ದೇವನೂರ ಮಹಾದೇವರಿಗೆ ವೈಕಂ ಪ್ರಶಸ್ತಿ ಪ್ರದಾನ ಮಾಡಿದ ತಮಿಳುನಾಡು ಸಿಎಂ

Date:

ವೈಕಂ ಹೋರಾಟದ ನೆನಪಿನಲ್ಲಿ ತಮಿಳುನಾಡು ಸರ್ಕಾರ ಕೊಡಮಾಡುವ 2024ನೇ ಸಾಲಿನ ‘ವೈಕಂ’ ಪ್ರಶಸ್ತಿಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಸ್ವೀಕರಿಸಿದ್ದಾರೆ. ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಕೇರಳದ ವೈಕಂನಲ್ಲಿ ‘ವೈಕಂ ಹೋರಾಟ’ ನಡೆದು ನೂರು ವರ್ಷಗಳಾಗಿವೆ. ಹೋರಾಟದಲ್ಲಿ ಪೆರಿಯಾರ್ ರಾಮಸ್ವಾಮಿ ಅವರು ಭಾಗಿಯಾಗಿದ್ದರ ಶತಮಾನೋತ್ಸವ ಸಮಾರಂಭ ಮತ್ತು ಪರಿಯಾರ್ ಸ್ಮಾರಕ ಉದ್ಘಾಟನಾ ಕಾರ್ಯಕ್ರಮವನ್ನು ಗುರುವಾರ ವೈಕಂನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪಾಲ್ಗೊಂಡಿದ್ದರು. ಇದೇ ಕಾರ್ಯಕ್ರಮದಲ್ಲಿ ತಮಿಳುನಾಡು ಸರ್ಕಾರವು ದೇವನೂರರಿಗೆ ಪ್ರಶಸ್ತಿ ಪ್ರದಾನ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶಸ್ತಿ ಸ್ವೀಕರಿಸಿದ ದೇವನೂರ ಮಹಾದೇವ ಅವರು ತಾವು ಬರೆದಿರುವ ‘ಆರ್‌ಎಸ್‌ಎಸ್‌ ಆಳ ಅಗಲ’ ಪುಸ್ತಕದ ಕನ್ನಡ, ಇಂಗ್ಲಿಷ್ ಮತ್ತು ಮಲೆಯಾಳಂ ಅವತರಣಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮತ್ತು ಕನ್ನಡ, ಇಂಗ್ಲಿಷ್, ತಮಿಳು ಅವತರಣಿಕೆಯನ್ನು ತಮಿಳುನಾಡು ಸಿಎಂ ಸ್ಟಾಲಿನ್‌ ಅವರಿಗೂ ನೀಡಿದರು.

ವೈಕಂ ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಸ್ವರ್ಣಲೇಪಿತ ಪದಕವನ್ನು ಒಳಗೊಂಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...