ಪ್ರಿಯಾಂಕ್‌ ಖರ್ಗೆ ಆಪ್ತನಿಂದ ಬೆದರಿಕೆ ಪ್ರಕರಣ; ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳ ಅಮಾನತು

Date:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ, ಕಾಂಗ್ರೆಸ್ ಮುಖಂಡ ರಾಜು ಕಪನೂರ ಹಾಗೂ ಇತರೆ ಎಂಟು ಜನರಿಂದ ಜೀವ ಬೆದರಿಕೆ ಇರುವುದಾಗಿ ಡೆತ್‌ನೋಟ್ ಬರೆದು ಯುವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ನಗರದ ಗಾಂಧಿಗಂಜ್ ಪೊಲೀಸ್ ಠಾಣೆಯ ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳನ್ನು ಶುಕ್ರವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ರಾಜೇಶ್ ಚೆಲ್ವಾ ಹಾಗೂ ಶಾಮಲಾ ಅಮಾನತುಗೊಂಡವರು.

ಬೀದರ್‌ನ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮದಯುವ ಗುತ್ತಿಗೆದಾರ ಸಚಿನ್ಮಾನಪ್ಪ ಪಾಂಚಾಳ್ (26) ಅವರು ಗುರುವಾರ (ಡಿ.26) ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದರು. ಇದನ್ನು ನೋಡಿ ಗಾಬರಿಗೊಂಡ ಸಚಿನ್ ಕುಟುಂಬ ಸದಸ್ಯರು ಗಾಂಧಿ ಗಂಜ್ ಠಾಣೆಗೆ ತೆರಳಿದ್ದರು. ಸಚಿನ್‌ನನ್ನು ಹುಡುಕಿಕೊಡುವಂತೆ ವಿಷಯ ತಿಳಿಸಿ, ದೂರು ಕೊಡಲು ಮುಂದಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಬರಿ ಮಸೀದಿ ಕೆಡವಿದಾಗಲೇ ‘ಸಾಮರಸ್ಯ’ ಸಮಾಧಿಯಾಗಿತ್ತಲ್ಲವೇ?

ಈ ವೇಳೆ ಠಾಣೆಯಲ್ಲಿದ್ದ ಹೆಡ್ ಕಾನ್‌ಸ್ಟೆಬಲ್‌ಗಳಾದ ರಾಜೇಶ್ ಚೆಲ್ವಾ ಮತ್ತು ಶಾಮಲಾ ಅವರು ದೂರು ಸ್ವೀಕರಿಸಿ, ಎಫ್ಐಆರ್ ದಾಖಲಿಸಿರಲಿಲ್ಲ. ಮೃತ ಯುವಕ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮದವನಾದ ಕಾರಣ, ಧನ್ನೂರ ಪೊಲೀಸ್ ಠಾಣೆಗೆ ಹೋಗಿ ದೂರು ಕೊಡುವಂತೆ ಹೇಳಿದ್ದರು. ದೂರು ಸ್ವೀಕರಿಸಿದೆ ನಿರ್ಲಕ್ಷ್ಯ ತೋರಿ, ಕರ್ತವ್ಯಲೋಪ ಎಸಗಿದ ಕಾರಣಕ್ಕಾಗಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...