ನಂಬಿದವರಿಗೆ ನಾಮ ಬಳಿಯುವ ವ್ಯಕ್ತಿ ಕುಮಾರಸ್ವಾಮಿ: ಕಾಂಗ್ರೆಸ್‌ ಕಿಡಿ

Date:

  • ‘ಎಚ್‌ಡಿಕೆ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ!’
  • ಕುಮಾರಸ್ವಾಮಿಯ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ!

ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?! ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾಂಗ್ರೆಸ್‌ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್‌, “ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ!” ಎಂದು ಟೀಕಿಸಿದೆ.

“ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ! ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ ‘ಕೋಮು-ಕುಂಡ’ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ” ಎಂದು ಕುಟುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತ್ಮಸಾಕ್ಷಿ ಮಾರಿಕೊಂಡ ವ್ಯಕ್ತಿ ಎಚ್‌ಡಿಕೆ

ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು. ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ!” ಎಂದು ವ್ಯಂಗ್ಯವಾಡಿದೆ.

“ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ ಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ? ನಿಮಗೇನಾದರೂ ಆತ್ಮಗೌರವ ಇದೆಯೇ” ಎಂದು ಪ್ರಶ್ನಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಹಸಿದ ಹೊಟ್ಟೆಗಳು ಹೇಳುತ್ತಿರುವ ಕುಬೇರರ ಕಥೆ

ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ

“ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ” ಎಂದು ವ್ಯಂಗ್ಯವಾಡಿದೆ.

“ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು!” ಎಂದು ಕಾಂಗ್ರೆಸ್‌ ಕಿಚಾಯಿಸಿದೆ.

ಮಕ್ಮಲ್ ಟೋಪಿ ಹಾಕಿದ್ದೇನು? 

“ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ? ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ?
ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ!” ಎಂದು ಕಿಡಿಕಾರಿದೆ.

“ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೆಂಗೆ ಒದ್ದಾಡುತ್ತೀರಿ ಅಂತಾ! ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ” ಎಂದಿದೆ.

“ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ, ಅಲ್ ದ ಬೆಸ್ಟ್!” ಎಂದು ಕಾಂಗ್ರೆಸ್‌ ಕುಟುಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...