ಧರ್ಮಸ್ಥಳ ಪ್ರಕರಣ | ದೂರುದಾರ ಚಿನ್ನಯ್ಯ ಜಾಮೀನಿನ ಮೇಲೆ ಬಿಡುಗಡೆ

Date:

ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಸಾಮೂಹಿಕ ಮತ್ತು ಅಕ್ರಮವಾಗಿ ಹೂತುಹಾಕಿದ್ದ ಪ್ರಕರಣದ ಸಾಕ್ಷಿ-ದೂರುದಾರ ಸಿ.ಎನ್ ಚಿನ್ನಯ್ಯ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪ್ರಕರಣದಲ್ಲಿ ಸುಳ್ಳು ಸಾಕ್ಷಗಳನ್ನು ನೀಡಿದ್ದಾರೆಂಬ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

ಸುಮಾರು ವರ್ಷಗಳ ಹಿಂದೆ ಹಲವು ಮೃತದೇಹಗಳನ್ನು ನಾನೇ ಹೂತುಹಾಕಿದ್ದೇನೆ. ನನಗೆ ಧರ್ಮಸ್ಥಳ ದೇವಾಲಯಕ್ಕೆ ಸಂಬಂಧಿಸಿದವರು ಕರೆ ಮಾಡಿ ಮೃತದೇಹಗಳನ್ನು ಹೂತುಹಾಕಲು ಸೂಚಿಸುತ್ತಿದ್ದರು. ಅವರ ಆದೇಶದಂತೆ ನಾನು ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮೃತದೇಹಗಳ ಅಂತ್ಯಕ್ರಿಯೆ ನಡೆಸಿದ್ದೇನೆ. ಅವುಗಳ ಕಳೇಬರಗಳಿರುವ ಸ್ಥಳಗಳನ್ನು ತೋರಿಸುತ್ತೇನೆಂದು ಚಿನ್ನಯ್ಯ ಖುದ್ದು ನ್ಯಾಯಾಲಯದ ಎದುರು ದೂರು ದಾಖಲಿಸಿದ್ದರು.

ಅವರ ದೂರಿನ ಆಧಾರದ ಮೇಲೆ ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಚಿನ್ನಯ್ಯ ತೋರಿಸಿದ ಹಲವು ಸ್ಥಳಗಳಲ್ಲಿ ಕಳೇಬರಗಳು ದೊರೆಯದಿದ್ದರೂ, ಕೆಲವೆಡೆ ಕೆಲವು ಕಳೇಬರಗಳು ದೊರೆತಿದ್ದವು. ಆದಾಗ್ಯೂ, ಸುಳ್ಳು ಸಾಕ್ಷ್ಯ ನೀಡಿದ್ದಾರೆಂಬ ಆರೋಪದ ಮೇಲೆ ಚಿನ್ನಯ್ಯರನ್ನು ಬಂಧಿಸಲಾಗಿತ್ತು. ಅವರನ್ನು ಶಿವಮೊಗ್ಗದ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಮೀನು ಕೋರಿ ಚಿನ್ನಯ್ಯ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ನವೆಂಬರ್ 24ರಂದು 1 ಲಕ್ಷ ರೂ. ಭದ್ರತಾ ಠೇವಣಿಯ ಷರತ್ತಿನ ಮೇಲೆ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಇದೀಗ, ಜಾಮೀನು ದೊರೆತು 24 ದಿನಗಳ ಬಳಿಕ, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಚಿನ್ನಯ್ಯ ಅವರ ಪತ್ನಿ ಮಲ್ಲಿಕಾ ಮತ್ತು ಸಹೋದರಿ ಮಂಗಳೂರಿನಿಂದ ಶಿವಮೊಗ್ಗಗೆ ಬಂದಿದ್ದರು. ಚಿನ್ನಯ್ಯ ಅವರ ವಕೀಲರು ಜಾಮೀನು ಅರ್ಜಿ ದಾಖಲೆಗಳನ್ನು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ರಂಗನಾಥ್ ಅವರಿಗೆ ಸಲ್ಲಿಸಿದ್ದರು. ಅವರನ್ನು ಬಿಡುಗಡೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...