ಧರ್ಮಸ್ಥಳ ಪ್ರಕರಣ | ಹೊಸ ಅಧ್ಯಾಯ ಆರಂಭ, ಬಂಗ್ಲೆಗುಡ್ಡೆಯಲ್ಲಿ 5 ತಲೆಬುರುಡೆ, 100 ಮೂಳೆ ಪತ್ತೆ!

Date:

ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ಸ್ನಾನಘಟ್ಟದ ​​ಬಳಿಯ ಬಂಗ್ಲೆಗುಡ್ಡೆ ಅರಣ್ಯದಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಅಸ್ಥಿಪಂಜರಗಳ ಅವಶೇಷಗಳನ್ನು ವಶಪಡಿಸಿಕೊಂಡಿದೆ.

ಬಂಗ್ಲೆಗುಡ್ಡೆ ಅರಣ್ಯದಲ್ಲಿನ ಶೋಧದ ವೇಳೆ 5 ತಲೆಬುರುಡೆಗಳು ಮತ್ತು 100 ಮೂಳೆಗಳು ಸಿಕ್ಕಿರುವುದಾಗಿ ಎಸ್‌ಐಟಿ ಮೂಲಗಳು ಖಚಿತ ಪಡಿಸಿದ್ದು, ಧರ್ಮಸ್ಥಳ ಗ್ರಾಮಕ್ಕೆ ಅಂಟಿಕೊಂಡ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಹೊಸ ಸ್ವರೂಪ ಸಿಕ್ಕಂತಾಗಿದೆ.

ಧರ್ಮಸ್ಥಳ ಪ್ರಕರಣ ಇನ್ನೇನು ಮುಗಿದೋಯ್ತು ಎನ್ನುವಾಗಲೇ ಹೊಸ ಅಧ್ಯಾಯ ಆರಂಭವಾಗಿದೆ. ಮೊದಲ ಶೋಧ ಕಾರ್ಯದಲ್ಲಿ ಗುರುತಿಸಿದ ಸ್ಥಳಗಳಲ್ಲಿ 17 ಗುಂಡಿ ತೋಡಿದರೂ ಮೃತ ಶವಗಳ ಅವಶೇಷಗಳು ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿರಲಿಲ್ಲ. ಆದರೆ, ಈಗ ಎರಡನೇ ಹಂತದಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಮೊದಲ ದಿನವೇ ಮಾನವನ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2012ರ ಅಕ್ಟೋಬರ್ 9 ರಂದು ಧರ್ಮಸ್ಥಳದಲ್ಲಿ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿತ್ತು ಎಂದು ಎನ್ನುವ ಗಂಭೀರ ಆರೋಪ ಧರ್ಮಸ್ಥಳದಿಂದ ದೂರವಾಗಿಲ್ಲ. ಎಸ್‌ಐಟಿ ಶೋಧದ ನಡುವೆ ಮೃತ ಸೌಜನ್ಯ ಅವರ ಮಾವ ವಿಠ್ಠಲ್ ಗೌಡ ಅವರು ಈ ಹಿಂದೆ ಹೇಳಿಕೆ ನೀಡಿದ್ದನ್ನು ಅನುಸರಿಸಿ ಎಸ್ಐಟಿ ಶೋಧ ನಡೆಸುತ್ತಿದೆ.

“ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆಗಳು, ಮೂರ್ನಾಲ್ಕು ತಲೆಬುರುಡೆಯನ್ನು ಸ್ಥಳ ಮಹಜರು ವೇಳೆ ನೋಡಿದ್ದೆ” ಎಂದು ವಿಡಿಯೋ ಮಾಡಿ ವಿಠಲ್ ಗೌಡ ಹರಿಬಿಟ್ಟಿದ್ದರು. ಎಸ್‌ಐಟಿ ಅಧಿಕಾರಿಗಳ ಸಮ್ಮುಖದಲ್ಲೇ ನೋಡಿದ್ದಾಗಿಯೂ ಹೇಳಿರುವುದರಿಂದ ಬುಧವಾರ (ಸೆ.17) ಮತ್ತೆ ಬಂಗ್ಲೆಗುಡ್ಡೆ ಸ್ಥಳ ಮಹಜರು ಮಾಡಲು ಎಸ್ಐಟಿ ತಂಡ ಆಗಮಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...