ಭ್ರಷ್ಟಾಚಾರ, ಕಮಿಷನ್ ಹಾವಳಿ ಈ ಸರ್ಕಾರದಲ್ಲಿ ಮಿತಿ ಮೀರಿದೆ: ಹೆಚ್ ಡಿ ಕುಮಾರಸ್ವಾಮಿ ಆರೋಪ

Date:

ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮಿಷನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ” ಎಂದು ಹೇಳಿದರು.

“ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ. ಕೃಷ್ಣ ಬೈರೇಗೌಡರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ” ಎಂದು ಅವರು ಕಿಡಿಕಾರಿದರು.

ಭೂಮಿ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದೇನೆ

“ಕೇತಗಾನಹಳ್ಳಿ ಭೂಮಿ ವಿಷಯಕ್ಕೆ ಸಂಬಂಧಿಸಿ ನಾನು ಕಾನೂನು ಹೋರಾಟ ಮಾಡುತ್ತಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ನಾನು ಮೊದಲೇ ಹೇಳಿದ್ದೇನೆ. ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿದೆ” ಎಂದು ದೂರಿದರು.

ಭೂಮಿ ತೆರವಿಗೆ ರಚಿಸಿಲಾಗಿರುವ ಎಸ್ಐಟಿಗೆ ಹೈಕೋರ್ಟ್ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿ, “ಅದು 40 ವರ್ಷಗಳ ಹಿಂದೆ ಖರೀದಿ ಮಾಡಿದ ಭೂಮಿ. ಅಲ್ಲಿ ಯಾವುದೇ ರೀತಿಯ ಒತ್ತುವರಿ ಆಗಿಲ್ಲ. ಸರ್ಕಾರ ರಾಜಕೀಯ ದ್ವೇಷ ಮಾಡಿಕೊಂಡು ಹೊರಟಿದೆ. ಅದು ಕಾನೂನು ವ್ಯಾಪ್ತಿಯಲ್ಲಿ ನ್ಯಾಯಾಲಯದಲ್ಲಿ ತೀರ್ಮಾನ ಆಗುತ್ತದೆ” ಎಂದರು.

ಡಿಕೆಶಿ ಕಡೆಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ

2028ಕ್ಕೆ ಜೆಡಿಎಸ್ -ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆ ಹೊಲಿಸಿಕೋಡ್ತೀನಿ ಎಂದು ಡಿಸಿಎಂ ಡಿಕೆಶಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ, “ನನಗೆ ಅಂತಹ ದಾರಿದ್ರ್ಯ ಇನ್ನೂ ಬಂದಿಲ್ಲ. ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯವನ್ನು ಈ ನಾಡಿನ ಜನತೆ ನನಗೆ ಕೊಟ್ಟಿಲ್ಲ. ದಾರಿದ್ರ್ಯ ಇರುವುದು ಅವರಿಗೆ. ಮನುಷ್ಯತ್ವದ ದಾರಿದ್ರ್ಯ ಅವರಿಗೆ ಇದೆ. ಜನರಿಂದ ಕೊಳ್ಳೆ ಹೊಡೆದ ಆ ಪಾಪದ ಹಣದಿಂದ ನಾನು ಬಟ್ಟೆ ಹೊಲಿಸಿಕೊಳ್ಳಬೇಕಾ? ನನಗೆ ಬಟ್ಟೆ ಬೇಕಾದರೆ ನಾಡಿನ ಜನರಿದ್ದಾರೆ, ನನ್ನನ್ನು ಇಲ್ಲಿಯವರೆಗೂ ಬೆಳೆಸಿರುವ ಅವರೇ ತಂದು ಕೊಡುತ್ತಾರೆ” ಎಂದರು.

ಡಿ.ಕೆ.ಸುರೇಶ್ ಅವರನ್ನು ಬಮುಲ್ ಅಧ್ಯಕ್ಷ ಮಾಡಿಕೊಂಡಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆ ಬಗ್ಗೆ ಪ್ರತಿಕ್ರಿಯಿಸಿದ ಅವರು; ಸರ್ಕಾರ ಇದೆ, ಏನು ಬೇಕಾದರೂ ಮಾಡಿಕೊಳ್ಳುತ್ತಾರೆ. ಸಮಯ ಬರುತ್ತೆ ಅದಕ್ಕೆ ಉತ್ತರ ಕೋಡೋಣ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...