ದೇವರಾಜ ಅರಸು ಪ್ರಶಸ್ತಿ | ಅರ್ಹರ ಆಯ್ಕೆಗೆ ಸಮಿತಿ ರಚನೆ, ಅಧ್ಯಕ್ಷರಾಗಿ ಸಿ ಎಸ್ ದ್ವಾರಕಾನಾಥ್ ನೇಮಕ

Date:

2025-26ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ನೀಡಲಾಗುವ ಡಿ.ದೇವರಾಜ ಅರಸು ಪ್ರಶಸ್ತಿಗೆ ಅರ್ಹರನ್ನು ಶಿಫಾರಸ್ಸು ಮಾಡಲು ಅಧ್ಯಕ್ಷರು ಮತ್ತು ಸದಸ್ಯರನ್ನೊಳಗೊಂಡ ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ.

ದೇವರಾಜ ಅರಸು ಅವರ ಜನ್ಮದಿನದಂದು ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ವ್ಯಕ್ತಿ/ಸಂಘ/ಸಂಸ್ಥೆಗೆ ಡಿ.ದೇವರಾಜ ಅರಸು ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಅದರಂತೆ 2025-26ನೇ ಸಾಲಿಗೆ ಡಿ. ದೇವರಾಜ ಅರಸು ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡುವ ಸಲುವಾಗಿ ಆಯ್ಕೆ ಸಮಿತಿ ರಚಿಸಲಾಗಿದೆ.

ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್‌ ದ್ವಾರಕಾನಾಥ್‌ ನೇಮಕವಾಗಿದ್ದಾರೆ. ಆಯ್ಕೆ ಸಮತಿಯ ಸದಸ್ಯರಾಗಿ ‘ಈ ದಿನ.ಕಾಂ’ನ ಸಂಪಾದಕರು ಮತ್ತು 2015ರಲ್ಲಿ ದೇವರಾಜ ಅರಸು ಹಿಂದುಳಿದ ಜಾತಿಗಳ ಅಭಿವೃದ್ಧಿ ನಿಗಮದ ವತಿಯಿಂದ ದೇವರಾಜ ಅರಸು ಪುಸ್ತಕ ಪ್ರಕಟಣೆಯ ಸಂಪಾದಕೀಯ ಮಂಡಳಿಯ ಸಂಪನ್ಮೂಲ ವ್ಯಕ್ತಿಯಾಗಿದ್ದ ಬಸವರಾಜು ಮೇಗಲಕೇರಿ ನೇಮಕವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ಪ್ರಾಂಶುಪಾಲ ಬಿ ಶಿವರಾಮ ಶೆಟ್ಟಿ, ಡಾ.ಯು.ಪಿ.ಚಂದ್ರಶೇಖರ್‌, ಡಾ. ಲಕ್ಷ್ಮಣ ದಸ್ತಿ ಆಯ್ಕೆ ಸಮಿತಿ ಸದಸ್ಯರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು, ದೇವರಾಜ ಅರಸು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಪದನಿಮಿತ್ತ ಸದಸ್ಯರಾಗಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಸಮಿತಿಯ ಕಾರ್ಯದರ್ಶಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...