ಕಾಂಗ್ರೆಸ್‌ ವಿರುದ್ಧ ಭ್ರಷ್ಟಾಚಾರ ಆರೋಪ, ಬಿಜೆಪಿಗೆ ತಿರುಗುಬಾಣ

Date:

ಉಪಲೋಕಾಯುಕ್ತ ಬಿ.ವೀರಪ್ಪ ಅವರು ರಾಜ್ಯದಲ್ಲಿನ ಭ್ರಷ್ಟಾಚಾರ ಕುರಿತು ಮಾಡಿದ ಆರೋಪವೀಗ ಬಿಜೆಪಿಗೆ ತಿರುಗು ಬಾಣವಾಗಿದೆ.

“ರಾಜ್ಯದ ನ್ಯಾಯಮೂರ್ತಿಗಳೇ 63 ಪರ್ಸೆಂಟ್‌ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿದ್ದಾರೆ. ಆದ್ದರಿಂದ ಭ್ರಷ್ಟಾಚಾರದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಈಗ ಪೇಚಿಗೆ ಸಿಲುಕಿದ್ದಾರೆ.

ನ್ಯಾಯಮೂರ್ತಿಗಳ ಹೇಳಿಕೆ ಪರಿಶೀಲಿಸದೆ ಕಾಂಗ್ರೆಸ್ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು ರಾಜ್ಯದ ಜನರ ಮುಂದೆ ತೀವ್ರ ಮುಜುಗರ ಎದುರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪಲೋಕಾಯುಕ್ತ ಬಿ. ವೀರಪ್ಪ ಅವರು, “ಕರ್ನಾಟಕದಲ್ಲಿ ಶೇ.63 ಭ್ರಷ್ಟಚಾರವಿದೆ ಎಂದು ಹೇಳಿದ್ದರು. ಆದರೆ ಅವರು 2019ರ ನವೆಂಬರ್ ನಲ್ಲಿ ಕೊಟ್ಟಿರುವ ವರದಿಯ ಆಧಾರದಲ್ಲಿ ಮಾತನಾಡಿದ್ದರು. ಆದರೆ ಈ ವಿಷಯವನ್ನು ತಿಳಿಯದೆ, ಪ್ರತಿಪಕ್ಷನಾಯಕ ಆ‌ರ್. ಅಶೋಕ್, “ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ” ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದರು.

2019ರಲ್ಲಿ ಬಿಜೆಪಿ ಸರಕಾರವೇ ಅಧಿಕಾರದಲ್ಲಿತ್ತು ಎಂಬ ವಿಷಯ ಸ್ಪಷ್ಟತೆ ಪಡೆಯುತ್ತಿದ್ದಂತೆ ಬಿಜೆಪಿ ಮುಜುಗರಕ್ಕೆ ಸಿಲುಕಿದೆ. ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಶೋಕ್ ತಮ್ಮ ಕಾಲಿನ ಮೇಲೆ ತಾವೇ ಚಪ್ಪಡಿಕಲ್ಲು ಎಳೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?

ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು 2019ರ ನವೆಂಬರ್‌ನಲ್ಲಿ ಕೊಟ್ಟ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಬಿ.ವೀರಪ್ಪನವರು ಇಂದು ಮಾತನಾಡಿದ್ದಾರೆ. ಅವರು ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗಲೂ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಐಸಿಯು ಖರೀದಿ ಎನ್ನದೆ ಎಲ್ಲದರಲ್ಲಿಯೂ ನಿರ್ಲಜ್ಜರಾಗಿ ಲೂಟಿ ಮಾಡಲಾಗಿತ್ತು. ಪ್ರತಿ ಇಲಾಖೆಯಲ್ಲಿ ಕನಿಷ್ಠ 40% ಕಮಿಷನ್ ಚಾಲ್ತಿಯಲ್ಲಿ ಇತ್ತು. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವವರು ಅಂದಿನ ಸಚಿವ ಈಶ್ವರಪ್ಪನವರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ನೀರಾವರಿ ಇಲಾಖೆಯ ಭದ್ರಾ ಮೇಲ್ದಂಡೆ ಹಾಗೂ ಕಾವೇರಿ ನೀರಾವರಿ ನಿಗಮದಲ್ಲಿ ಭಾರೀ ಅಕ್ರಮ ನಡೆದಿದ್ದು, ಸುಮಾರು ₹20,000 ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಸ್ವತಃ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಅವರು ಇಂದಿನ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ವಿರುದ್ಧ ನೇರಾನೇರ ಆರೋಪ ಮಾಡಿದ್ದರು. ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ಮಾಡಿ ನಿಮ್ಮ ಹಲವು ಬಂಧು ಮಿತ್ರರು ಜೈಲು ಸೇರಿ ಬಂದಿದ್ದಾರೆ. ಇವೆಲ್ಲಾ ಮರೆತು ಹೋಯಿತೇ? ಹೀಗೆ ಬಿಜೆಪಿ ಕಾಲದ ಹಗರಣಗಳನ್ನು ಪಟ್ಟಿಮಾಡುತ್ತಾ ಹೋದರೆ ಒಂದು ಮಹಾಗ್ರಂಥವನ್ನೇ ಬರೆಯಬಹುದು.

ಇಂದು “ನ ಖಾವೂಂಗಾ, ನ ಖಾನೆದೂಂಗ” ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ‌ ಆಡಳಿತದಲ್ಲಿ ಭಾರತ ಭ್ರಷ್ಟಾಚಾರದಲ್ಲೇ ಮುಳುಗೇಳುತ್ತಿದೆ. ಇದಕ್ಕೆ ಟ್ರಾನ್ಸ್‌ಪರೆಸಿ ಇಂಟರ್ನ್ಯಾಷನಲ್ ನವರು ಬಿಡುಗಡೆ ಮಾಡಿರುವ ಜಾಗತಿಕ ಭ್ರಷ್ಟಾಚಾರಯುಕ್ತ ದೇಶಗಳ ಪಟ್ಟಿಯಲ್ಲಿ ಭಾರತ 96ನೇ ಸ್ಥಾನದಲ್ಲಿ ಇರುವುದು ಸಾಕ್ಷಿ. ಮೊದಲು ಆರ್.ಅಶೋಕ್ ಅವರು ತಮ್ಮ ಪ್ರಧಾನ ಸೇವಕರ ಬಳಿ ಭಾರತದ ಈ ದಯನೀಯ ಸ್ಥಿತಿಗೆ ಕಾರಣವೇನು ಎಂಬ ಪ್ರಶ್ನೆಯನ್ನೆತ್ತಲಿ.

ಗೌರವಾನ್ವಿತ ಬಿ.ವೀರಪ್ಪನವರ ಮಾತುಗಳನ್ನು ನಮ್ಮ ಸರ್ಕಾರಕ್ಕೆ ಅನ್ವಯಿಸಿ ಹೇಳುವ ಆರ್.ಅಶೋಕ್ ಅವರ ಮತಿಗೇಡಿತನಕ್ಕೆ ಏನೆನ್ನಬೇಕು? ನಮ್ಮ ಸರ್ಕಾರದಲ್ಲಿ ನೇಮಕಾತಿಯಿಂದ ಹಿಡಿದು ವರ್ಗಾವಣೆಯ ವರೆಗೆ ಎಲ್ಲವನ್ನೂ ಪಾರದರ್ಶಕವಾಗಿಸುವ, ಯಾವುದೇ ರೀತಿಯ ಹಣ, ಅಧಿಕಾರದ ದುರ್ಬಳಕೆಯಾಗದಂತೆ ತಡೆಯುವ ಪ್ರಯತ್ನ ಜಾರಿಯಲ್ಲಿದೆ. ಆರ್.ಅಶೋಕ್ ಅವರೇ, ನೀವು ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎರಡೂವರೆ ವರ್ಷದಲ್ಲಿ ಸ್ವಚ್ಚ ಮಾಡುವುದು ಅಸಾಧ್ಯ. ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...