ಪ.ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ DCRE ಪೊಲೀಸ್ ಠಾಣೆಗಳು ಕಾರ್ಯೋನ್ಮುಖ: ಸಿಎಂ

Date:

ರಾಜ್ಯದಲ್ಲಿ ಪರಿಶಿಷ್ಠ ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ DCRE ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದರು.

ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ
ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಸಾಧನೆಯ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಘಪರಿವಾರದ ಹುನ್ನಾರಗಳನ್ನು ಅರಿತ ದಲಿತರು

ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಇಡೀ ದೇಶ ಸ್ಮರಿಸಿ, ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ದೇಶದ ಶಾಂತಿ ಸುವ್ಯವಸ್ಥೆ ಕಾಪಾಡುವುದರಲ್ಲಿ ಪೊಲೀಸ್ ಸಿಬ್ಬಂದಿ ಅಗ್ರಸ್ಥಾನದಲ್ಲಿದ್ದಾರೆ. ಕೋಮು ಶಕ್ತಿಗಳು, ದುಷ್ಟಶಕ್ತಿಗಳ ನಿಗ್ರಹದಲ್ಲಿ ನಿಮ್ಮ ಪಾತ್ರ ದೊಡ್ಡದಿದೆ ಎಂದರು.

ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದರು.

ಸಿಎಂ ಹೇಳಿದ ಮತ್ತಷ್ಟು ಪ್ರಮುಖ ಅಂಶಗಳು

*116 ಮಂದಿಗೆ ಅನುಕಂಪದ ಕೆಲಸ ನೀಡಿ ಆದೇಶ ಹೊರಡಿಸಿದ್ದೇವೆ.

*ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ.

*ಎಲ್ಲ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1000 ರೂಗಳಿಂದ 1500 ರೂಗೆ ಹೆಚ್ಚಿಸಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...