ಕೃತಿ ಬಿಡುಗಡೆ ವೇಳೆ ದಲಿತ ಲೇಖಕನಿಗೆ ಅವಮಾನ; ಆರೋಪ

Date:

ದಲಿತ ಲೇಖಕರೊಬ್ಬರ ಪುಸ್ತಕವನ್ನು ಸರ್ಕಾರದ ವತಿಯಿಂದ ಬಿಡುಗಡೆ ಮಾಡಿದರೂ ಲೇಖಕರನ್ನು ವೇದಿಕೆಗೆ ಕರೆಯದಿರುವ ಪ್ರಮಾದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದಿದೆ.

ಕನಕದಾಸರ ಜನ್ಮದಿನದ ಪ್ರಯುಕ್ತ ‘ಕರ್ನಾಟಕ ತತ್ವಪದಕಾರರ ಹದಿನೆಂಟು ಸಂಪುಟಗಳ ಬಿಡುಗಡೆ ಸಮಾರಂಭ’ ಆಯೋಜಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಆದರೆ ಕಾರ್ಯಕ್ರಮ ಸಂಘಟಕರು ಸಾಹಿತಿ ಗಂಗಪ್ಪ ತಳವಾರ ಅವರನ್ನು ವೇದಿಕೆಗೆ ಆಹ್ವಾನಿಸಲಿಲ್ಲ. ಗಂಗಪ್ಪ ಅವರು ಭಾವಾನುವಾದ ಮಾಡಿರುವ ‘ಗುಟ್ಟಹಳ್ಳಿ ಆಂಜನಪ್ಪ ಅವರ ಸುಜ್ಞಾನ ಬೋಧ ತತ್ವಗಳು ಸಂಪುಟ’ ಕೃತಿಯನ್ನೂ ಬಿಡುಗಡೆ ಮಾಡಲಾಗಿತ್ತು.

‘ಈದಿನ.ಕಾಮ್‌’ನೊಂದಿಗೆ ಮಾತನಾಡಿದ ಗಂಗಪ್ಪ ಅವರು, “ಎಲ್ಲ ಲೇಖಕರನ್ನು ವೇದಿಕೆಗೆ ಕರೆದರು. ನನ್ನನ್ನು ಆಹ್ವಾನಿಸಲಿಲ್ಲ. ದೂರದ ಊರಿನಿಂದ ಕುಟುಂಬ ಸಮೇತವಾಗಿ ಕಾರ್ಯಕ್ರಮಕ್ಕೆ ಬಂದಿದ್ದೆ. ಸೌಜನ್ಯಕ್ಕೂ ನನ್ನ ಹೆಸರು ಉಲ್ಲೇಖಿಸದೆ ಅವಮಾನಿಸಿದರು. ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಾ.ತ.ಚಿಕ್ಕಣ್ಣ ಅವರ ಬೇಜವಾಬ್ದಾರಿತನದಿಂದ ಈ ಘಟನೆ ನಡೆದಿದೆ. ಗೌರವಪ್ರತಿಯನ್ನೂ ಕೊಟ್ಟಿಲ್ಲ. ಕೇಳಿದರೆ ಹಣ ನೀಡುವಂತೆ ಹೇಳುತ್ತಿದ್ದಾರೆ. ಘಟನೆ ವರದಿಯಾದ ಬಳಿಕ ಚಿಕ್ಕಣ್ಣ ಕರೆ ಮಾಡಿ ಕ್ಷಮೆಯಾಚಿಸುವ ಮಾತನಾಡುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿರಿ: ಈ ದಿನ ಸಂಪಾದಕೀಯ | ಮಣಿಪುರ – ಭಾರತವನ್ನು ದೇಶವಾಗಿ ಉಳಿಸಿಕೊಳ್ಳಲು ಶಾಂತಿ, ಸೋದರತೆ ಅಗತ್ಯವೆಂದು ಪ್ರಧಾನಿ ಅರಿತಿರುವರೇ?

“ಈ ಕಾರ್ಯಕ್ರಮಕ್ಕೆ ಹಲವಾರು ಗಣ್ಯರನ್ನು ಆಮಂತ್ರಿಸಿ ಬಹಳಷ್ಟು ಜನರಿಗೆ ಗೌರವವನ್ನೂ ಸೂಚಿಸಿದ್ದಾರೆ. ನನ್ನ ಹೆಸರನ್ನೂ ಹೇಳದೆ ಅವಮಾನಿಸಿರುವ ಘಟನೆ ಮುಖ್ಯಮಂತ್ರಿಗಳ ಎದುರಲ್ಲಿ ನಡೆಯಿತು. ಅಷ್ಟು ಕೃತಿಗಳನ್ನು ಬಿಡುಗಡೆ ಮಾಡಿದರೂ ಲೇಖಕರ ಹೆಸರುಗಳನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿಲ್ಲ. ಕಚೇರಿಯಿಂದ ಕರೆಬಂದಿತ್ತಷ್ಟೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...