ಅಕ್ರಮ ಹಣ ಪತ್ತೆ ಪ್ರಕರಣ; ಸಿಬಿಐ, ಇಡಿ ತನಿಖೆಯಾಗಲಿ: ಬೊಮ್ಮಾಯಿ ಆಗ್ರಹ

Date:

  • ಗುತ್ತಿಗೆದಾರರ ಸಂಘ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ 
  • ರಾಜ್ಯ ಸರ್ಕಾರ ಬಂದಾಗಿನಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ

ರಾಜ್ಯ ಸರ್ಕಾರ ಮತ್ತು ಗುತ್ತಿಗೆದಾರರು ಜೊತೆಯಾಗಿ ಲೂಟಿ ಮಾಡುತ್ತಿದ್ದು, ಕಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರವಾಗಿ ಆರೋಪಿಸಿದರು.

ಶನಿವಾರ ಮಾಧ್ಯಮಗಳಿಗೆ ಮಾತನಾಡಿದ ಅವರು, “ಅಕ್ರಮ ಹಣ ಪತ್ತೆಯಾಗಿರುವ ಕುರಿತು ಇಡಿ ಹಾಗೂ ಸಿಬಿಐ ಎರಡೂ ತನಿಖೆಯಾಗಲಿ. ರಾಜ್ಯ ಸರ್ಕಾರ ಬಂದಾಗಿನಿಂದ ವರ್ಗಾವಣೆಯಿಂದ ಹಿಡಿದು ಎಲ್ಲದರಲ್ಲೂ ಭ್ರಷ್ಟಾಚಾರ ಇದೆ. ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಇದು” ಎಂದು ವಾಗ್ದಾಳಿ ನಡೆಸಿದರು.

“ಗ್ರಾಮದಿಂದ ಹಿಡಿದು ವಿಧಾನಸೌಧದವರೆಗೂ ಭ್ರಷ್ಟಾಚಾರ ಇದೆ. ಬಹಿರಂಗವಾಗಿಯೇ ಕಮಿಷನ್ ದಂಧೆ ನಡೆಯುತ್ತಿದೆ. ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಯಾದ ತಕ್ಷಣವೇ ಗುತ್ತಿಗೆದಾರನ ಸಂಬಂಧಿಕರ ಮನೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಸಿಕ್ಕಿರುವುದು ಇದೇ ಮೊದಲು. ಸರ್ಕಾರ 10% ಕಮಿಷನ್ ಪಡೆದಿರುವದು ಸಾಬೀತಾಗಿದೆ. ಇನ್ನಷ್ಟು ಗುತ್ತಿಗೆದಾರರ ಮನೆಮೇಲೆ ದಾಳಿ ಮಾಡಿದರೆ ಇನಷ್ಟು ಕಮಿಷನ್ ಹಣ ಹೊರ ಬರಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲೆಕ್ಷನ್ ಸೆಂಟರ್

“ಗುತ್ತಿಗೆದಾರರ ಸಂಘದವರು ನಮ್ಮ ಮೇಲೆ ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡಿದ್ದರು. ಈಗ ಕಂಟ್ರಾಕ್ಟರ್ ಅಸೋಷಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಈ ಹಿಂದೆ ಇದೇ ವ್ಯಕ್ತಿ ಲಂಚ ಕೊಟ್ಟಿರುವ ಆರೋಪ ಬಂದಾಗ ಆತ ನಾನು ಕಂಟ್ರಾಕ್ಟ್ ಮಾಡಿಲ್ಲ ಅಂತ ಹೇಳಿದ್ದರು. ಕಂಟ್ರಾಕ್ಟರ್ ಮತ್ತು ಸರ್ಕಾರ ಒಂದಾಗಿ ರಾಜ್ಯ ಲೂಟಿ ಮಾಡಿದ್ದಾರೆ. ಅಕ್ರಮ ಹಣ ಸಂಗ್ರಹದ ಹಿನ್ನೆಲೆಯಲ್ಲಿ ಮನಿ ಲ್ಯಾಂಡರಿಂಗ್ ಆಕ್ಟ್ ನಲ್ಲಿ ಇಡಿ ತನಿಖೆ ಆಗಬೇಕು. ಭ್ರಷ್ಟಾಚಾರ ಕಾಯ್ದೆಯಡಿ ಸಿಬಿಐ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರವೇನೋ ಬದಲಾಯಿತು, ಕೋಮುವಾದಿಗಳ ಅಟಾಟೋಪಗಳಿಗೆ  ಅಂಕುಶ ಯಾವಾಗ?

ಆಯೋಗಕ್ಕೆ ನೀಡಿ

“ಈ ಪ್ರಕರಣದಲ್ಲಿ ಮುಖ್ಯಮಂತ್ರಿಯ ಯಾವುದೇ ಪಾತ್ರ ಇಲ್ಲದಿದ್ದರೆ, ಅವರೇ ನೇಮಿಸಿರುವ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗಕ್ಕೆ ಈ ಪ್ರಕರಣ ನೀಡಬೇಕು. ಇಲ್ಲವೇ ಲೋಕಾಯುಕ್ತಕ್ಕೆ ನೀಡಬೇಕು. ಈ ಪ್ರಕರಣದ ಮೂಲ ಪತ್ತೆ ಆಗಬೇಕಾದರೆ ತನಿಖೆ ಆಗಬೇಕು” ಎಂದರು.

“ಐದು ರಾಜ್ಯದ ಚುನಾವಣೆಗೆ ಎಟಿಎಂ ತರಹ ಕೆಲಸ ಮಾಡುತ್ತಿರುವ ನೀವು ಭ್ರಷ್ಟಾಚಾರದ ವಿರುದ್ದ ಮಾತನಾಡುವ ನೈತಿಕತೆ ಇಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರೇ, 42 ಕೋಟಿ ಸಿಕ್ಕಿರುವುದಕ್ಕೂ ಸಿಎಂ ಭೇಟಿ ಮಾಡಿರುವುದಕ್ಕೂ ಏನಾದರೂ ಸಂಬಂಧವಿದೆಯೇ. ಇದೇ ಭ್ರಷ್ಟಾಚಾರದ ಪುರಾವೆಯಾಗಿದೆ. ಲಂಚ ಕೊಟ್ಟವರಿಗೆ ಬಿಲ್ ಬಿಡುಗಡೆ ಮಾಡುತ್ತಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ಸರಿಪಡಿಸುವುದಾಗಿ ಹೇಳಿದ್ದಾರೆ. ಅಂದರೆ ಭ್ರಷ್ಟಾಚಾರ ನಡೆದಿದೆ ಎನ್ನುವುದು ಅವರು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದರು.

ಹೀನ ಮನಸ್ಥಿತಿ ಭಗವಾನ್

ಪ್ರೊ. ಭಗವಾನ್ ಒಕ್ಕಲಿಗ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಯಾವುದೇ ಸಮುದಾಯದ ವಿರುದ್ದ ಮಾತನಾಡುವ ವ್ಯಕ್ತಿಗಳು ಹೀನ ಮನಸ್ಥಿತಿಯವರು, ಅವರು ತಮಗೆ ಬೇಕಾದವರನ್ನು ಹೊಗಳಿಕೊಳ್ಳಲಿ. ಆದರೆ, ಬುದ್ಧಿಜೀವಿಗಳು ಅಂತ ಬಿಂಬಿಸಿಕೊಂಡು ಒಂದು ಸಮುದಾಯದ ವಿರುದ್ದ ತುಚ್ಛವಾಗಿ ಮಾತನಾಡುವುದು ಸರಿಯಲ್ಲ. ಇಂತವರಿಗೆ ಸರ್ಕಾರ ಬೆಂಬಲ ಕೊಡುತ್ತಿರುವುದರಿಂದ ಅವರು ಈ ರೀತಿಯ ಮಾತುಗಳನ್ನಾಡುತ್ತಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...