ನಾಯಕರ ಬೇಜವಾಬ್ದಾರಿ, ಅಸಂವೇದನೀಯ, ಕೀಳು ರಾಜಕೀಯ ಹೇಳಿಕೆಗಳು ಖಂಡನೀಯ ಮಾತ್ರವಲ್ಲ ಆತಂಕಕಾರಿಯೂ ಆಗಿದೆ” ಎಂದಿದ್ದಾರೆ.

“ದೇಶದ ವಿರುದ್ಧ ನಡೆದಿರಬಹುದಾದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಇಡೀ ದೇಶ ಒಂದು ಧ್ವನಿಯಲ್ಲಿ ಮಾತನಾಡಬೇಕಾದ ಸೂಕ್ಷ್ಮ ಸಂದರ್ಭದಲ್ಲೂ ಇವರುಗಳು ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ರಾಜ್ಯದ ದುರಂತ, ದೇಶದ ದೌರ್ಭಾಗ್ಯ. ಕಾಂಗ್ರೆಸ್ ಪಕ್ಷಕ್ಕೆ ದೇಶದ ಭದ್ರತೆ, ನಾಗರಿಕರ ಸಾವು-ನೋವುಗಳು, ನಮ್ಮ ಸೈನಿಕರ ತ್ಯಾಗ, ರಾಷ್ಟ್ರೀಯ ಗೌರವಗಳಂತಹ ವಿಷಯಗಳೂ ಕೂಡ ಕೇವಲ ರಾಜಕೀಯ ಅಸ್ತ್ರವಾಗಿರುವುದು ನಿಜಕ್ಕೂ ಆತಂಕಕಾರಿಯಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2019ರ ಭೀಕರ ಪುಲ್ವಾಮಾ ದಾಳಿಯ ನಂತರವೂ ಕಾಂಗ್ರೆಸ್‌ ನಾಯಕರು, ಪಾಕಿಸ್ತಾನದ ಪ್ರಚಾರಕ್ಕೆ ಸಹಾಯವಾಗುವ ಹೇಳಿಕೆಗಳನ್ನು ನೀಡಿದ್ದನ್ನು ದೇಶ ಮರೆತಿಲ್ಲ. ಮುಖ್ಯಮಂತ್ರಿಗಳ ಈಗಿನ ಹೇಳಿಕೆ ಕೂಡ ಕಾಂಗ್ರೆಸ್‌ನ ಅದೇ ರಾಷ್ಟ್ರ ವಿರೋಧಿ ಪರಂಪರೆಯ ಮುಂದುವರಿಕೆಯಾಗಿದೆ. ದೇಶದ ಸಾರ್ವಭೌಮತೆ ಮತ್ತು ಭದ್ರತೆಗೆ ಧಕ್ಕೆ ಬಂದಾಗ ಇಡೀ ದೇಶ ಒಗ್ಗಟ್ಟಿನಿಂದ ನಿಲ್ಲಬೇಕು. ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ಕಾಂಗ್ರೆಸ್ ನಾಯಕರ ಧೋರಣೆ ಅವರ ಅಸಲಿಯತ್ತನ್ನು ಬಯಲು ಮಾಡಿದೆ. ಯುಪಿಎ ಅವಧಿಯಲ್ಲಿ (2004-2014) ಮುಂಬೈ ದಾಳಿ ಸೇರಿದಂತೆ ದೇಶದಲ್ಲಿ 45ಕ್ಕೂ ಅಧಿಕ ಬಾಂಬ್ ಸ್ಫೋಟ, ಉಗ್ರಕೃತ್ಯಗಳು ನಡೆದು ಸಾವಿರಾರು ಮಂದಿ ಸಾವನ್ನಪ್ಪಿದಾಗ, ಆಗಿನ ಅಸಮರ್ಥ ಕೇಂದ್ರ ಸರ್ಕಾರ ಪ್ರತಿ ಕ್ರಮಗಳೇನನ್ನೂ ತೆಗೆದುಕೊಳ್ಳದೆ ಇದ್ದಾಗಲೂ ದೇಶದ ಭದ್ರತೆ ವಿಷಯದಲ್ಲಿ ದೇಶ ಒಂದಾಗಿರಬೇಕೆಂದು ಆಗ ಪ್ರತಿಪಕ್ಷ ರಾಜಕೀಯ ನಡೆಸಲಿಲ್ಲ” ಎಂದು ಕುಟುಕಿದ್ದಾರೆ.

“ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು. ಕಾಂಗ್ರೆಸ್‌ನ ದೇಶ-ವಿರೋಧಿ, ಸಂವೇದನಾರಹಿತ, ಕೀಳು ರಾಜಕೀಯಕ್ಕೆ ಬಿಹಾರದ ಜನತೆ ಉತ್ತರ ನೀಡುತ್ತಿರುವಂತೆಯೇ ರಾಜ್ಯದ ಜನರೂ ಕೂಡ ತಕ್ಕ ಉತ್ತರ ನೀಡಲಿದ್ದಾರೆ. ಇದು ಪಕ್ಷ ರಾಜಕಾರಣದ ಮಾತಲ್ಲ, ನಿಜವಾದ ದೇಶಭಕ್ತ ಭಾರತೀಯರಿಗೆ ಯಾವಾಗಲೂ ‘ದೇಶ ಮೊದಲು’, ಉಳಿದದ್ದೆಲ್ಲವೂ ನಂತರ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...