ಹೊರಗುತ್ತಿಗೆ ನೇಮಕಾತಿ ನಿಯಮಗಳಲ್ಲಿ ಮಾರ್ಪಾಡು ಮಾಡಿ: ರಾಜ್ಯದ ಹಲವೆಡೆ ದಸಂಸದಿಂದ ಪ್ರತಿಭಟನೆ

Date:

ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸುವಂತೆ ಒತ್ತಾಯಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿದರು.

2024ರ ಮೇ 20ರಂದು ರಾಜ್ಯ ಸರ್ಕಾರದ ಸುತ್ತೋಲೆ ಹೊರಡಿಸಿದೆ.‌ ಈ ಸುತ್ತೋಲೆಯಲ್ಲಿ ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮಗಳನ್ನು ಅನ್ವಯಿಸಿ ನೇಮಕ ಪ್ರಕ್ರಿಯೆ ನಡೆಸಲು ಆದೇಶ ನೀಡಿದೆ. ಇದನ್ನು ದಲಿತ ಸಂಘರ್ಷ ಸಮಿತಿಯು ಸ್ವಾಗತಿಸುತ್ತದೆ. ಆದರೆ, ಸುತ್ತೋಲೆಯ 1ನೇ ಮತ್ತು 6ನೇ ಷರತ್ತುಗಳು ಈ ಆದೇಶದ ಸದುದ್ದೇಶದ ಆಶಯಗಳಿಗೇ ವಿರುದ್ಧವಾಗಿವೆ” ಎಂದು ಸಂಘಟನೆ ಖಂಡಿಸಿದೆ.

ಯಾದಗಿರಿ ಪ್ರತಿಭಟನೆ
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಲಾದ ಪ್ರತಿಭಟನೆ

“1ನೇ ಷರತ್ತಿನಲ್ಲಿ ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ ಎಂದಿದೆ. ಇದು ಮೀಸಲಾತಿ ವಿರೋಧಿಗಳಿಗೆ ಅನುಕೂಲಕರವಾಗಿದ್ದು, ಅದನ್ನು ರದ್ದುಪಡಿಸಬೇಕು. 6ನೇ ಷರತ್ತಿನಲ್ಲಿ ‘ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು” ಎಂದಿರುವುದು ತುಂಬಾ ಅವೈಜ್ಞಾನಿಕ ಮತ್ತು ದುರುದ್ದೇಶಪೂರಿತವಾಗಿದೆ” ಎಂದು ದಸಂಸ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮೈಸೂರು ಪ್ರತಿಭಟನೆ
ದಸಂಸದಿಂದ ಮೈಸೂರಿನಲ್ಲಿ ನಡೆದ ಪ್ರತಿಭಟನೆ

ಮೀಸಲಾತಿಯನ್ನು ವಂಚಿಸಿಲು ಸದಾ ಸಿದ್ದ ಇರುವವರಿಗೆ ಈ ನಿಬಂಧನೆ ಸಹಕಾರಿ ಆಗಲಿದೆ. 20ಕ್ಕೂ ಹೆಚ್ಚಿನ ಸಂಖ್ಯೆ ನೇಮಕಾತಿಗಳಿದ್ದಾಗ ಮಾತ್ರ ಮೀಸಲಾತಿ ನೀತಿ ಅನ್ವಯಿಸುತ್ತದೆ ಎಂದು ಸರ್ಕಾರವೇ ನಿರ್ಬಂಧ ಒಡ್ಡಿದರೆ, ಎಲ್ಲ ನೇಮಕಾತಿ ಉದ್ಯೋಗಗಳನ್ನು 20ರ ಒಳಗೇ ನಿಗದಿ ಮಾಡುತ್ತಾ ಹೋಗುವ ಮೀಸಲಾತಿ ವಂಚಕರ ಚಾಳಿಗೆ ಇದು ರತ್ನಗಂಬಳಿ ಹಾಸಿ ರಹದಾರಿ ಕಲ್ಪಿಸಿ ಕೊಟ್ಟಂತಾಗುತ್ತದೆ” ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

ಗದಗ ಪ್ರತಿಭಟನೆ
ದಸಂಸ ಗದಗ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಲಾದ ಪ್ರತಿಭಟನೆ
ಕೊಡಗು ಪ್ರತಿಭಟನೆ
ಕೊಡಗು ಪ್ರತಿಭಟನೆ

ಇದುವರೆಗೆ ನಡೆದಿರುವ ನೇಮಕಾತಿ ಪ್ರಕ್ರಿಯೆಗಳನ್ನು ಅವಲೋಕನ ಮಾಡಿದರೆ ಜಾತಿವಾದಿ ಅಧಿಕಾರಿಗಳ ಮೀಸಲಾತಿ ವಿರೋಧಿ ದುರಾಡಳಿತಕ್ಕೆ ಸಾಕಷ್ಟು ಪುರಾವೆಗಳು ಸಿಗುತ್ತವೆ. ಸಮಾಜದಲ್ಲಿ ಮೀಸಲಾತಿ ಬಗ್ಗೆ ಅಸಹನ ತುಂಬಿ ತುಳುಕುತ್ತಿರುವ ಹೊತ್ತಿನಲ್ಲಿ, ಇಂತಹ ಷರತ್ತು ಬದ್ಧ ಆದೇಶವು, ನೇಮಕಾತಿ ಮಾಡುವ ವೇಳೆ ಪಕ್ಷಪಾತ ಮಾಡುವ ಜಾತಿವಾದಿ ಅಧಿಕಾರಿಗಳಿಗೆ ಕಾನೂನು ಬದ್ಧ ಪ್ರೋತ್ಸಾಹ ನೀಡಿದಂತಾಗುವುದರಲ್ಲಿ ಸಂದೇಹವೇ ಇಲ್ಲ. ಹಾಗಾಗಿ ಸದರಿ 1 ಮತ್ತು 6 ನೇ ಷರತ್ತನ್ನು ರದ್ದು ಪಡಿಸಲು ಸಾಮಾಜಿಕ ನ್ಯಾಯಕ್ಕೆ ಬದ್ಧತೆ ಹೊಂದಿರುವ ತಮ್ಮ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ದಸಂಸ ಹೋರಾಟಗಾರರು ಆಗ್ರಹಿಸಿದ್ದಾರೆ.

ಬೆಳಗಾವಿ ಪ್ರತಿಭಟನೆ
ಬೆಳಗಾವಿ ಪ್ರತಿಭಟನೆ

ಹುದ್ದೆಗಳ ಸಂಖ್ಯೆ ಎಷ್ಟೇ ಇರಲಿ ಮತ್ತು ಎಷ್ಟೇ ಅವಧಿಯದ್ದಾಗಿರಲಿ ಅಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ “ರೋಸ್ಟರ್ ನಿಯಮಗಳ ಅನುಸಾರವಾಗಿ ನೇಮಕಾತಿ ಪ್ರಕ್ರಿಯೆಗಳು ಕಡ್ಡಾಯದಾಗಿ ಇರಲೇಬೇಕು ಎಂದು ಸರ್ಕಾರ ಸದರಿ ಆದೇಶವನ್ನು ಮಾರ್ಪಾಡು ಮಾಡಿ, ಮರು ಸುತ್ತೋಲೆ ಹೊರಡಿಸಬೇಕು. ಒಂದು ವೇಳೆ ಸರ್ಕಾರ ಈ ಸಂಬಂಧವಾಗಿ ಯಾವುದೇ ತುರ್ತು ಕ್ರಮ ಕೈಗೊಳ್ಳದೇ ಇದ್ದಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಎಂದು ದಸಂಸ ಎಚ್ಚರಿಕೆ ನೀಡಿದೆ.

ಮಂಡ್ಯ ಪ್ರತಿಭಟನೆ
ಮಂಡ್ಯ ಪ್ರತಿಭಟನೆ

ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಪ್ರತಿಭಟನೆ ಹಮ್ಮಿಕೊಂಡು, ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.

ಗುರುಪ್ರಸಾದ್ ಕೆರಗೋಡು ಸಂಚಾಲಕರಾಗಿರುವ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ಕರೆಯ ಮೇರೆಗೆ ಮೈಸೂರು, ಚಾಮರಾಜನಗರ, ಯಾದಗಿರಿ, ಗದಗ, ಕೊಡಗು, ಮಂಡ್ಯ, ಬೆಳಗಾವಿ, ಕಲಬುರಗಿ, ಚಿಕ್ಕಬಳ್ಳಾಪುರ, ಪೊನ್ನಂಪೇಟೆ ಸೇರಿದಂತೆ ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ವೇಳೆ ಆಯಾ ಜಿಲ್ಲೆ ಹಾಗೂ ತಾಲೂಕಿನ ದಲಿತ ಸಂಘರ್ಷ ಸಮಿತಿಯ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...