ಧರ್ಮಸ್ಥಳ ಪ್ರಕರಣ | ತನಿಖೆಗಾಗಿ SIT ರಚನೆಗೆ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಆಗ್ರಹ

Date:

ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಹಲವಾರು ಅತ್ಯಾಚಾರ, ಕೊಲೆ ಹಾಗೂ ಗೌಪ್ಯವಾಗಿ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಬೇಕು. ಪ್ರಕರಣದ ಪ್ರಮುಖ ಸಾಕ್ಷಿ-ಫಿರ್ಯಾದಿಗೆ ಭದ್ರತೆ ಮತ್ತು ರಕ್ಷಣೆ ಒದಗಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಆಗ್ರಹಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಅನಾಮಧೇಯ ಪ್ರಮುಖ ಸಾಕ್ಷಿಯು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ತನ್ನ ಹೇಳಿಕೆ ದಾಖಲಿಸಿದ್ದಾರೆ. ಆದಾಗ್ಯೂ, ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬುದನ್ನು ಖಾಲಿ ಪೇಪರ್ ಮೇಲೆ ಗುರುತು ಮಾಡಿಕೊಡುವಂತೆ ಸಾಕ್ಷಿ ಫಿರ್ಯಾದಿ ಮೇಲೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಆತನ ಹೇಳಿಕೆಗಳನ್ನು ಸೋರಿಕೆ ಮಾಡಲಾಗುತ್ತಿದೆ. ಇದೆಲ್ಲವನ್ನೂ ಸರ್ಕಾರ ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಎಲ್ಲ ರಾಜ್ಯಗಳಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಇದು ಪರೋಕ್ಷ NRC, CAA ಜಾರಿ ಅಲ್ಲವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆತನ ಹೇಳಿಕೆ ದಾಖಲಿಸಿಕೊಂಡಿರುವ ತನಿಖಾಧಿಕಾರಿಯು ಯಾರಿಗೋ ಕರೆ ಮಾಡಿ, ಅವರು ಸೂಚಿಸಿದ್ದಂತೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂಬ ಗಂಭೀರ ಆರೋಪಗಳಿವೆ. ಆದ್ದರಿಂದ, ತಕ್ಷಣವೇ ತನಿಖಾ ತಂಡವನ್ನು ಬದಲಿಸಬೇಕು. ಹೈಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ರಚಿಸಬೇಕು. ಸಾಕ್ಷಿ ಫಿರ್ಯಾದುದಾರ ಮತ್ತು ಆತನ ವಕೀಲರಿಗೆ ಬೆದರಿಕೆ ಇದ್ದು, ಇಬ್ಬರೂ ತಕ್ಷಣವೇ ಭದ್ರತೆ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್, ”ಬಿಎನ್ಎಸ್ 183ನೇ ಸೆಕ್ಷನ್ ಅಡಿಯಲ್ಲಿ ಸಾಕ್ಷಿ ಫಿರ್ಯಾದಿ ನೀಡಿದ ಹೇಳಿಕೆ ಸಾಕ್ಷ್ಯವಾಗುತ್ತದೆ. ಈ ಹೇಳಿಕೆಗಳು ಖಾಸಗಿ ವ್ಯಕ್ತಿಗಳಿಗೆ ಸೋರಿಕೆಯಾಗುತ್ತಿದೆ. ಇದನ್ನು ತಪ್ಪಿಸಿ ಎಂದು ವಕೀಲರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಸರಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವಕೀಲರಾದ ಬಾಲನ್, ಉಮಾಪತಿ, ಸುಧಾ ಕಟ್ವಾ, ನರಸಿಂಹಮೂರ್ತಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...