ಭ್ರೂಣ ಪರೀಕ್ಷೆ ಮತ್ತು ಹತ್ಯೆ ತಡೆಗೆ ವಿಶೇಷ ನೀತಿ ಜಾರಿಗೆ ಚಿಂತನೆ: ದಿನೇಶ್‌ ಗುಂಡೂರಾವ್

Date:

ರಾಜ್ಯದಲ್ಲಿ ನಡೆಯುತ್ತಿರುವ ಕಾನೂನುಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ವಿಶೇಷವಾದ ನೀತಿ ಜಾರಿ ಮಾಡಲು ಸರ್ಕಾರದಿಂದ ಚಿಂತನೆ ನಡೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಭಾರತಿ ಶೆಟ್ಟಿ, ಶರವಣ ಟಿ.ಎ., ಬಿ.ಎಂ.ಫಾರೂಖ್, ಸಿ.ಎನ್.ಮಂಜೇಗೌಡ ಅವರು ವಿಧಾನ ಪರಿಷತನಲ್ಲಿ ಗಮನ ಸೆಳೆಯುವ ಸೂಚನೆಯಡಿ ಕೇಳಿದ ವಿಷಯದ ಬಗ್ಗೆ ಸಚಿವರು ಪ್ರತಿಕ್ರಿಯಿಸಿದರು.

“ಕಾನೂನುಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಹೇಗೆ ಭೇದಿಸಬಹುದು ಎಂಬುದರ ಬಗ್ಗೆ ಆರೋಗ್ಯ ಇಲಾಖೆಯು ಎಚ್ಚೆತ್ತುಕೊಂಡು ಗಂಭೀರ ಚಿಂತನೆ ನಡೆಸಿದೆ. ಈ ಬಗ್ಗೆ ಅಂಕಿಸಂಖ್ಯೆಗಳನ್ನು ಸಂಗ್ರಹಿಸಿ, ಗುಪ್ತಚರ ಮಾಹಿತಿ ಪಡೆದು ಇಲಾಖೆಯ ಕಾರ್ಯಾಚರಣೆಯನ್ನು ಬಲಗೊಳಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಪಿಸಿಪಿಎನ್‌ಡಿಸಿ ಸೆಲ್‌ಗಳು ಕಾಲಕಾಲಕ್ಕೆ ಸಭೆ ನಡೆಸಿ ಜಿಲ್ಲಾ ಹಂತದಲ್ಲಿ ಕಾನೂನುಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣ ತಡೆಗೆ ಕಾರ್ಯಪ್ರವೃತ್ತವಾಗಿವೆ. ಸಕ್ರಿಯವಾಗಿ ಇನ್ನಷ್ಟು ಕಾರ್ಯಪ್ರವೃತ್ತವಾಗಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಪಿಸಿಪಿಎನ್‌ಡಿಟಿ ಸೆಲ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗುವುದು” ಎಂದರು.

“ಹೆಣ್ಣು ಮಗುವಿನ ಬಗ್ಗೆ ತಾತ್ಸಾರ ಮನೋಭಾವ ಸಲ್ಲದು. ಹೆಣ್ಣು ಮಗು ಕುಟುಂಬಕ್ಕೆ ಸಮಾಜಕ್ಕೆ ಭಾರ ಅನ್ನುವ ಮನಸ್ಥಿತಿಯಿಂದಲೇ ಕಾನೂನುಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳು ಕಂಡು ಬರುತ್ತಿವೆ. ಹೀಗಾಗಿ ಜನರಲ್ಲಿ ಈ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಕಾನೂನು ಉಲ್ಲಂಘಿಸಿದರೆ ಜೈಲು ಸೇರಬೇಕಾಗುತ್ತದೆ ಎಂಬುದಾಗಿ ತಪ್ಪಿತಸ್ಥರಲ್ಲಿ ಭಯ ಹುಟ್ಟಲು ಬಿಗಿಯಾದ ಕಾನೂನು ಕ್ರಮಗಳನ್ನು ರೂಪಿಸಲು ಮತ್ತು ಇಲಾಖೆಯ ಕಾರ್ಯಾಚರಣೆಯನ್ನು ಬಲಗೊಳಿಸುವ ಎಲ್ಲ ಕ್ರಮಗಳನ್ನು ಏಕಕಾಲಕ್ಕೆ ನಡೆಸಲಾಗುವುದು” ಎಂದು ಸಚಿವರು ತಿಳಿಸಿದರು.

“ಜಿಲ್ಲೆಗಳಲ್ಲಿರುವಂತೆ ರಾಜ್ಯಮಟ್ಟದಲ್ಲಿನ ಪಿಸಿಪಿಎನ್‌ಡಿಟಿ ಸೆಲ್‌ನ್ನು ಸಹ ಇನ್ನಷ್ಟು ಸಕ್ರಿಯಗೊಳಿಸಲಾಗುವುದು. ಕಾನೂನುಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಬೇಕು ಎಂದು ಈಗಾಗಲೇ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯ ಸಹಕಾರ ಪಡೆದು ಶಾಲಾ ಕಾಲೇಜುಗಳಲ್ಲಿ ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ಕ್ರಮ ವಹಿಸಲಾಗುವುದು. ಪೊಲೀಸ್ ಇಲಾಖೆಯ ಸಹಕಾರ ಪಡೆದು ಕಾನೂನುಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಹತ್ತಿಕ್ಕಲಾಗುವುದು” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...