ದೇವನಹಳ್ಳಿ ಚಲೋ | ‘ಪ್ರಾಣ ಬಿಟ್ಟೇವು, ಮಣ್ಣನ್ನು ಮಾರುವುದಿಲ್ಲ’; 13 ಗ್ರಾಮಗಳ ಜನ ಪ್ರತಿಜ್ಞೆ

Date:

“ಪ್ರಾಣ ಬೇಕಾದರೂ ಬಿಡುತ್ತೇವೆ, ಆದರೆ ನಮ್ಮ ಮಣ್ಣನ್ನು ಮಾತ್ರ ಮಾರಿಕೊಳ್ಳುವುದಿಲ್ಲ” ಎಂಬ ಪ್ರತಿಜ್ಞೆಯನ್ನು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ಕೈಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಗೆ ಸೇರಿದ 13 ಗ್ರಾಮಗಳಲ್ಲಿ 1777 ಎಕರೆ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ನಡೆಸುತ್ತಿರುವ ದೇವನಹಳ್ಳಿ ಚಲೋದಲ್ಲಿ ಈ ಪ್ರತಿಜ್ಞೆ ಸ್ವೀಕರಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ದೇವನಹಳ್ಳಿಯಲ್ಲಿ ಜಮಾಯಿಸಿದ್ದಾರೆ.

ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕೆರೆ ಬಚ್ಚೇನಹಳ್ಳಿ, ನಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮಟ್ಟಿಬಾರ್ಲು, ಮುದ್ದೇನಹಳ್ಳಿ, ಚನ್ನರಾಯಪಟ್ಟಣ, ತೆಲ್ಲೋಹಳ್ಳಿ, ಹ್ಯಾಡಾಳ ಗ್ರಾಮಗಳ ಮಹಿಳೆಯರು ಸಾಂಕೇತಿಕವಾಗಿ ತಂದ ತಮ್ಮ ಊರಿನ ಮಣ್ಣನ್ನು ಗಿಡಕ್ಕೆ ಸುರಿಯುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
6 14
13 ಗ್ರಾಮಗಳಿಂದ ತಂದ ಮಣ್ಣನ್ನು ಸಸಿಗೆ ಸುರಿದು ದೇವನಹಳ್ಳಿ ಚಲೋಗೆ ಚಾಲನೆ ನೀಡಲಾಯಿತು

ಚೀಮಾಚನಹಳ್ಳಿ ರೈತ ಮುಖಂಡ ರಮೇಶ್ ಮತ್ತು ಇತರರು ಪ್ರತಿಜ್ಞೆಯನ್ನು ಬೋಧಿಸಿದರು. ಸಾವಿರಾರು ಸಂಖ್ಯೆಯಲ್ಲಿ ಬಂದಿರುವ ಪ್ರತಿಯೊಬ್ಬರೂ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.

ಪ್ರತಿಜ್ಞೆ ಹೀಗಿದೆ: “ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನದ ಅಪಾಯದಲ್ಲಿರುವ 13 ಹಳ್ಳಿಗಳ ಜನರಾದ ನಾವು 1188 ದಿನಗಳಿಂದಲೂ ಒಂದೇ ಕುಟುಂಬದವರಂತೆ ಹೋರಾಡುತ್ತಾ ಬಂದಿದ್ದೇವೆ. ಕೃಷಿ ಬದುಕನ್ನು ನಾವು ಪ್ರೀತಿಸುತ್ತೇವೆ. ಅದನ್ನು ಉಳಿಸಿಕೊಳ್ಳಲು ಹೋರಾಡಿದ್ದೇವೆ. ಹಿರಿಯರ ಬಳುವಳಿಯನ್ನು ಕಳೆದುಕೊಳ್ಳಬಾರದು,  ಭೂಮಿ ಜೊತೆಗಿರುವ ನಂಟು ಅಳಿಯಬಾರದು ಎಂದು ಚಳವಳಿ ನಡೆಸುತ್ತಿದ್ದೇವೆ.”

“ನಮ್ಮನ್ನು ಒಡೆಯಲು ಪ್ರಯತ್ನ ಮಾಡಲಾಗುತ್ತಿದೆ. ದುರಾಸೆ ತೋರಿಸುವ ಪ್ರಯತ್ನ ಮಾಡಲಾಗುತ್ತದೆ. ಬೆದರಿಸಲು ಪ್ರಯತ್ನಿಸಲಾಗುತ್ತಿದೆ. ಸಮಸ್ತ ಜನರ ಮುಂದೆ ಪ್ರತಿಜ್ಞೆ ಮಾಡುತ್ತಿದ್ದೇವೆ. ನಮ್ಮ ಪ್ರಾಣವನ್ನು ಬೇಕಾದರೂ ಬಿಡುತ್ತೇವೆ. ಈ ಮಣ್ಣನ್ನು ನಾವು ಮಾರಿಕೊಳ್ಳುವುದಿಲ್ಲ. ನೀವು ಎಷ್ಟೇ ಪ್ರಯತ್ನ ಮಾಡಿದರೂ ಭೂಮಿಯನ್ನು ಮಾತ್ರ ಬಿಟ್ಟುಕೊಡುವುದಿಲ್ಲ”.

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿ ಹೊಮ್ಮಿರುವ ‘ಸಂಯುಕ್ತ ಹೋರಾಟ ಕರ್ನಾಟಕ’ವು ‘ದೇವನಹಳ್ಳಿ ಚಲೋ’ದ ನೇತೃತ್ವ ವಹಿಸಿದೆ. ಸುಮಾರು 15 ಸಂಘಟನೆಗಳು ಚನ್ನರಾಯಪಟ್ಟಣ ರೈತರಿಗೆ ಬೆಂಬಲ ಘೋಷಿಸಿವೆ.

ಹೋರಾಟಗಾರರಾದ ಎಚ್.ಎಸ್.ಬಸವರಾಜಪ್ಪ, ಪ್ರಕಾಶ್ ಕಮ್ಮರಡಿ, ಪ್ರಕಾಶ್ ರಾಜ್, ವರಲಕ್ಷ್ಮಿ, ಬಡಗಲಪುರ, ಚುಕ್ಕಿ ನಂಜುಂಡಸ್ವಾಮಿ, ವರಲಕ್ಷ್ಮಿ, ನೂರ್ ಶ್ರೀಧರ್, ಗುರುಪ್ರಸಾದ್ ಕೆರಗೋಡು, ಮುಖ್ಯಮಂತ್ರಿ ಚಂದ್ರು, ಮಾವಳ್ಳಿ ಶಂಕರ್, ಅನುಸೂಯಮ್ಮ, ಮೀನಾಕ್ಷಿ ಸುಂದರಂ, ಇಂದಿರಾ ಕೃಷ್ಣಪ್ಪ, ಶಿವಪ್ರಸಾದ್, ನಾಗರಾಜ್, ಶಿವಪ್ಪ, ಅಪ್ಪಣ್ಣ, ತಾರಾ ರಾವ್, ಚಂದ್ರಪ್ಪ ಹೊಸಕೆರೆ, ವಸಂತಕುಮಾರ್, ಕೆ.ಎನ್.ಉಮೇಶ್, ಶಿವಾನಂದ, ಮಹೇಶ್ ಪ್ರಭು, ಮಲ್ಲಯ್ಯ, ಲಕ್ಷ್ಮಿನಾರಾಯಣ ರೆಡ್ಡಿ, ನಾಗರತ್ನ, ಪ್ರಭಾ ಬೆಳವಂಗಲ, ಅಪ್ಪಣ್ಣ, ನಿರ್ವಾಣಪ್ಪ, ಶ್ರೀನಿವಾಸ್, ಸಿದ್ದರಾಜು, ನಂಜಪ್ಪ, ರಾಮೇಗೌಡ, ಅಶ್ವತ್ಥ, ರಾಮಚಂದ್ರಪ್ಪ, ಗೋವಿಂದರಾಜು, ಶಿವಮೊಗ್ಗ ನಾರಾಯಣಸ್ವಾಮಿ, ಮಹಿಮಾ ಪಾಟೀಲ್, ಎಸ್.ಜಿ.ಸಿದ್ದರಾಮಯ್ಯ ಹಲವಾರು ಜನರು ವೇದಿಕೆಯಲ್ಲಿದ್ದಾರೆ.

(ದೇವನಹಳ್ಳಿ ಚಲೋಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ನಿರೀಕ್ಷಿಸಿ.. ಚಾರಿತ್ರಿಕ ಚಳವಳಿಗೆ ಸಂಬಂಧಿಸಿದ ವಿವರಗಳಿಗಾಗಿ ಈದಿನ ಡಾಟ್ ಕಾಮ್ ಓದುತ್ತಿರಿ..)

4 21
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...