ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿ ಮರು ನೇಮಕಕ್ಕೆ ಆಗ್ರಹ

Date:

ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿಯನ್ನು ಮರು ನೇಮಕ ಮಾಡಲು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಒತ್ತಾಯಿಸಿದೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿ ಹಳ್ಳಿ ಸತೀಶ್‌, “ದಿನಾಂಕ 16-01-2026 ರಂದು ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 8(1)ಬಿ(ii) ರನ್ವಯ ಆಡಳಿತಾವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿರುತ್ತದೆ. ಆದರೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 8(1)ಬಿ(i) ರ ಅನ್ವಯ ಚುನಾಯಿತರಾಗಲು ಅರ್ಹರಾದ ವ್ಯಕ್ತಿಗಳನ್ನೊಳಗೊಂಡ ಆಡಳಿತ ಸಮಿತಿಯನ್ನು ನೇಮಕ ಮಾಡಲು ಅವಕಾಶವಿರುತ್ತದೆ. ರಾಜ್ಯ ಸರ್ಕಾರವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಗಳಿಗೆ ಅವಕಾಶ ನೀಡದೆ, ಅಧಿಕಾರಿಗಳಿಗೆ ಆಡಳಿತ ನಡೆಸುವ ಅವಕಾಶ ನೀಡುವ ಮೂಲಕ ಪ್ರಜಾಪ್ರಭುತ್ವ ವಿರೋದಿ ನಡೆಯನ್ನು
ನಡೆಯುತ್ತಿದೆ. ಈ ನಡೆಯನ್ನು ಕರ್ನಾಟಕ ಗ್ರಾಮ ಪಂಚಾಯತಿ ಸದಸ್ಯರ ಮಹಾಒಕ್ಕೂಟ ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

ಈ ಹಿಂದೆ 2020ರಲ್ಲಿ ಕೋವಿಡ್ ಕಾರಣದಿಂದಾಗಿ ಚುನಾಣೆ ನಡೆಸಲು ಸಾಧ್ಯವಾಗದೆ, ಗ್ರಾಮ ಪಂಚಾಯತಿಗಳ
ಅವಧಿ ಮುಕ್ತಾಯವಾದ ಸಂದರ್ಭದಲ್ಲಿ ಅಂದು ವಿರೋಧ ಪಕ್ಷದ ನಾಯಕರಾಗಿದ್ದ, ಇಂದಿನ ಮುಖ್ಯ ಮಂತ್ರಿಗಳಾದ ಸಿದ್ಧರಾಮಯ್ಯನವರು ಹಾಗೂ ಕೆಪಿಸಿಸಿ ಅಧ್ಯಕ್ಷರು, ಇಂದಿನ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಮೇ 12, 2020 ರಂದು ಜಂಟಿ ಪತ್ರಿಕಾ ಗೋಷ್ಠಿ ನಡೆಸಿ ಗ್ರಾಮ ಪಂಚಾಯತಿಗಳು ಪ್ರಜಾಪ್ರಭುತ್ವದ ತಳಪಾಯ, ಅವುಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸದೇ ಇರುವ ಆಡಳಿತ ಸಮಿತಿಯ ಅವಧಿಯನ್ನೇ 6 ತಿಂಗಳು ವಿಸ್ತರಿಸಬೇಕೆಂದು ಅಂದಿನ ಸರಕಾರವನ್ನು ಒತ್ತಾಯಿಸಿದ್ದನ್ನು ಸಂಘಟನೆ ಸರ್ಕಾರಕ್ಕೆ ನೆನಪಿಸ ಬಯಸುತ್ತದೆ. ಹಾಗೂ 90ರ ದಶಕದಲ್ಲಿ ಗ್ರಾಮ ಪಂಚಾಯಿತಿಗಳ ಅವಧಿಯನ್ನು ವಿಸ್ತರಿಸಿದ್ದ ಉದಾಹರಣೆಯನ್ನು ಸರ್ಕಾರದ ಗಮನಕ್ಕೆ ತರಬಯಸುತ್ತದೆ ಎಂದು ಹೇಳಿದ್ದಾರೆ.

ಮೇಲಿನ ಎಲ್ಲಾ ಅಂಶಗಳನ್ನು ಪರಿಗಣಿಸಿ ರಾಜ್ಯ ಸರ್ಕಾರವು ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು
ನೇಮಿಸುವ ಪ್ರಜಾಪ್ರಭುತ್ವ ವಿರೋಧಿ ಆದೇಶವನ್ನು ಹಿಂಪಡೆದು ಕಾಯ್ದೆಯ ಅನ್ವಯ ಆಡಳಿತಾವಧಿ
ಕೊನೆಗೊಳ್ಳುತ್ತಿರುವ ಆಡಳಿತ ಸಮಿತಿಯನ್ನು ಪುನರ್ ನೇಮಕ ಮಾಡಬೇಕೆಂದು ಸರ್ಕಾರವನ್ನು ಅಗ್ರಹಿಸಿದ್ದಾರೆ.

WhatsApp Image 2026 01 19 at 1.14.59 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...