ಫೆಂಗಲ್ ಚಂಡಮಾರುತ | ಟೊಮೆಟೊ ಬೆಲೆಯಲ್ಲಿ ಭಾರೀ ಜಿಗಿತ

Date:

ಕಳೆದ ಒಂದು ವಾರದಿಂದ ಫೆಂಗಲ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ತಮಿಳುನಾಡು, ಆಂಧ್ರಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಕರ್ನಾಟಕದಲ್ಲಿಯೂ ಮಳೆ ಆರ್ಭಟ ಹೆಚ್ಚಿದ್ದು, ನಿರಂತರ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಟೊಮೆಟೊ ಇಳುವರಿಯಲ್ಲಿ ಕುಸಿತವಾಗಿದ್ದು, ಬೆಲೆ ಗಗಕ್ಕೇರುತ್ತಿದೆ.

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಟೊಮೆಟೊ ಹೂವು ಮತ್ತು ಕಾಯಿಗಳು ಉದುರಿಹೋಗುತ್ತಿವೆ. ತಂಪಾದ ಹಮಾವಾನದಿಂದಾಗಿಯೂ ಟೊಮೆಟೊ ಕಾಯಿಗಳು ಹಣ್ಣಾಗುತ್ತಿಲ್ಲ. ಇದೆಲ್ಲದರಿಂದಾಗಿ, ಇಳಿವರಿಯಲ್ಲಿ ತೀವ್ರ ಕುಸಿತ ಕಂಡುಬಂದಿದೆ.

ಟೊಮೆಟೊ ಇಳುವಳಿ ಮತ್ತು ಪೂರೈಕೆ ಕಡಿಮೆಯಾಗಿದೆ. ಆದರೆ, ಬೇಡಿಕೆ ಹೆಚ್ಚಿದೆ. ಪರಿಣಾಮ, ಟೊಮೆಟೊ ಬೆಲೆ ಏರಿಕೆಯಾಗುತ್ತಿದೆ. ಚಿಕ್ಕಬಳ್ಳಾಪುರದ ಎಪಿಎಂಸಿಯಲ್ಲಿ 14 ಕೆ.ಜಿ.ಯ ಟೊಮೆಟೊ ಬಾಕ್ಸ್‌ಗೆ ಸಗಟು ದರ 800 ರೂ. ಇದೆ. ಅಂದರೆ, ಕೆ.ಜಿ ಸರಾಸರಿ 57 ರೂ. ಇದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಕೆ.ಜಿ.ಗೆ 80ರಿಂದ 100 ರೂ.ವರೆಗೆ ಏರಿಕೆ ಕಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...