ಮುಂದಿನ 15 ವರ್ಷ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ನಡೆಸಲಿದೆ: ಸಚಿವ ಜಮೀರ್‌ ವಿಶ್ವಾಸ

Date:

  • ಮುಸ್ಲಿಂ ಸಮುದಾಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು?: ಜಮೀರ್‌
  • ಸಣ್ಣ ಗಲಾಟೆಯಾದರೂ ಬಿಜೆಪಿಯವರು ಪಾಕಿಸ್ತಾನ ಮಾಡುತ್ತಾರೆ

ರಾಜ್ಯದಲ್ಲಿ ಮುಂದಿನ 15 ವರ್ಷಗಳ ಕಾಲ ಕಾಂಗ್ರೆಸ್‌ ಅಧಿಕಾರ ನಡೆಸಲಿದೆ. ಇದನ್ನು ಯಾರೂ ತಪ್ಪಿಸಲಾಗದು ಎಂದು ಸಚಿವ ಜಮೀರ್‌ ಅಹಮದ್ ಖಾನ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಮಾತನಾಡಿದ ಸಚಿವರು, “ಈಗಿನ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುವುದರಿಂದ ಮುಂದಿನ 15 ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರ ನಡೆಸುವುದು ಖಚಿತ” ಎಂದು ತಿಳಿಸಿದರು.

ಮುಖ್ಯಮಂತ್ರಿಯ ಅವಧಿ ಎಷ್ಟು ವರ್ಷ ಎನ್ನುವ ಪ್ರಶ್ನೆಗೆ ಉತ್ತರಿಸಿ, “ಹೈಕಮಾಂಡ್ ಅಣತಿಯಂತೆ ನಡೆಯುವ ಪಕ್ಷ ನಮ್ಮದು. ಎಲ್ಲ ತೀರ್ಮಾನಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಸ್ಲಿಂ ಸಮುದಾಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು?

ಜೆಡಿಎಸ್ – ಬಿಜೆಪಿ ಹೊಂದಾಣಿಕೆ ಆದ ಬಳಿಕ ಉಳಿದುಕೊಂಡಿರುವುದು ಏಕೈಕ ಜಾತ್ಯತೀತ ಪಕ್ಷ ಕಾಂಗ್ರೆಸ್. ಸರ್ಕಾರ ಹೋದರೆ ಮುಸಲ್ಮಾನರು ನನ್ನ ಬಳಿಯೇ ಬರಬೇಕು ಎನ್ನುವ ಕುಮಾರಸ್ವಾಮಿ ಮುಸಲ್ಮಾನರಿಗೆ ಏನು ಕೊಡುಗೆ ಕೊಟ್ಟಿದ್ದಾರೆ? ದೇವೇಗೌಡರ ಕೊಡುಗೆ ಇದೆ. ಮೀಸಲಾತಿ ವಿಚಾರ ಇರಲಿ, ಈದ್ಗಾ ಮೈದಾನ ವಿಚಾರ ಇರಲಿ ದೇವೇಗೌಡರ‌ ಕೊಡುಗೆ ಸಾಕಷ್ಟು ಇದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದ ಜಾತಿ ಜನಗಣತಿ- ಕಮಂಡಲ ರಾಜಕಾರಣ ಕಕ್ಕಾಬಿಕ್ಕಿ

ಸಣ್ಣ ಗಲಾಟೆಯಾದರೂ ಪಾಕಿಸ್ತಾನ ಮಾಡಲು ಹೋಗುತ್ತಾರೆ

“ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಆಗಬಾರದಿತ್ತು, ಆದರೆ ಆಗಿದೆ. ಬಿಜೆಪಿಯವರಿಗೆ ಹೇಳಲು ಏನು ಇಲ್ಲ. ಪ್ರತಿ ಸಲ ಸಣ್ಣ-ಪುಟ್ಟ ಗಲಾಟೆಯಾದರೂ ಸಿ ಟಿ ರವಿ, ಈಶ್ವರಪ್ಪ ಆಗಲಿ, ಅದನ್ನು ಪಾಕಿಸ್ತಾನ ಮಾಡಲು ಹೊಗುತ್ತಾರೆ. ಜಿಲ್ಲಾಡಳಿತದಿಂದ ಅನುಮತಿ ಪಡೆದು ಔರಂಗಜೇಬ್ ಕಟೌಟ್ ಮೆರವಣಿಗೆ ಮಾಡಿದ್ದೀವಿ. ಆದರೆ, ಪರ್ಮಿಷನ್ ಇಲ್ಲವೆಂದು ಮಾಧ್ಯಮದವರು ಹೇಳಿದ್ದಾರೆ. ಈಗ ಆ ಬಗ್ಗೆ ಚರ್ಚೆ ಬೇಡ. ಈಗ ಶಾಂತವಾಗಿದೆ. ಯಾವ ಸಮಸ್ಯೆನೂ ಇಲ್ಲ” ಎಂದರು.

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ” ಹಿರಿಯ ನಾಯಕರು, ಅವರ ಬಗ್ಗೆ ಗೌರವವಿದೆ. 7 ಜನ ಲಿಂಗಾಯತರನ್ನು ನಾವು ಮಂತ್ರಿ ಮಾಡಿದ್ದೇವೆ. ಅವರಂತೆ ನಾನು ಮುಸ್ಲಿಂಮರಿಗೆ ಇಂತಹ ಕಡೆ ಪೋಸ್ಟ್ ಕೊಡಿ ಎಂದು ಹೇಳಲಾಗುತ್ತಾ? ಯಾವ ಅಧಿಕಾರಿ ಉತ್ತಮ ಕೆಲಸ ಮಾಡ್ತಾರೆ ಅವರನ್ನು ಹಾಕಿಸಿಕೊಳ್ಳಬೇಕು. ಕಲಬುರಗಿಯಲ್ಲಿ ಫೌಜಿಯಾ ಎಂಬ ಡಿಸಿ ಇದ್ದಾರೆ. ಅವರು ಒಳ್ಳೆ ಕೆಲಸ ಮಾಡಿದ್ದಾರೆ, ಅವರಿಗೆ ಡಿಮ್ಯಾಂಡ್ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...