ದೇವನಹಳ್ಳಿ ರೈತ ಹೋರಾಟ | ಜು.15ಕ್ಕೆ ರೈತಪರ ನಿರ್ಧಾರ ಹೊರಬರದಿದ್ದರೆ ಕ್ರಾಂತಿ ಹೋರಾಟಕ್ಕೆ ಸಮಿತಿ ನಿರ್ಧಾರ

Date:

ಜು.15ರ ಸಭೆಯಲ್ಲಿ ಸರ್ಕಾರದಿಂದ ರೈತಪರ ನಿರ್ಧಾರ ಹೊರಬರದಿದ್ದರೆ ಸಂಯುಕ್ತ ಕಿಸಾನ್‌ ಮೋರ್ಚಾದ ಬೆಂಬಲದೊಂದಿಗೆ ಹೋರಾಟ ಇನ್ನಷ್ಟು ತೀವ್ರರೂಪ ಪಡೆಯಲಿದೆ ಎಂಬ ತೀರ್ಮಾನವನ್ನು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಕೈಗೊಂಡಿದೆ.

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯ ಕುರಿತು ಹೋರಾಟ ಸಮಿತಿಯ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, “ಹೋರಾಟ ಸಮಿತಿಯು, ಮುಖ್ಯಮಂತ್ರಿಗಳ ಈ ಮನವಿಯನ್ನು ಪರಿಗಣಿಸಿ, ನೋಟಿಫಿಕೇಶನ್‌ ರದ್ದು ಮಾಡಲು ಇರುವ ಕಾನೂನು ತೊಡಕುಗಳನ್ನು ಪರಿಶೀಲಿಸಲು ಮತ್ತು ಸಮಾಲೋಚಿಸಲು ಸಮಯಾವಕಾಶ ಕೇಳುತ್ತಿರುವುದರಿಂದ, ಚಳುವಳಿಗಾರರು ಅದನ್ನು ಒಪ್ಪಿದ್ದು ಇದೇ ತಿಂಗಳ 15ರಂದು ಮುಂದಿನ ಸಭೆ ನಿಗದಿಯಾಗಿದೆ” ಎಂದು ತಿಳಿಸಿದೆ.

“ಇನ್ನು ಎಷ್ಟು ದಿನಗಳು ಕಳೆದರೂ ಭೂಮಿ ಕೊಡುವುದಿಲ್ಲ ಎಂಬ ನಿರ್ಧಾರ ಬದಲಾಗುವುದಿಲ್ಲ ಎಂಬುದನ್ನು ಸಭೆಯಲ್ಲಿ ಎಲ್ಲರ ಗಮನಕ್ಕೆ ತರಲಾಗಿದೆ. ಮುಂದಿನ ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಪಡಿಸುವ ನಿರ್ಧಾರ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳನ್ನು ರೈತರು ಮತ್ತು ಹೋರಾಟಗಾರರು ಆಗ್ರಹಿಸಿದ್ದಾರೆ. ಮುಂದಿನ ಸಭೆಯಲ್ಲಿ ಭೂಸ್ವಾಧೀನವನ್ನು ಕೈಬಿಡದಿದ್ದರೆ ಹೋರಾಟವನ್ನು ತೀವ್ರಗೊಳಿಸುವುಗಾಗಿ ರೈತ ಪ್ರತಿನಿಧಿಗಳು ಎಚ್ಚರಿಸಿದ್ದಾರೆ. ಈಗಾಗಲೇ ಹಳ್ಳಿಗಳಿಂದ ಚನ್ನರಾಯಪಟ್ಟಣ ಹೋಬಳಿ ಕೇಂದ್ರಕ್ಕೆ, ಅಲ್ಲಿಂದ ದೇವನಹಳ್ಳಿಗೆ ಮತ್ತು ನಂತರ ಬೆಂಗಳೂರಿನವರೆಗೆ ಹಬ್ಬಿ, ಹೋರಾಟ ದೇಶದ ಗಮನ ಸೆಳೆದಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ಸಭೆಯ ತನಕ ಹೋರಾಟ ಮುಂದುವರೆಸುವ ನಿರ್ಧಾರ ಕೈಗೊಂಡಿದ್ದು, ಎಲ್ಲ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರು ಚನ್ನರಾಯಪಟ್ಟಣದ ಹದಿಮೂರು ಹಳ್ಳಿಗಳಿಗೆ ತೆರಳಿ ರೈತರ ಸಭೆಗಳನ್ನು ನಡೆಸಲು ಮತ್ತು “ನಮ್ಮ ಭೂಮಿ ನಮ್ಮ ಹಕ್ಕು, ಯಾವ ಕಂಪೆನಿಗಳಿಗೂ ಬಿಟ್ಟುಕೊಡುವುದಿಲ್ಲ” ಎಂಬ ನಾಮ ಫಲಕ ಹಾಕಲು ಸಮಿತಿ ತೀರ್ಮಾನಿಸಿದೆ. ಜೊತೆಗೆ ಇದೇ ಜುಲೈ 9ರಂದು ನಡೆಯುವ ಕಾರ್ಮಿಕರ ರಾಷ್ಟ್ರಮಟ್ಟದ ಸಾರ್ವತ್ರಿಕ ಹೋರಾಟದ ಭಾಗವಾಗಿ ಕರ್ನಾಟಕದಲ್ಲಿ ದೇವನಹಳ್ಳಿ ಭೂಮಿ ಹೋರಾಟದ ಹಕ್ಕೊತ್ತಾಯವನ್ನೂ ಒಳಗೊಳ್ಳಲಿದ್ದು, ಎಲ್ಲ ಸಂಘಟನೆಗಳೂ ಸೇರಿ ಮುಷ್ಕರವನ್ನು ಯಶಸ್ವಿಗೊಳಿಸಲು ನಿರ್ಧರಿಸಿದೆ.

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಭೂಸ್ವಾಧೀನ ರದ್ದುಪಡಿಸಬೇಕೆಂದು ಆಗ್ರಹಿಸಿ ʼ ಚಲೋ ಸುದೀರ್ಘ 1188 ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ನಾಡಿನ ಎಲ್ಲ ಜನಪರ, ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಮಹಿಳಾ ಸಂಘಟನೆಗಳು ಬೆಂಬಲ ನೀಡಿ, ʼಸಂಯುಕ್ತ ಹೋರಾಟ ಕರ್ನಾಟಕʼದ ಬೆಂಬಲದೊಂದಿಗೆ ಜೂನ್‌ 25ರಂದು ನಡೆದ ʼದೇವನ ಹಳ್ಳಿ ಚಲೋʼ ಸಂದರ್ಭದಲ್ಲಿ ಪೊಲೀಸ್‌ ದೌರ್ಜನ್ಯದ ನಂತರ ಹೋರಾಟ ವಿಸ್ತಾರಗೊಂಡಿತ್ತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜೂನ್‌ 27ರಿಂದ ನಿರಂತರ ಪ್ರತಿಭಟನಾ ಧರಣಿ ನಡೆಯುತ್ತಿದೆ.

ಈ ಹೋರಾಟದ ಅಂಗವಾಗಿ ಜುಲೈ 4ರಂದು ಮುಖ್ಯಂತ್ರಿಗಳು ಕರೆದಿದ್ದ ಸಭೆಯಲ್ಲಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿಗಳು ಮತ್ತು ಹಲವು ಸಚಿವರು ಮತ್ತು ಅಧಿಕಾರಿಗಳು ಚರ್ಚೆ ನಡೆಸಿದರು. ಈ ವಿಚಾರದಲ್ಲಿ ಈಗಾಗಲೇ ಫೈನಲ್‌ ನೋಟಿಫಿಕೇಶನ್‌ ಆಗಿರುವುದರಿಂದ ಭೂಸ್ವಾಧೀನ ರದ್ದುಪಡಿಸಲು ಇರುವ ಕಾನೂನು ತೊಡಕುಗಳನ್ನು ಹೇಗೆ ನಿವಾರಿಸುವುದೆಂಬ ಚರ್ಚೆ ಮಾಡಬೇಕಿರುವುದರಿಂದ 10 ದಿನಗಳ ಸಮಯಾವಕಾಶ ಬೇಕೆಂದು ಮುಖ್ಯಮಂತ್ರಿಗಳು ಹೋರಾಟ ಸಮಿತಿಯ ಮುಂದೆ ಮನವಿ ಮಾಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...