ದಾವಣಗೆರೆ | ದಕ್ಷಿಣ ಉಪಚುನಾವಣೆ ಮತದಾರರ ಪಟ್ಟಿ ತಯಾರಿ: ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ

Date:

ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ ನಡೆದಿದ್ದು, ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, 2026ರ ಜನವರಿ 03ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳೊಂದಿಗೆ ಉಪಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಸಕರಾಗಿದ್ದ ಡಾ.ಶಾಮನೂರು ಶಿವಶಂಕರಪ್ಪನವರ ವಿಧಾನದಿಂದ ದಾವಣಗೆರೆ ದಕ್ಷಿಣ ವಿಧಾನಸಭಾ
ಕ್ಷೇತ್ರ ತೆರವಾಗಿದ್ದು,  ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 113538 ಪುರುಷ, 117479 ಮಹಿಳಾ ಮತದಾರರು ಹಾಗೂ 47 ಇತರೆ ಮತದಾರರು ಸೇರಿದಂತೆ ಒಟ್ಟು 2,31,062 ಮತದಾರಿದ್ದು, ಒಟ್ಟು 217 ಮತಗಟ್ಟಿಗಳನ್ನೊಳಗೊಂಡಿದೆ. 2026 ಜನವರಿ 1 ಕ್ಕೆ ಸಂಬಂಧಿಸಿದಂತೆ 2026ರ ಜನವರಿ 3 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು-ಆಕ್ಷೇಪಣೆಗಳಿದ್ದಲ್ಲಿ ಜನವರಿ 24 ರೊಳಗೆ ಸಲ್ಲಿಸಬೇಕು. ಅಂತಿಮ ಮತದಾರರ ಪಟ್ಟಿಯನ್ನು 2026 ರ ಫೆಬ್ರವರಿ 14 ರಂದು ಪ್ರಕಟಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕ್ಷೇತ್ರ ವ್ಯಾಪ್ತಿಯಲ್ಲಿನ ಮತಗಟ್ಟೆಗಳ ಭೌತಿಕ ಪರಿಶೀಲನೆ ನಂತರ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು 300ಕ್ಕಿಂತ ಕಡಿಮೆ ಮತದಾರರಿರುವ ಮತ್ತು 1200 ಕ್ಕೂ ಹೆಚ್ಚು ಮತದಾರರಿರುವ  ಮತಗಟ್ಟೆಗಳನ್ನು ಯುಕ್ತೀಕರಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಾಗಲೇ 67 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಕಟ್ಟಡ ಬದಲಾವಣೆ ಕಾರಣದಿಂದ 24 ಮತಗಟ್ಟೆ ಸ್ಥಳಾಂತರ ಹಾಗೂ 2 ಮತಗಟ್ಟೆಗಳ ಹೆಸರು ಬದಲಾವಣೆ ಸೇರಿದಂತೆ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು ಒಟ್ಟು 284 ಮತಗಟ್ಟೆಗಳನ್ನು ಸ್ಥಾಪನೆ ಮಾಡುವ ಅಗತ್ಯತೆಯ ಕುರಿತಂತೆ ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.

ಮತದಾರರು ವಿಳಾಸ ಬದಲಾವಣೆ, ಜನ್ಮ ದಿನಾಂಕ ತಿದ್ದುಪಡಿ, ಫೋಟೊ ಬದಲಾವಣೆ ಹಾಗೂ ಸ್ಥಳಾಂತರಗೊಂಡಿದ್ದಲ್ಲಿ ನಮೂನೆ-8ರ ಅರ್ಜಿಯನ್ನು ವೋಟರ್ ಹೆಲ್ಪ್ ಲೈನ್  ಮುಖಾಂತರ ಸಲ್ಲಿಸಬಹುದು. ಕ್ಷೇತ್ರದ ಮತದಾರರು ತಮ್ಮ ಮತಪಟ್ಟಿ ವಿವರಗಳನ್ನು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ಪರಿಶೀಲಿಸಕೊಳ್ಳಬಹುದಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ‘ಮದ್ಯದಂಗಡಿಗೆ ಕೋಟಿ ಖಜಾನೆ ಲೂಟಿ’
ಜನತೆಗೆ ಹೊಸವರ್ಷದ ಕೊಡುಗೆ; ಕೇಂದ್ರ ಸಚಿವ ಕುಮಾರಸ್ವಾಮಿ

ಯುವ ಮತದಾರರು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ನಮೂನೆ-6ರ ಅರ್ಜಿಯನ್ನು ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ಆನ್‌ಲೈನ್ https://voters.eci.gov.in/ ಮುಖಾಂತರ ಮತದಾರರ ಪಟ್ಟಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...