ನಿಗಮ ಮಂಡಳಿ | ಎಐಸಿಸಿ ಪಟ್ಟಿಯಲ್ಲಿನ ಏಳು ಹೆಸರು ಕೈಬಿಟ್ಟ ಸಿದ್ದರಾಮಯ್ಯ, ಇಬ್ಬರು ಹೊಸ ಸೇರ್ಪಡೆ

Date:

39 ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ಸಂಬಂಧ ಎಐಸಿಸಿ ಅನುಮೋದಿತ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೆಲವು ಹೆಸರುಗಳನ್ನು ಕೈಬಿಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಡಬ್ಲ್ಯೂಸಿ ಸಭೆಗೆಂದು ಬಿಹಾರ್ ತೆರಳಿದ ಸಂದರ್ಭದಲ್ಲೇ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿತ್ತು. ಇಲಾಖಾವಾರು ಆದೇಶ ಹೊರಡಿಸಲು ಶುಕ್ರವಾರ ಸೂಚನೆ ನೀಡಿದ್ದು, ಕೆಲವು ಹೆಸರುಗಳ ಬದಲಾವಣೆಯಾಗಿದೆ.

ಎಐಸಿಸಿ ಕಳುಹಿಸಿ ಪಟ್ಟಿಯಿಂದ ಸಿದ್ದರಾಮಯ್ಯ ಅವರು ನೀಲಕಂಠ ಮುಲ್ಗೆ (ಕೆಕೆಆರ್‌ಟಿಸಿ), ಸೈಯದ್ ಮೆಹಮೂದ್ ಚಿಸ್ಟಿ (ದ್ವಿದಳ ಧಾನ್ಯಗಳ ಅಭಿವೃದ್ಧಿ ನಿಗಮ), ಬಿ ಎಸ್ ಕವಲಗಿ (ನಿಂಬೆ ಅಭಿವೃದ್ಧಿ ಮಂಡಳಿ), ಅಂಜನಪ್ಪ (ಬೀಜ ಅಭಿವೃದ್ಧಿ ನಿಗಮ), ಶರಣಪ್ಪ ಸಲಾದ್‌ಪುರ (ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ಮಂಡಳಿ), ಆರ್ ಎಸ್ ಸತ್ಯನಾರಾಯಣ (ತಾಪಮಾನ ಮಂಡಳಿ) ಮತ್ತು ಅನಿಲ್‌ಕುಮಾರ್ ಜಮಾದಾರ್ (ತೊಗರಿ ಅಭಿವೃದ್ಧಿ ನಿಗಮ) ಅವರನ್ನು ಕೈಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜು ಕಾಗೆ ಹುದ್ದೆಗೆ ಸಮಸ್ಯೆಯಿಲ್ಲ

ಕಾಗವಾಡ ಶಾಸಕ ರಾಜು ಕಾಗೆ ಅಧ್ಯಕ್ಷರಾಗಿದ್ದ ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ ಅರುಣ್‌ ಕುಮಾರ್‌ ಪಾಟೀಲ್‌ ಹೆಸರನ್ನು ಎಐಸಿಸಿ ಪಟ್ಟಿ ಮಾಡಿತ್ತು. ಇದು ಮುದ್ರಣ ದೋಷ ಎಂಬ ಸ್ಪಷ್ಟನೆಯೊಂದಿಗೆ ಅರುಣ್‌ ಪಾಟೀಲ್‌ರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹುದ್ದೆಗೆ ನೇಮಕಕ್ಕೆ ಸೂಚಿಸಲಾಗಿದೆ. ರಾಜು ಕಾಗೆ ಹುದ್ದೆ ಅಬಾಧಿತವಾಗಿದೆ. ಆದರೆ, ಎಐಸಿಸಿ ಅನುಮೋದಿತ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ನೀಲಕಂಠ ಮುಳ್ಗೆ ಅವರನ್ನು ಶಿಫಾರಸು ಮಾಡಲಾಗಿತ್ತು.

ಎಂ.ನಿಕೇತ್‌ ರಾಜ್‌ ಅವರಿಗೆ ಅವಕಾಶ

ಎಐಸಿಸಿ ಅನುಮೋದನೆ ನೀಡಿದ್ದ ಪಟ್ಟಿಯಲ್ಲಿ ಇಲ್ಲದಿದ್ದರೂ ತುಮಕೂರು ಮೂಲದ ಎಂ.ನಿಕೇತ್‌ ರಾಜ್‌ ಅವರನ್ನು ಬಿಎಂಟಿಸಿ ಅಧ್ಯಕ್ಷರಾಗಿ ನೇಮಕ ಮಾಡಿದ್ದು, ಎಚ್‌.ಡಿ.ಗಣೇಶ್‌ ಅವರನ್ನು ಮೈಸೂರು ಪೇಂಟ್ಸ್‌ ಮತ್ತು ವಾರ್ನಿಷ್‌ ಲಿಮಿಟೆಡ್‌ನ ಅಧ್ಯಕ್ಷರಾಗಿ ನೇಮಿಸಲಾಗಿದೆ. ಇದು ಹೊಸ ಸೇರ್ಪಡೆಯಾಗಿದೆ.

ಉಪಾಧ್ಯಕ್ಷ ಹುದ್ದೆಗಳ ನೇಮಕಕ್ಕೂ ಅನುಮೋದನೆ

ಹತ್ತು ನಿಗಮ, ಮಂಡಳಿಗಳಿಗೆ ಉಪಾಧ್ಯಕ್ಷರ ನೇಮಕಕ್ಕೂ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಶಾಸಕ ವಿಶ್ವಾಸ್‌ ವಸಂತ ವೈದ್ಯ ಅವರನ್ನು ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...