ಬಿಜೆಪಿ ಬಿಡಲು ಕೆಲವು ನಾಯಕರ ತೀರ್ಮಾನ: ಎಂ ಪಿ ರೇಣುಕಾಚಾರ್ಯ

Date:

  • ‘ಬಿಜೆಪಿಯಲ್ಲಿ ಸಮರ್ಥ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ’
  • ‘ಪಕ್ಷ ಬಿಡುವ ಬಗ್ಗೆ ನನ್ನಜೊತೆ ಕಾಲ್‌ ಮಾಡಿ ಮಾತನಾಡಿದ್ದಾರೆ’

ಬಿಜೆಪಿಯಲ್ಲಿ ಸಮರ್ಥ ನಾಯಕತ್ವದ ಕೊರತೆಯಿಂದ ಪಕ್ಷದ ಕೆಲ ಮಾಜಿ ಸಚಿವರು ಮತ್ತು ಮಾಜಿ ಶಾಸಕರು ಪಕ್ಷ ತೊರೆಯುವ ಯೋಚನೆ ಮಾಡಿದ್ದಾರೆ. ಈ ಬಗ್ಗೆ ಕೆಲವರು ನನ್ನೊಂದಿಗೆ ದೂರವಾಣಿ ಕರೆ ಮಾಡಿ ಪಕ್ಷ ಬಿಡುವ ಬಗ್ಗೆ ತಿಳಿಸಿದ್ದಾರೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಹೇಳಿದರು.

ದಾವಣಗೆರೆಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮವರಿಗೆ ನಾನು ಬೇಡ ಅನಿಸುತ್ತದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ” ಎಂದರು.

“ಹೊನ್ನಾಳಿ– ನ್ಯಾಮತಿ ತಾಲ್ಲೂಕು ಬರಗಾಲ ಪಟ್ಟಿಗೆ ಸೇರ್ಪಡೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರನ್ನೂ ಭೇಟಿಯಾಗಿದ್ದೇನೆ. ಇದನ್ನೇ ತಪ್ಪಾಗಿ ಬಿಂಬಿಸಲಾಗಿದೆ. ಪಕ್ಷದ ಹಿರಿಯರನ್ನು ಕಡೆಗಣಿಸಿರುವ ನೋವು ಇದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಎಲ್ಲೂ ಹೇಳಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋಗುವವರು ಹೋಗಲಿ ಎಂಬ ಸಂಸದರ ಹೇಳಿಕೆಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, “ಸಂಸದ ಸ್ಥಾನಕ್ಕೆ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿಲ್ಲ. ಪಕ್ಷದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗಿಂತ ನಾನು ಸೀನಿಯರ್. ಅವರಿಗಿಂತ ಅನುಭವವಿದೆ. ಹೋರಾಟದಲ್ಲಿ ಎರಡು ಬಾರಿ ಜೈಲು ಸೇರಿದ್ದೇನೆ. ಅವರ ತಂದೆ ಮಲ್ಲಿಕಾರ್ಜುನಪ್ಪ ಅವರ ಕಾಲದಲ್ಲಿ ಮೂರು ಹಾಗೂ ಸಿದ್ದೇಶ್ವರ ಅವರ ನಾಲ್ಕು ಚುನಾವಣೆ ಮಾಡಿದ್ದೇನೆ. ವಯಸ್ಸಿನಲ್ಲಿ ಅವರು ಹಿರಿಯರಷ್ಟೇ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಹಸಿದ ಹೊಟ್ಟೆಗಳು ಹೇಳುತ್ತಿರುವ ಕುಬೇರರ ಕಥೆ

“2019ರಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದರಿಂದ ಹೊನ್ನಾಳಿ–ನ್ಯಾಮತಿ ತಾಲ್ಲೂಕುಗಳ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಾಯದ ಮೇರೆಗೆ ಈ ಬಾರಿಯ ಚುನಾವಣೆಗೆ ಆಕಾಂಕ್ಷಿ ಎಂದು ಹೇಳಿದ್ದೇನೆ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

“ಪಕ್ಷದಲ್ಲಿ ಹಿರಿಯರಾದ ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌, ಮಾಡಾಳ್‌ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಅವರನ್ನು ರಾಜಕೀಯವಾಗಿ ಮುಗಿಸಿದರು. ದಾವಣಗೆರೆಯಲ್ಲಿ ಯಾರಾದರೂ ಸಂಸದರ ಸ್ಥಾನಕ್ಕೆ ಟಿಕೆಟ್ ಕೇಳಿದರೆ ಸಾಕು, ಅವರನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...