ಬೆಂಗಳೂರು ನಗರ | ಹೈಟೆಕ್‌ ಕ್ರೀಡಾಂಗಣ ನಿರ್ಮಾಣ‌, ₹10 ಕೋಟಿ ಅನುದಾನ: ಡಿಕೆ ಶಿವಕುಮಾರ್

Date:

  • ಆನೇಕಲ್ ಪಟ್ಟಣದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಭರವಸೆ
  • ವಕೀಲ ಸಂಘದಿಂದ ಬೇಡಿಕೆ, ಎಸಿ ಕೋರ್ಟ್‌ ಸ್ಥಾಪಿಸಲು ಅಗತ್ಯ ಕ್ರಮ: ಡಿಕೆಶಿ

ಬೆಂಗಳೂರು ನಗರ ಜಿಲ್ಲೆಯಲ್ಲಿ ಹೈಟೆಕ್‌ ಕ್ರೀಡಾಂಗಣ ನಿರ್ಮಾಣಕ್ಕೆ ₹10 ಕೋಟಿ ಅನುದಾನ ಮಂಜೂರು ಮಾಡಲಾಗುವುದು. ಇದರ ಸಂಬಂಧವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಣ ಬಿಡುಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಉಸ್ತುವಾರಿ ಸಚಿವ ಡಿ ಕೆ ಶಿವಕುಮಾರ್ ಭರವಸೆ ನೀಡಿದರು.

ಆನೇಕಲ್ ಪಟ್ಟಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಆನೇಕಲ್‌ ತಾಲ್ಲೂಕಿನ ಎಲ್ಲ ಗ್ರಾಮಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ ಮಾಡಲು ಶಾಸಕರು ಮತ್ತು ಸಂಸದರು ಮನವಿ ಮಾಡಿದ್ದು, ತಾಲ್ಲೂಕಿನ ಎಲ್ಲ ಗ್ರಾಮಗಳಿಗೂ ಕಾವೇರಿ ನೀರು ಪೂರೈಕೆ ಮಾಡಲಾಗುವುದು” ಎಂದರು.

“ಜನತಾ ದರ್ಶನದಲ್ಲಿ ಸಾರ್ವಜನಿಕರು ನೀಡಿರುವ ಎಲ್ಲ ಅರ್ಜಿಗಳ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆನೇಕಲ್‌ಗೆ ವಕೀಲ ಸಂಘದ ವತಿಯಿಂದ ಬೇಡಿಕೆಯನ್ನು ಸಲ್ಲಿಸಿದ್ದು ಎಸಿ ಕೋರ್ಟ್‌ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸದ ಡಿ ಕೆ ಸುರೇಶ್‌ ಮಾತನಾಡಿ, “ಆನೇಕಲ್‌ ಪಟ್ಟಣಕ್ಕೆ ಕಾವೇರಿ ನೀರು ಪೂರೈಕೆ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ತಾಲ್ಲೂಕಿನ ಎಲ್ಲ ಭಾಗಗಳಿಗೂ ಕಾವೇರಿ ನೀರು ಪೂರೈಕೆಗೆ ಡಿಪಿಆರ್ ಮಾಡಲಾಗಿದೆ. ಉಪಮುಖ್ಯಮಂತ್ರಿಗಳು ಮಂಜೂರು ಮಾಡುವ ಭರವಸೆ ನೀಡಿದ್ದಾರೆ” ಎಂದರು.

ಆನೇಕಲ್ ಶಾಸಕ ಬಿ.ಶಿವಣ್ಣ ಮಾತನಾಡಿ, ಆನೇಕಲ್‌ ತಾಲ್ಲೂಕಿನ ಬೊಮ್ಮಸಂದ್ರದವರೆಗೆ ಮೆಟ್ರೋ ಯೋಜನೆ ಜಾರಿಯಾಗಿದ್ದು, ತಾಲ್ಲೂಕಿನ ಅತ್ತಿಬೆಲೆ, ಸರ್ಜಾಪುರ, ಆನೇಕಲ್‌ಗೆ ಮೆಟ್ರೋ ಯೋಜನೆ ವಿಸ್ತರಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸೌಲಭ್ಯಗಳನ್ನು ವಿತರಿಸಲಾಯಿತು. ಗೃಹ ಲಕ್ಷ್ಮೀ 94ಸಿ ಅಡಿಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಣೆ, ಹೆಬ್ಬಗೋಡಿ ನಗರಸಭೆ ವತಿಯಿಂದ ಲ್ಯಾಪ್‌ಟಾಪ್‌ ವಿತರಣೆ ಹಾಗೂ ವಿಕಲಚೇತನ ವಿದ್ಯಾರ್ಥಿಗಳಿಗೆ ವಿವಿಧ ಪರಿಕರಗಳನ್ನು ವಿತರಿಸಲಾಯಿತು. ಜನತಾ ದರ್ಶನದಲ್ಲಿ ಒಟ್ಟು ವಿವಿಧ ಇಲಾಖೆಗಳಿಂದ ಒಟ್ಟು 255 ಅರ್ಜಿಗಳನ್ನು ಸ್ವೀಕರಿಸಲಾಯಿತು.

ಸಮಾರಂಭದಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ ಎ ದಯಾನಂದ್‌, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಕಾಂತರಾಜು, ಉಪವಿಭಾಗಾಧಿಕಾರಿ ರಜನಿಕಾಂತ್‌, ತಹಶೀಲ್ದಾರ್‌ ಶಶಿಧರ್‌ ಮಾಡ್ಯಾಳ್‌, ಎಎಸ್ಪಿ ಎಂ.ಎಲ್‌.ಪುರುಷೋತ್ತಮ್‌, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್‌ರೆಡ್ಡಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...