ಬುದ್ಧಿವಾದ ಹೇಳಿದ್ದಕ್ಕೆ ವ್ಯಕ್ತಿಯ ಕತ್ತು ಕೊಯ್ದ ದರ್ಶನ್ ಅಭಿಮಾನಿಗಳು

Date:

ದರ್ಶನ್ ಹೆಸರು ಜೋರಾಗಿ ಕೂಗುವ ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ರಾಮನಗರ ಜಿಲ್ಲೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸೂಲಿಕೆರೆಪಾಳ್ಯ ಗ್ರಾಮದಲ್ಲಿ ನಡೆದಿದೆ. ಗಾಯಾಳುವನ್ನು ವೆಂಕಟಸ್ವಾಮಿ ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮನಗರ ತಾಲ್ಲೂಕಿನ ದೊಡ್ಡ ಮಣ್ಣುಗುಡ್ಡೆ ಗ್ರಾಮದ ಕಟ್ಟಡದ ಮೇಸ್ತ್ರಿ ಸುರೇಶ್ ಎಂಬುವವರು ಸೂಲಿಕೆರೆ ಎಂಬಲ್ಲಿ ಮನೆ ನಿರ್ಮಾಣದ ಕೆಲಸಕ್ಕೆ ವೆಂಕಟಸ್ವಾಮಿ ಕರೆದುಕೊಂಡು ಬಂದಿದ್ದರು. ಕೆಲಸ ನಡೆಯುವ ಜಾಗದಲ್ಲೇ ಸಣ್ಣದೊಂದು ಶೆಡ್ ನಿರ್ಮಾಣ ಮಾಡಿಕೊಂಡು ಅಲ್ಲಿಯೇ ವಾಸವಿದ್ದರು. ಹೀಗಿರುವಾಗ ಗುರುವಾರ ರಾತ್ರಿ ವೆಂಕಟಸ್ವಾಮಿ ಹಾಗೂ ಇತರರು ವಾಸವಿರುವ ಶೆಡ್ ಬಳಿ ಬಂದ ಮೂವರು ದರ್ಶನ್ ಬಗ್ಗೆ ಮಾತನಾಡುತ್ತ ಜೋರಾಗಿ ಡಿ ಬಾಸ್ ಎಂದು ಘೋಷಣೆಗಳನ್ನು ಕೂಗಲು ಶುರುಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಘೋಷಣೆ ಕೂಗಿದ್ದರಿಂದ ಶೆಡ್‌ನಲ್ಲಿ ಮಲಗಿದ್ದ ವೆಂಕಟಸ್ವಾಮಿ ಅಕ್ಕಪಕ್ಕ ಮನೆಗಳಿಗೆ ದಯವಿಟ್ಟು ಕೂಗಬೇಡಿ ಎಂದು ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಆರೋಪಿ ಕಿರಣ್ ಎಂಬಾತ ನಮ್ಮ ಡಿಬಾಸ್ ಬಗ್ಗೆ ನಿನಗೆ ಏನ್ಗೊತ್ತು ಎಂದು ಗಲಾಟೆ ತೆಗೆದಿದ್ದು, ವೆಂಕಟಸ್ವಾಮಿಯ ಕತ್ತು ಕೊಯ್ದಿದ್ದಾನೆ. ಇದಲ್ಲದೆ ಆರೋಪಿ ಕಿರಣ್ ಜೊತೆಗಿದ್ದ ಮಹದೇವ ಎಂಬಾತನು ಕೂಡ ಮಹದೇವಸ್ವಾಮಿ ಮೇಲೆ ಹಲ್ಲೆ ನಡೆಸಿದ್ದು, ಅಕ್ಕಪಕ್ಕದವರು ಬಂದು ಕೂಡಲೇ ವೆಂಕಟಸ್ವಾಮಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಸಂಬಂಧ ವೆಂಕಟಸ್ವಾಮಿ ಅವರ ಪತ್ನಿ ಘಟನೆ ಕುರಿತು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರು ದಾಖಲಾಗುತ್ತಿದ್ದಂತೆ ಆರೋಪಿಗಳಾದ ಕಿರಣ್‌ ಹಾಗೂ ಮಹಾದೇವ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು ಶೀಘ್ರದಲ್ಲೇ ಬಂದಿಸುವ ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...