ಕರ್ನಾಟಕ | ಅತ್ಯಾಚಾರ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ 1%ಗಿಂತಲೂ ಕಡಿಮೆ

Date:

ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಒಟ್ಟು ಅತ್ಯಾಚಾರ ಪ್ರಕರಣಗಳ ಪೈಕಿ ಶಿಕ್ಷೆಯಾಗಿರುವುದು ಕೇವಲ 0.36% ಪ್ರಕರಣಗಳಲ್ಲಿ ಮಾತ್ರವೆಂದು ವರದಿಯಾಗಿದೆ. ಸಾಕ್ಷ್ಯಾಧಾರಗಳ ಕೊರತೆ, ವಿಚಾರಣೆ ವಿಳಂಬ ಹಾಗೂ ನ್ಯಾಯಾಧೀಶರ ಕೊರತೆಯಿಂದಾಗಿ ಇತ್ಯರ್ಥವಾಗಿರುವ ಮತ್ತು ಶಿಕ್ಷೆಯಾಗಿರುವ ಪ್ರಕರಣಗಳು ತೀರಾ ಕಡಿಮೆಯಿಂದ ತಿಳಿದುಬಂದಿದೆ.

2022ರಿಂದ 2024ರ ಸೆಪ್ಟೆಂಬರ್‌ವರೆಗೆ ರಾಜ್ಯಾದ್ಯಂತ ಒಟ್ಟು 1,624 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈ ಪೈಕಿ, 6 ಪ್ರಕರಣಗಳಲ್ಲಿ ಮಾತ್ರವೇ ಆರೋಪಿಗಳು ಅಪರಾಧಿಗಳೆಂದು ಸಾಬೀತಾಗಿದ್ದು, ಶಿಕ್ಷೆ ವಿಧಿಸಲಾಗಿದೆ. 74 ಪ್ರಕರಣಗಳು ಖುಲಾಸೆಯಾಗಿವೆ. ಅಲ್ಲದೆ, 104 ಪ್ರಕರಣಗಳನ್ನು ಸುಳ್ಳು ಎಂದು ಘೋಷಿಸಲಾಗಿದೆ. 298 ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, 1,037 ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ.

ಗಮನಾರ್ಹವಾಗಿ, ಈ ವರ್ಷ (2024) ದಾಖಲಾಗಿರುವ ಅತ್ಯಾಚಾರ ಪ್ರಕರಣಗಳ ಪೈಕಿ 300 ಪ್ರಕರಣಗಳಲ್ಲಿ ಸಂತ್ರಸ್ತೆಯರಿಗೆ ಪರಿಚಯ ಇರುವವರೇ ಆರೋಪಿಗಳಾಗಿದ್ದಾರೆ. ಅವುಗಳಲ್ಲಿ 34 ಪ್ರಕರಣಗಳಲ್ಲಿ ಆರೋಪಿಗಳು ಸಂತ್ರಸ್ತೆಯರ ಹತ್ತಿರದ ಸಂಬಂಧಿಗಳೇ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024ರ ಜನವರಿಯಿಂದ ಸೆಪ್ಟೆಂಬರ್‌ವರೆಗೆ ಬೆಂಗಳೂರಿನಲ್ಲೇ 131 ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಕೂಡ ಸೇರಿದೆ.

“ದಾಖಲಾದ ಹಲವಾರು ಪ್ರಕರಣಗಳು ವಿಚಾರಣೆಗೆ ಬರುವುದಕ್ಕೆಯೇ 3ರಿಂದ 5 ವರ್ಷವಾಗುತ್ತದೆ. ಆ ವೇಳೆಗೆ ಸಾಕ್ಷಿಗಳು ನಿರ್ಣಾಯಕ ವಿವರಗಳನ್ನು ಮರೆತುಬಿಡುವ ಸಾಧ್ಯತೆಗಳೇ ಹೆಚ್ಚಿರುತ್ತವೆ. ವಿಳಂಬವು ಅನೇಕ ಆರೋಪಿಗಳು ಪ್ರಕರಣದಿಂದ ತಪ್ಪಿಸಿಕೊಳ್ಳಲು, ಖುಲಾಸೆಯಾಗಲು ಅನುವು ಮಾಡಿಕೊಡುತ್ತದೆ” ಎಂದು ಮಾಜಿ ಐಜಿಪಿ ಎಸ್‌.ಟಿ ರಮೇಶ್ ಹೇಳಿರುವುದಾಗಿ ‘ಟಿಎನ್‌ಐಇ’ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...