ಬಿಗ್‌ಬಾಸ್‌ಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್; ನೆಟ್ಟಿಗರು ಕಿಡಿ

Date:

ಮೊದಲ ಬಾರಿಗೆ ಶಾಸಕರಾಗಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ‘ಬಿಗ್‌ಬಾಸ್ ಕನ್ನಡ’ದಲ್ಲಿ ಸ್ಪರ್ಧಿಯಾಗಿದ್ದಾರೆ. ಬಿಗ್‌ಬಾಸ್‌ ಮನೆಗೆ ಹೋಗಿರುವ ಪ್ರದೀಪ್‌ ಈಶ್ವರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಿಡಿಕಾರಿದ್ದಾರೆ.

ಸೋಮವಾರ ಪ್ರಸಾರವಾದ ಪ್ರೋಮೋದಲ್ಲಿ ಶಾಸಕ ಪ್ರದೀಪ್ ಅವರು ಬಿಗ್‌ಬಾಸ್‌ ಮನೆಗೆ ಪ್ರವೇಶಿಸಿದ್ದಾರೆ. ಕಲರ್ಸ್‌ ಕನ್ನಡದ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಪ್ರೋಮೋ ಪೋಸ್ಟ್‌ ಆಗಿರುವ ಕಾರಣ, ಪ್ರದೀಪ್ ಅವರು ಬಿಗ್‌ಬಾಸ್ ಶೋಗೆ ಹೋಗಿರುವುದು ಖಾತ್ರಿಯಾಗಿದೆ. ಫೋಟೋದಲ್ಲಿ, ‘ಸ್ಪರ್ಧಿಯಾಗಿ ಭಾಗಹಿಸಿರುವುದು ಸಂತೋಷವಾಗಿದೆ’ ಎಂದು ಪ್ರದೀಪ್ ಹೇಳಿದ್ದಾರೆ.

ಕೋಚಿಂಗ್ ಇನ್‌ಸ್ಟಿಟ್ಯೂಟ್ ನಡೆಸುತ್ತಿರುವ ಪ್ರದೀಪ್ ಈಶ್ವರ್‌ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಕೆ ಸುಧಾಕರ್ ವಿರುದ್ಧ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಕಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೋಮೋ ಪ್ರಸಾರವಾದ ನಂತರ, ನೆಟ್ಟಿಗರು ಪ್ರದೀಪ್ ವಿರುದ್ಧ ಕಿಡಿಕಾರಿದ್ದಾರೆ. ಹಲವರು ಬಿಗ್‌ಬಾಸ್ ಕನ್ನಡದಲ್ಲಿ ಚುನಾಯಿತ ಪ್ರತಿನಿಧಿ ಭಾಗವಹಿಸುವುದನ್ನು ಖಂಡಿಸಿದ್ದಾರೆ.

ನೆಟ್ಟಿಗ ಗಜಾನಂದ ಮೋಳ್ಕೆರೆ ಎಂಬವರು ತಮ್ಮ ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ಟ್ಯಾಗ್‌ ಮಾಡಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. “ಬಿಗ್‌ಬಾಸ್‌ ಮನೆಗೆ ಹೋಗಿರುವ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಯವಿಟ್ಟು ಕ್ರಮ ಕೈಗೊಳ್ಳಿ. ಜನರು ತಮ್ಮ ಸೇವೆಗಾಗಿ ಅವರನ್ನು ಆಯ್ಕೆ ಮಾಡಿದ್ದಾರೆ. ಆದರೆ, ಅವರು ಬೇಜವಾಬ್ದಾರಿಯಿಂದ ಬಿಗ್‌ಬಾಸ್‌ ಶೋಗೆ ಹೋಗಿದ್ದಾರೆ” ಎಂದು ಕಿರಿಕಾರಿದ್ದಾರೆ.

ಮತ್ತೊಬ್ಬ ಬಳಕೆದಾರ ಅಭಿಷೇಕ್ ಎಂಬವರು ಕೂಡ ಪ್ರದೀಪ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಎಲ್ಲರು ತೆರಿಗೆ ಪಾವತಿಸುತ್ತಾರೆ. ಅವರು ಸಂಬಳ ಮತ್ತು ಭತ್ಯೆಗಳನ್ನು ತೆಗೆದುಕೊಳ್ಳುತ್ತಾರೆ. ಪ್ರಪಂಚದೊಂದಿಗೆ ಸಂಪರ್ಕವೇ ಇರುವುದಿಲ್ಲ ಎನ್ನುವ ರಿಯಾಲಿಟಿ ಶೋಗಳಿಗೆ ಅವರು ಹೋಗುತ್ತಾರೆ. ಜನಪ್ರತಿನಿಧಿಗಳು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಮಂಜುನಾಥ್ ಎಂಬುವವರು, “ಏನಿದು ಸರ್? ಸಾರ್ವಜನಿಕ ಸೇವೆ ಮಾಡುವುದಕ್ಕಿಂತ ಬಿಗ್‌ಬಾಸ್ ಪ್ರವೇಶಿಸುವುದು ಹಾಸ್ಯಾಸ್ಪದವಾಗಿದೆ. ರಿಯಾಲಿಟಿ ಶೋಗಳಲ್ಲಿ ಭಾಗವಹಿಸಲು ಜನರು ಅವರನ್ನು ಆಯ್ಕೆ ಮಾಡಿದ್ದಾರೆಯೇ. ಎಂಎಲ್‌ಎ ಹುದ್ದೆಗೆ ಗೌರವವಿಲ್ಲವೇ?” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಕೆಲಸದಿಂದ ತೆಗೆದು ಹಾಕಿ ಸಂಬಳ ನೀಡಿಲ್ಲವೆಂದು ಕೋಪದಿಂದ ಕಂಪನಿಗೆ ಬೆಂಕಿ ಇಟ್ಟ ಉದ್ಯೋಗಿಗಳು

ಪ್ರದೀಪ್‌ ವಿರುದ್ಧ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ ಪಿ ಬಚ್ಚೇಗೌಡ ಮಾತನಾಡಿದ್ದು, “ಇದು ಅವರ ವೈಯಕ್ತಿಕ ವಿಚಾರ. ನನಗೆ ಬಂದ ಮಾಹಿತಿಯ ಪ್ರಕಾರ, ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಲವೇ ದಿನಗಳಲ್ಲಿ ಅವರು ಹೊರಬರುತ್ತಾರೆ. ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅವಕಾಶ ಕೊಡೋಣ. ಅದರ ಬಗ್ಗೆ ಈಗ ಪ್ರತಿಕ್ರಿಯಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...