ತಮಿಳುನಾಡಿಗೆ ಜುಲೈ 31ರವರೆಗೆ ನಿತ್ಯ 1 ಟಿಎಂಸಿ ಕಾವೇರಿ ನೀರು; ಸಿಡಬ್ಲ್ಯೂಆರ್‌ಸಿ ಆದೇಶ

Date:

ರಾಜ್ಯದಲ್ಲಿ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಇತ್ತೀಚೆಗೆ ಮಳೆಯಾಗುತ್ತಿದೆ. ಬತ್ತಿ ಹೋಗಿದ್ದ ಕೆರೆ, ಕಟ್ಟೆ, ನದಿ, ಜಲಾಶಯಗಳಿಗೆ ನೀರು ಬರುತ್ತಿದೆ. ಕೃಷ್ಣರಾಜಸಾಗರ (ಕೆಆರ್‌ಎಸ್‌) ಅಣೆಕಟ್ಟೆಗೂ ನೀರು ಹರಿದು ಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ. ಈ ನಡುವೆ, ಜುಲೈ 12ರಿಂದ 31ರವರೆಗೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಆರ್‌ಸಿ) ಸೂಚನೆ ನೀಡಿದೆ.

ಗುರುವಾರ, ದೆಹಲಿಯಲ್ಲಿ ಸಭೆ ನಡೆಸಿದ್ದು, ಸಭೆಯಲ್ಲಿ ತಮಿಳುನಾಡು ಕಾವೇರಿ ನೀರಿಗಾಗಿ ಬೇಡಿಕೆ ಇಟ್ಟಿದೆ. ಕರ್ನಾಟಕವು ರಾಜ್ಯಕ್ಕೆ ನೀರಿನ ಕೊರತೆ ಇದ್ದು, ನೀರು ಹರಿಸಲಾಗದು ಎಂದು ವಾದಿಸಿದೆ.

ಕರ್ನಾಟಕದಿಂದ ತಮಿಳುನಾಡಿಗೆ ಜೂನ್ 1ರಿಂದ ಇಲ್ಲಿಯವರಗೆ 41 ಟಿಎಂಸಿ ನೀರು ಸೇರಿದೆ. ಮುಂಗಾರಿನಲ್ಲಿ ಸರಿಯಾಗಿ ಮಳೆಯಾಗಿಲ್ಲ. 28% ಮಳೆ ಕೊರತೆಯಾಗಿದೆ. ಕೆಆರ್‌ಎಸ್‌ನಲ್ಲಿ ಕೇವಲ ಒಟ್ಟು 58 ಟಿಎಂಸಿಯಷ್ಟು ಮಾತ್ರವೇ ನೀರಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ನೀರಿದೆ. ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲೆಂದು ಕರ್ನಾಟಕದ ಅಧಿಕಾರಿಗಳು ವಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಾಗ್ಯೂ, ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಆದೇಶ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...