ನ್ಯಾಯಾಲಯದ ಮೇಲೆ ನಂಬಿಕೆ ಇದೆ, ಹೋರಾಟ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್

Date:

  • ರಾಜಕೀಯ ಉದ್ದೇಶದಿಂದ ಯಡಿಯೂರಪ್ಪ ಸರ್ಕಾರದಲ್ಲಿ ಸಿಬಿಐ ತನಿಖೆಗೆ ಕೊಟ್ಟಿದ್ದರು
  • ಎಫ್​​ಐಆರ್ ಹಾಕಿರುವುದು ಸರಿಯಲ್ಲ ಅಂತಾ ಕೋರ್ಟ್​ ಮೊರೆ ಹೋಗಿದ್ದೆ: ಡಿಕೆಶಿ

ರಾಜಕೀಯ ಉದ್ದೇಶದಿಂದ ಬಿ ಎಸ್ ಯಡಿಯೂರಪ್ಪ ಸರ್ಕಾರದಲ್ಲಿ ಸಿಬಿಐ ತನಿಖೆಗೆ ಕೊಟ್ಟಿದ್ದರು. ಶೇ 90ರಷ್ಟು ತನಿಖೆ ಮಾಡಿದ್ದೇವೆ ಅಂತಾ ಸಿಬಿಐನವರು ಹೇಳಿದ್ದಾರೆ. ಇನ್ನೂ ಒಂದು ದಿನ ಕೂಡ ನನ್ನನ್ನು ಕರೆಸಿ ವಿಚಾರಣೆ ಮಾಡಿಲ್ಲ. ನನ್ನ ಕುಟುಂಬ, ನಾನು, ನನ್ನ ಹೆಂಡತಿ ನನ್ನನ್ನೇ ವಿಚಾರಣೆಗೆ ಕೇಳಿಲ್ಲ. ಅದು ಹೇಗೆ ಶೇ 90ರಷ್ಟು ತನಿಖೆ ಮಾಡಿದ್ದಾರೆ ಗೊತ್ತಿಲ್ಲ. ನ್ಯಾಯಾಲಯದ ಮೇಲೆ ನಂಬಿಕೆ ಇದೆ, ನಾನು ಹೋರಾಟ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದರು.

ತಮ್ಮ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್​ ಅನುಮತಿ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, “ಎಫ್​​ಐಆರ್ ಹಾಕಿರುವುದು ಸರಿಯಲ್ಲ ಅಂತಾ ಕೋರ್ಟ್​ ಮೊರೆ ಹೋಗಿದ್ದೆ. ಅವರದ್ದು ಏನೇ ಪ್ರೇರಿತ ಇದ್ದರೂ ಕೂಡ ನನಗೆ ಭರವಸೆ ಇದೆ. ನಾನು ಚೌಕಟ್ಟಿನಲ್ಲಿದ್ದೇನೆ, ಉತ್ತರ ಕೊಡುತ್ತೇನೆ” ಎಂದರು.

ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗ್ತಾರೆಂಬ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ತಿರುಗೇಟು ನೀಡಿದ ಅವರು, “6 ತಿಂಗಳು, ವರ್ಷದೊಳಗೆ ತಿಹಾರ್ ಜೈಲಿಗೆ ಕಳಿಸ್ತೇವೆ ಅಂತಾ ಹೇಳಿದ್ದಾರೆ. ಅವರದ್ದು ಪ್ರಿಪ್ಲ್ಯಾನ್​ ಅಥವಾ ಇನ್ನೇನೋ ಇರಬಹುದು. ನಾನು ಓಡಿ ಹೋಗಲ್ಲ, ಕಾನೂನು ಚೌಕಟ್ಟಿನಲ್ಲಿ ಉತ್ತರ ಕೊಡುತ್ತೇನೆ. ಮೂರು ತಿ‌ಂಗಳಲ್ಲಿ ತನಿಖೆ ಮುಗಿಸ್ತೇವೆ ಅಂತಾ ಹೇಳಿದ್ದಾರೆ ಮಾಡಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಹಸಿದ ಹೊಟ್ಟೆಗಳು ಹೇಳುತ್ತಿರುವ ಕುಬೇರರ ಕಥೆ

ಕುಮಾರಸ್ವಾಮಿಗೆ ಬುದ್ಧಿ ಹೆಚ್ಚು ಕಡಿಮೆಯಾಗಿದೆ

ಎಚ್ ​​ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆಶಿ, “ಕುಮಾರಸ್ವಾಮಿ ಗಂಟೆಗೊಂದು, ಗಳಿಗೆಗೊಂದು ಮಾತನಾಡಬಹುದು, ಅವರಿಗೆ ಬುದ್ಧಿ ಸ್ವಲ್ಪ ಹೆಚ್ಚು ಕಡಿಮೆಯಾಗಿ ಅವರು ಹಾಗೆಲ್ಲ ಮಾತನಾಡುತ್ತಿರಬಹುದು” ಎಂದು ಕುಟುಕಿದರು.

“ಕುಮಾರಸ್ವಾಮಿ ಅವರ ತಂದೆ 25 – 30 ವರ್ಷಗಳ ಹಿಂದೆ ರಾಮನಗರಕ್ಕೆ ಬಂದು ಎಂಎಲ್ಎ, ಪಿಎಂ‌ ಸಹ ಆದರು. ನನ್ನ ವಿರುದ್ಧ ಎಂಪಿಗೂ ಅವರ ತಂದೆ ನಿಂತಿದ್ದರು. ಕುಮಾರಸ್ವಾಮಿ ಮತ್ತು ಅವರ ಧರ್ಮಪತ್ನಿ ಸಹ ನನ್ನ ವಿರುದ್ಧ ನಿಂತಿದ್ದರು. ನಾವೇ ಇಬ್ಬರು ನಿಂತು ಸರ್ಕಾರನೂ ಮಾಡಿದ್ವಿ. ಅವರನ್ನು ಹಾಸನಕ್ಕೆ ಕಳಿಸ್ತೀನಿ ಅಂತ ಹೇಳುವಷ್ಟು ಮೂರ್ಖ ನಾನಲ್ಲ” ಎಂದರು.

ಈಶ್ವರಪ್ಪಗೆ ತಿರುಗೇಟು

ಡಿಕೆಶಿ ಮತ್ತೆ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಉತ್ತರಿಸಿ, “ಬಹಳ ಸಂತೋಷ, ಬೇಗ ಆ ಕೆಲಸ ಮಾಡಲಿ. ತಡ ಮಾಡುವುದು ಬೇಡ. ಈಶ್ವರಪ್ಪ ಒಬ್ಬ ಜಡ್ಜ್ ಆಗಲಿ” ಎಂದು ವ್ಯಂಗ್ಯವಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...