ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

Date:

  • ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ: ಸಿಎಂ
  • ಮೊದಲನೇ ಕಂತಿನಲ್ಲಿ 2 ಸಾವಿರ ವರೆಗೆ ಪರಿಹಾರ ಬಿಡುಗಡೆ

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ ಎನ್ನುವ ಕಾರಣದಿಂದ ರಾಜ್ಯ ಸರ್ಕಾರ ಮೊದಲ ಕಂತನ್ನು ಬಿಡುಗಡೆ ಮಾಡಿದ್ದು, ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಮಾತನಾಡಿ, ಮೊದಲನೇ ಕಂತಿನಲ್ಲಿ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಬಿಡುಗಡೆಯನ್ನು ಘೋಷಿಸಿದರು.

“ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರದಿಂದ ಸಿಕ್ಕಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಕೇಂದ್ರ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. 18171.44 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ” ಎಂದು ವಿವರಿಸಿದರು.

“ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಸ್ ಕೊಟ್ಟರೂ ಸಾಕು. ಕೇಂದ್ರದ ತಂಡ 4/10 ರಿಂದ 9/10 ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ. ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲದ ಸ್ಥಿತಿ ಇದೆ. 4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರಕಾಶಿ ಸುರಂಗ ಕುಸಿತದಲ್ಲಿವೆ ಹಿಂದು-ಮುಸ್ಲಿಮ್ ಏಕತೆ ಪಾಠಗಳು

“ಫೈನಾನ್ಸ್ ಮಿನಿಸ್ಟರ್ ಅವರನ್ನು ನಮ್ಮ ಸಚಿವರು ಭೇಟಿ ಮಾಡಿದ್ದಾರೆ. ರಾಜ್ಯದ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ನಾನೇ ಭೇಟಿ ಮಾಡ್ತೀನಿ, ಸಮಯ ಕೊಡಿ ಎಂದು ಪತ್ರ ಬರೆದಿದ್ದೀನಿ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ” ಎಂದರು.

“ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ 460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು, ಮೇವಿಗೆ 327 ಕೋಟಿ ರೂ. ಬಿಡುಗಡೆ, 780 ಕೋಟಿ ಡಿಸಿಗಳ ಪಿಡಿ ಖಾತೆಯಲ್ಲಿದೆ. ಅವರೂ ತಹಶೀಲ್ದಾರ್‌ಗಳಿಗೆ ಬಿಡುಗಡೆ ಮಾಡಿದ್ದಾರೆ” ಎಂದು ತಿಳಿಸಿದರು.

“ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ. ಹಲವು ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...