ದಾವಣಗೆರೆ | ದಲಿತರೆಂಬ ಕಾರಣಕ್ಕೆ ಗ್ರಾಪಂ ಸದಸ್ಯರಿಂದ ಅಸಹಕಾರ; ಬೆನಕನಹಳ್ಳಿ ಅಧ್ಯಕ್ಷೆ ರೇಷ್ಮಾ ಗಣೇಶ್ ಆರೋಪ

Date:

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿರುವ ರೇಷ್ಮಾ ಗಣೇಶ್ ದಲಿತ ಮಹಿಳೆಯಾಗಿದ್ದಾರೆ ಎಂಬ ಏಕೈಕ ಕಾರಣಕ್ಕೆ ಗ್ರಾಪಂ ಅಭಿವೃದ್ಧಿ ಕೆಲಸಗಳಿಗೆ ಸಹೋದ್ಯೋಗಿ ಸದಸ್ಯರು ಕೈಜೋಡಿಸದೆ ಹಿಂದೆ ಸರಿಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಮೇ 29ರಂದು ಬೆನಕನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ರೇಷ್ಮಾ ಗಣೇಶ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಇವರ ಅಧ್ಯಕ್ಷತೆಯಲ್ಲಿ ಮೂರು ಸಾಮಾನ್ಯ ಸಭೆ ನಡೆದರೂ ಸದಸ್ಯರು ಸಭೆಗೆ ಹಾಜರಾಗದೆ ಗೈರಾಗಿದ್ದಾರೆ. ಕೋರಂ ಕೊರತೆಯಿಂದ ಸಭೆಗಳನ್ನು ಮುಂದೂಡುತ್ತಲೇ ಬರಲಾಗಿದೆ. ಮಾತ್ರವಲ್ಲ, ರೇಷ್ಮಾ ಗಣೇಶ್ ಅಧಿಕಾರ ವಹಿಸಿಕೊಂಡು ಎರಡು ತಿಂಗಳಾದರೂ ಈವರೆಗೂ ಯಾವುದೇ ಗ್ರಾಪಂ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ದಲಿತ ಮಹಿಳೆ ಎಂಬ ಕಾರಣಕ್ಕೆ ಸದಸ್ಯರು ಕೈಜೋಡಿಸುತ್ತಿಲ್ಲ ಎಂಬ ಗಂಭೀರ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಬೇಕೆಂಬ ಆಸೆ ಇತ್ತು. ಅಧ್ಯಕ್ಷರಾಗಿ ನನ್ನ ಜನರಿಗೆ ಹಾಗೂ ಗ್ರಾಮಕ್ಕೆ ಏನಾದರೂ ಒಳ್ಳೆಯ ಕೆಲಸಗಳನ್ನು ಮಾಡಬೇಕು ಎನ್ನುವ ಸದುದ್ದೇಶ ಇಟ್ಟುಕೊಂಡಿದ್ದೆ. ಈಗ ಅದು ಲಭಿಸಿದೆ. ಆದರೆ ಸದಸ್ಯರ ಅಸಹಕಾರದಿಂದ ನನಗೆ ದಿಕ್ಕು ತೋಚದಂತಾಗಿದೆ ಎನ್ನುತ್ತಾರೆ ಗ್ರಾಪಂ ಅಧ್ಯಕ್ಷೆ ರೇಷ್ಮಾ ಗಣೇಶ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ದಲಿತಳೆಂಬ ಕಾರಣಕ್ಕೆ ಉಳಿದವರು ಸಭೆಗೆ ಗೈರು ಹಾಜರಾಗುತ್ತಿದ್ದಾರೆ. ನನ್ನ ಪತಿ ಗ್ರಾಮ ಪಂಚಾಯತ್‌ನಲ್ಲಿ ನೀರುಗಂಟಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದು ಸಹ ಸದಸ್ಯರಿಗೆ ಕೀಳರಿಮೆಯಾಗಿದೆ. ನನ್ನ ಆಯ್ಕೆ ಮಾಡಿದ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎನ್ನುವ ಕೊರಗು ನನ್ನನ್ನು ಕಾಡುತ್ತಿದೆ ಎಂದು ರೇಷ್ಮಾ ಗಣೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

ಈ ಬಗ್ಗೆ ಮಾತನಾಡಿರುವ ಹೊನ್ನಾಳಿಯ ತಾಪಂ ಇಒ ಪ್ರಕಾಶ್, ಗ್ರಾಪಂ ಸದಸ್ಯರು ಸಭೆಗೆ ಸ್ವಯಂ ಪ್ರೇರಣೆಯಿಂದ ಬರಬೇಕು. ತಮ್ಮ ಗ್ರಾಮದ ಅಭಿವೃದ್ಧಿಗಾಗಿ ಚರ್ಚಿಸಲು ಹಲವಾರು ಕಾಮಗಾರಿ, ಮೂಲಭೂತ ಸೌಕರ್ಯಗಳನ್ನು ಕ್ರಿಯಾ ಯೋಜನೆ ಮೂಲಕ ಕಲ್ಪಿಸಲು ಸಾಮಾನ್ಯ ಸಭೆಗಳು ಮಹತ್ವ ಪಡೆದುಕೊಳ್ಳುತ್ತವೆ. ಆದರೆ ಸದಸ್ಯರು ಗೈರಾಗುತ್ತಿರುವುದರಿಂದ ಅವರನ್ನು ಆಯ್ಕೆ ಮಾಡಿದ ಜನಕ್ಕೆ ಮೋಸ ಮಾಡಿದಂತಾಗುತ್ತದೆ ಎಣದು ಹೇಳಿದ್ದಾರೆ.

ಸಭೆ ಕರೆಯಲು ಸೂಚನೆ

ಬೆನಕನಹಳ್ಳಿ ಗ್ರಾಪಂನಲ್ಲಿ ಮೂರು ಬಾರಿ ಸಾಮಾನ್ಯ ಸಭೆ ನಡೆದರೂ ಕೋರಂ ಕಡಿಮೆ ಇದ್ದು ಸದಸ್ಯರು ಗೈರಾಗಿದ್ದಾರೆ. 15 ಜನ ಸದಸ್ಯರಲ್ಲಿ ಕನಿಷ್ಠ ಎಂಟು ಜನರು ಇರಲೇಬೇಕು. ಇಲ್ಲವಾದರೆ ಸಭೆ ನಡೆಯುವುದಿಲ್ಲ. ನಾಲ್ಕನೇ ಬಾರಿಯೂ ಸಾಮಾನ್ಯ ಸಭೆಗೆ ಬಾರದಿದ್ದರೆ ಕೆಪಿಆರ್ ಆಕ್ಟ್ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು. ಗ್ರಾಮ ಅಭಿವೃದ್ಧಿ ಅಧಿಕಾರಿ ಮೂಲಕ ಸದಸ್ಯರಿಗೆ ನಾಲ್ಕನೇ ಬಾರಿ ಸಾಮಾನ್ಯ ಸಭೆ ಕರೆಯಲು ನೋಟಿಸ್ ನೀಡುವಂತೆ ನಿರ್ದೇಶನ ನೀಡಲಾಗುವುದು ಎಂದು ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲ್‌ರಾವ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...