‌ಪ್ರಧಾನಿ ಮೋದಿಯವರ ಚಿತ್ರವನ್ನು ಕಾಂಗ್ರೆಸ್‌ ವಿರೂಪಗೊಳಿಸಿದ್ದು ಅಪರಾಧ: ಆರ್‌ ಅಶೋಕ್

Date:

ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಕಾಂಗ್ರೆಸ್‌ ವಿರೂಪಗೊಳಿಸಿದ್ದು ಅಪರಾಧ. ಪ್ರಧಾನಿಯವರ ವ್ಯಕ್ತಿತ್ವಕ್ಕೆ ಕಾಂಗ್ರೆಸ್‌ ಅಪಮಾನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ಹೊರಹಾಕಿದರು.

‌ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿಯವರ ವ್ಯಕ್ತಿತ್ವಕ್ಕೆ ಅಪಮಾನ ಮಾಡುವಂತೆ ಕಾಂಗ್ರೆಸ್‌ ಪೋಸ್ಟ್‌ ಮಾಡಿದೆ. ಸಿಎಂ ಸಿದ್ದರಾಮಯ್ಯ, ಸಚಿವ ತಿಮ್ಮಾಪುರ ಅವರ ಹೇಳಿಕೆ ನಮ್ಮ ಹೇಳಿಕೆಯಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಸ್ಪಷ್ಟವಾಗಿ ಹೇಳಿದ್ದಾರೆ. ಅಂದಮೇಲೆ ಇವರಿಗೆಲ್ಲ ಯಾವ ಮರ್ಯಾದೆ ಉಳಿದಿದೆ? ಅವರ ಪಕ್ಷದವರೇ ಮರ್ಯಾದೆ ಕೊಡದ ಸ್ಥಿತಿಯಲ್ಲಿರುವ ಇವರು ಪ್ರಧಾನಿಯ ಚಿತ್ರವನ್ನು ಕೆಟ್ಟದಾಗಿ ರೂಪಿಸಿರುವುದು ಅಪರಾಧ” ಎಂದರು.

“ಕಾಂಗ್ರೆಸ್‌ ನಾಯಕರು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಅಸಾದುದ್ದೀನ್ ಓವೈಸಿ‌ ಪಾಕಿಸ್ತಾನಕ್ಕೆ ಸವಾಲು ಹಾಕಿದ್ದಾರೆ. ಸಿಎಂ ರೇವಂತ್‌ ರೆಡ್ಡಿ ಕೂಡ ದೇಶಭಕ್ತಿ ಪ್ರದರ್ಶಿಸಿದ್ದಾರೆ. ಇವರೆಲ್ಲರೂ ಅಂಥವರ ಬಳಿ ದೇಶಭಕ್ತಿಯ ಪಾಠ ಹೇಳಿಸಿಕೊಳ್ಳಬೇಕು. ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯೇ ತಪ್ಪು ಒಪ್ಪಿಕೊಂಡಿದ್ದಾರೆ. ಆದರೆ ಇಲ್ಲಿನ ಕಾಂಗ್ರೆಸ್‌ ನಾಯಕರು ಎಲ್ಲಕ್ಕೂ ಪ್ರಧಾನಿ ಮೋದಿಯನ್ನು ಪ್ರಶ್ನಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅತಿ ಕಡಿಮೆ ಮತಗಳಲ್ಲಿ ಗೆದ್ದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಅವರು ಲಾಹೋರ್‌ಗೆ ಹೋಗಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತ ಅಂತರದಲ್ಲಿ ಜಯ ಸಾಧಿಸಬಹುದು. ಮುಂದೆ ಅವರಿಗೆ ಪಾಕಿಸ್ತಾನದ ನಾಗರಿಕ ಪ್ರಶಸ್ತಿಯೂ ಸಿಗಬಹುದು. ಎಲ್ಲರೂ ನಿಮ್ಮ ಜೊತೆಗಿದ್ದೀನಿ ಎಂದು ಹೇಳುವಾಗ ಸಿದ್ದರಾಮಯ್ಯ ನಿಮ್ಮ ಜೊತೆಗಿಲ್ಲ ಎನ್ನುತ್ತಾರೆ. ಶಾಂತಿಪ್ರಿಯರೆಂದು ಹೇಳಿಕೊಳ್ಳುವ ಇವರು ಪೊಲೀಸ್‌ ಅಧಿಕಾರಿಗೆ ಹೊಡೆಯಲು ಹೋಗಿದ್ದಾರೆ. ಇದು ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅವಮಾನ. ಪೊಲೀಸರನ್ನು ಯಾರು ಬೇಕಾದರೂ ಹೊಡೆಯಬಹುದು ಎಂದು ಮುಖ್ಯಮಂತ್ರಿಯೇ ಸಂದೇಶ ನೀಡಿದ್ದಾರೆ. ಮತ್ತೊಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ನೀನ್ಯಾಕೆ ಬಂದೆ ಎಂದು ಪ್ರಶ್ನಿಸುತ್ತಾರೆ. ಇಂತಹ ದುರಂಹಕಾರ ಬಹಳ ದಿನ ನಡೆಯುವುದಿಲ್ಲ. ಕುರ್ಚಿ ಬಿಡಬೇಕಿರುವುದರಿಂದಲೇ ಎಲ್ಲರಿಗೂ ಹೀಗೆ ಬೈಯುತ್ತಿದ್ದಾರೆ” ಎಂದು ಟೀಕಿಸಿದರು.

“ಕರ್ನಾಟಕ ರೌಡಿಗಳ ರಾಜ್ಯವಾಗಿದೆ. ಇಂತಹ ಸ್ಥಿತಿಯಲ್ಲಿ ಪೊಲೀಸರಿಗೆ ಹೊಡೆಯಲು ಹೋದರೆ ಮುಂದೆ ಜನರು ಕೂಡ ಹೊಡೆಯುತ್ತಾರೆ. ಕಾಂಗ್ರೆಸ್‌ಗೆ ಬಿಜೆಪಿಯನ್ನು ತಡೆಯಲು ಸಾಧ್ಯವಿಲ್ಲ. ಇವರು ಪಾಕಿಸ್ತಾನದ ಪರವಾಗಿ ಮಾತಾಡಿದ್ದಕ್ಕೆ ಹೋರಾಟ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇವೆಲ್ಲ ಸಾಮಾನ್ಯ. ಅದನ್ನು ಸಹಿಸಲು ಇವರಿಗೆ ಆಗಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...