ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ನಿರ್ಧಾರ: ಗೃಹ ಸಚಿವ ಡಾ.ಜಿ. ಪರಮೇಶ್ವರ್

Date:

ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದು, ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ ಇಲ್ಲಿನ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರಕಾರಿ ನೌಕರರ ವಯೋಮಿತಿ ಸಡಿಲಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಒಂದು ಸಲಕ್ಕೆ ಅನ್ವಯ ಆಗುವಂತೆ ಸಡಿಲಿಕೆ ಮಾಡಲಾಗಿದೆ. 2027ರವರೆಗೆ ವಯೋಮಿತಿ ಸಡಿಲಿಸಿದ್ದೇವೆ. ನಮ್ಮ ಪೊಲೀಸ್ ಇಲಾಖೆಯಲ್ಲಿ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದೇವೆ ಎಂದರು.

ಕಾನ್‍ಸ್ಟೇಬಲ್, ಪಿಎಸ್‌ಐ, ಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳ ಶಾಶ್ವತ ವಯೋಮಿತಿ ಸಡಿಲಿಕೆ ಬಗ್ಗೆ ಪರಿಶೀಲನೆ ನಡೆದಿದೆ. ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ವಯೋಮಿತಿ ಇದೆ ಎಂಬ ಮಾಹಿತಿ ತರಿಸಿಕೊಂಡಿದ್ದೇವೆ. ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಆದೇಶ ಪ್ರಕಟಿಸುತ್ತೇವೆ ಎಂದು ಜಿ.ಪರಮೇಶ್ವರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಧರ್ಮಸ್ಥಳ ಪ್ರಕರಣʼ ತನಿಖೆ ಬೇಗ ಮುಗಿಸುವಂತೆ ಸೂಚಿಸಿದ್ದೇವೆ
ಧರ್ಮಸ್ಥಳ ಪ್ರಕರಣದ ತನಿಖೆ ವಿಳಂಬ, ಷಡ್ಯಂತ್ರ ಮಾಡಿದವರನ್ನು ಬಂಧಿಸದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅವರ ಬಂಧನಕ್ಕೆ ಕಾನೂನು ತೊಡಕುಗಳಿವೆ. ಅವುಗಳ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ. ಎಫ್‍ಎಸ್‍ಎಲ್ ವರದಿ ಇನ್ನೂ ಬಂದಿಲ್ಲ. ಎಸ್‍ಐಟಿಯವರು ಅವರ ಕೆಲಸ ಮಾಡುತ್ತಿದ್ದಾರೆ. ಇತ್ತೀಚಿನ ಸಾಕ್ಷ್ಯಗಳನ್ನು ಎಫ್‍ಎಸ್‍ಎಲ್‍ಗೆ ಕಳಿಸಲಾಗಿದೆ. ಎಲ್ಲವನ್ನೂ ಅಂತಿಮಗೊಳಿಸಬೇಕು. ಆಮೇಲೆ ಎಸ್‍ಐಟಿ ವರದಿ ನೀಡಲಿದೆ. ತನಿಖೆ ಬೇಗ ಮುಗಿಸುವಂತೆ ಸೂಚಿಸಿದ್ದೇವೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ಮಹೇಶ್ ಶೆಟ್ಟಿ ತಿಮರೋಡಿ ನಾಪತ್ತೆ ವಿಚಾರವಾಗಿ ಮಾತನಾಡಿದ ಜಿ.ಪರಮೇಶ್ವರ್, ನಾವು ಕಾನೂನು ಚೌಕಟ್ಟಿನಲ್ಲೇ ಮಾಡಬೇಕು. ಗಡಿಪಾರು ವಿಚಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಅದೇನಾಗಲಿದೆ ಮೊದಲು ನೋಡಬೇಕು. ತಿಮರೋಡಿ ಬಂಧನ, ಕ್ರಮಕ್ಕೆ ಕಾನೂನು ಚೌಕಟ್ಟಿದೆ. ಅದರ ಪ್ರಕಾರವೇ ಎಲ್ಲವನ್ನೂ ಮಾಡಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...