ಎಂಎಲ್‌ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್‌ ರಾಜೀನಾಮೆ

Date:

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಸಿ ಪಿ ಯೋಗೇಶ್ವರ್‌ ಅವರು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸಂಜೆ ನಾಲ್ಕು ಗಂಟೆಗೆ ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಪಕ್ಷೇತರ ಅಥವಾ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ರಾಜೀನಾಮೆ ನೀಡಲು ಹುಬ್ಬಳ್ಳಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿ ಅವರು ನನ್ನ ಮೇಲೆ ಅನವಶ್ಯಕವಾಗಿ ಆರೋಪ ಮಾಡುವ ಅಗತ್ಯವಿಲ್ಲ. ಹೆಚ್​​ಡಿಕೆ ಅವರು ನನಗೆ ಟಿಕೆಟ್ ಕೊಡದಿದ್ದರೆ ಅವರ ಮಗನಿಗೆ ಕೊಡಲಿ. ಆದರೆ, ಕಾಂಗ್ರೆಸ್ಸಿಗರ ಭೇಟಿ ಮಾಡಿದ್ದೆ ಎಂಬ ಸುಳ್ಳು ಆರೋಪ ಮಾಡುವುದು ಸರಿಯಲ್ಲ” ಎಂದರು.

“ನಾನು ಈವರೆಗೂ ಕಾಂಗ್ರೆಸ್​ನ ಯಾವ ನಾಯಕರನ್ನೂ ಭೇಟಿಯಾಗಿಲ್ಲ. ಕಾಂಗ್ರೆಸ್​ ನಾಯಕರ ಭೇಟಿ ಮಾಡಿದರೂ ಅದರಲ್ಲಿ ತಪ್ಪೇನಿಲ್ಲ. ಆದರೆ, ಇಲ್ಲಿಯವರೆಗೆ ಕಾಂಗ್ರೆಸ್​ನ ಯಾರನ್ನೂ ನಾನು ಭೇಟಿ ಮಾಡಿಲ್ಲ” ಎಂದು ಹೇಳಿದರು.

WhatsApp Image 2024 10 21 at 5.01.55 PM

“ಅವಕಾಶ ಕೊಟ್ಟರೆ ಎನ್​ಡಿಎ ಅಭ್ಯರ್ಥಿ ಆಗುತ್ತೇನೆ, ಅವಕಾಶ ಸಿಗಬೇಕಷ್ಟೇ. ನಾನು ಜೆಡಿಎಸ್​ ‌ಚಿಹ್ನೆಯಿಂದ ಸ್ಪರ್ಧೆ ಮಾಡಿದರೆ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕು ಎಂದು ಆಸೆ ಇದೆ. ಆದರೆ, ಕುಮಾರಸ್ವಾಮಿ ಅವರು ತಮ್ಮ ಮಗನಿಗೆ ಟಿಕೆಟ್ ಕೊಡಬೇಕೆಂಬ ಮನಸ್ಸಿದೆ. ಅವರ ಮನಸ್ಸಿನಲ್ಲಿ ಆ ರೀತಿ ಇದ್ದರೆ ಏನು ಮಾಡಲಾಗುತ್ತದೆ” ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ವಿರುದ್ಧ ಯೋಗೇಶ್ವರ್ ಅಸಮಾಧಾನ

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂಬ ಯಡಿಯೂರಪ್ಪ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಯೋಗೇಶ್ವರ್, “ಈ ಸಂದರ್ಭದಲ್ಲಿ ಯಡಿಯೂರಪ್ಪ ಆ ಹೇಳಿಕೆ ಕೊಡುವ ಅಗತ್ಯ ಇರಲಿಲ್ಲ. ಅವರು ಉದ್ದೇಶಪೂರ್ವಕ ಹೇಳಿಕೆ ಕೊಟ್ಟಿದ್ದಾರೆ. ಅವರ ಮೂಲಕ ಯಾರೋ ಈ ರೀತಿ ಹೇಳಿಕೆ ಕೊಡಿಸಿದ್ದಾರೆ. ಯಡಿಯೂರಪ್ಪ ಅವರನ್ನು ದೂರುವುದರಲ್ಲಿ ಅರ್ಥ ಇಲ್ಲ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...